ಮೀಸಲಾತಿ ಹೆಸರಲ್ಲಿ ಸಮಾಜ ಒಡೆವ ಸಿದ್ದು​​​​​​​; ರಾಜನಾಥ್‌ ಸಿಂಗ್‌


Team Udayavani, Dec 18, 2017, 6:00 AM IST

17BNP-(5).jpg

ಬೆಂಗಳೂರು: ಕರ್ನಾಟಕದಲ್ಲಿ ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಪ್ರಯತ್ನಿಸಿ ವಿಫ‌ಲವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಗಂಭೀರ ಆರೋಪ ಮಾಡಿದ್ದಾರೆ.

ನನಗೆ ಸಿಕ್ಕಿರುವ ಮಾಹಿತಿಯಂತೆ ಇಲ್ಲಿನ ಕಾಂಗ್ರೆಸ್‌ ಸರ್ಕಾರ ಸಂವಿಧಾನದಲ್ಲಿ ಅವಕಾಶವಿಲ್ಲದಿದ್ದರೂ, ಕೇವಲ ಮುಸ್ಲಿಮರ ಕಣ್ಣಿಗೆ ಮಣ್ಣೆರಚಲು ಮತ್ತು ಆ ಸಮುದಾಯವನ್ನು ಹಾದಿ ತಪ್ಪಿಸಲು ಮೀಸಲಾತಿಯ ವ್ಯವಸ್ಥೆ ಮಾಡಿತ್ತು. ಆದರೆ, ಅದನ್ನು ನ್ಯಾಯಾಲಯ ಸಾರಾಸಗಟವಾಗಿ ತಳ್ಳಿ ಹಾಕಿತು ಎಂದರು.

ರಾಜ್ಯ ಬಿಜೆಪಿ ವತಿಯಿಂದ ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಮೀಸಲಾತಿ ಯಾರಿಗೆ ಕೊಡಬೇಕು, ಯಾರಿಗೆ ಕೊಡಬಾರದು ಅನ್ನುವುದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದು. ಆದರೆ, ಸಂವಿಧಾನದಲ್ಲಿ ಅವಕಾಶ ಇಲ್ಲದಿರುವಾಗ ಮೀಸಲಾತಿಯ ಆಮಿಷವೊಡ್ಡುವುದು ಆ ಸಮಾಜಕ್ಕೆ ಮಾಡುವ ಅತಿದೊಡ್ಡ ಮೋಸವಾಗಿದೆ ಎಂದರು.

ರಾಜ್ಯದಲ್ಲಿ ಜಾತಿ-ಮತ-ಧರ್ಮಗಳ ನಡುವೆ ಸಂಘರ್ಷ ಮತ್ತು ತಿಕ್ಕಾಟ ಸೃಷ್ಟಿಸುವ ಕೆಲಸ ಕಾಂಗ್ರೆಸ್‌ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಮಾಡುತ್ತಿದೆ. ಈಗ ಟಿಪ್ಪು ಜಯಂತಿ ಹೆಸರಲ್ಲಿ ಹೊಸದೊಂದು ವಿವಾದ ಹುಟ್ಟು ಹಾಕಲಾಗಿದೆ. ನಾನು ಇತಿಹಾಸದ ಸರಿ-ತಪ್ಪುಗಳ ಬಗ್ಗೆ ಮಾತನಾಡುವುದಿಲ್ಲ. ಆದರೆ, ವಿವಾದಿತ ವಿಷಯವೊಂದನ್ನು ರಾಜಕಾರಣಕ್ಕೆ ಎಳೆದು ತರುವುದರ ಅವಶ್ಯತೆ ಏನಿತ್ತು. ಸ್ವಸ್ಥ ರಾಜಕಾರಣದಲ್ಲಿ ವಿಶ್ವಾಸವಿರುವ ಯಾರೇ ಆಗಲಿ ಸಮಾಜವನ್ನು ಜೋಡಿಸಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಾರೆಯೇ ಹೊರತು, ಸಮಾಜ ವಿಭಜಿಸುವುದಿಲ್ಲ. ಹಾಗೊಂದು ವೇಳೆ ಮಹಾಪುರಷರ ಜಯಂತಿ, ಉತ್ಸವಗಳನ್ನು ಮಾಡಬೇಕಾದರೆ, ಕಿತ್ತೂರು ರಾಣಿ ಚೆನ್ನಮ್ಮ, ಹಂಪಿಯ ಯಶೋಗಾಥೆ, ಕೆಂಪೇಗೌಡ ಜಯಂತಿ, ಸರ್‌.ಎಂ. ವಿಶ್ವೇಶ್ವರಯ್ಯ ಉತ್ಸವಗಳನ್ನು ಆಚರಿಸಲಿ ಎಂದರು.

ಭ್ರಷ್ಟಾಚಾರದ ಸಾಂಸ್ಥಿàಕರಣ: ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರವನ್ನು ಸಾಂಸ್ಥಿàಕರಣಗೊಳಿಸಿದೆ. ಇಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಮಾಧ್ಯಮಗಳಲ್ಲಿ ಓದಿದಾಗ ಮನಸ್ಸಿಗೆ ತುಂಬಾ ವೇದನೆ ಆಗುತ್ತದೆ. ಸ್ಟೀಲ್‌ ಬ್ರಿಜ್‌ ಹಗರಣ, 300 ಕೋಟಿ ರೂ. ಲ್ಯಾಪ್‌ಟಾಪ್‌ ಹಗರಣ, ಗಾರ್ಬೆಜ್‌ ಹಗರಣ, ಕಸದಲ್ಲಿ ದುಡ್ಡು ಹೊಡೆಯುವುದು ಹೇಗೆ ಎಂದು ದೇಶದಲ್ಲಿ ಯಾರಾದರೂ ತೋರಿಸಿಕೊಟ್ಟಿದ್ದರೆ, ಆದು ಕರ್ನಾಟಕದ ಕಾಂಗ್ರೆಸ್‌ ಸರ್ಕಾರ. ಲೋಕಾಯುಕ್ತ ದುರ್ಬಲಗೊಳಿಸಿ, ಸರ್ಕಾರದ ಅಣತಿಯಂತೆ ಕೆಲಸ ಮಾಡುವ ಎಸಿಬಿ ರಚಿಸಲಾಗಿದೆ. ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ್ದು, ಪ್ರತಿಯೊಬ್ಬ ಪ್ರಜೆಯ ಮೇಲೆ 38 ಸಾವಿರ ರೂ. ಸಾಲ ಇದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಪ್ರತಿ ನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಮರೆತು, ಸಮಾಜವನ್ನು ಒಡೆಯುವ ಧ್ರುವೀಕರಣದ ರಾಜಕಾರಣ ಮಾಡುವ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರಿದಲ್ಲಿ ಮುಂದುವರಿಯವ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ರಾಜ್‌ನಾಥ್‌ಸಿಂಗ್‌ ಹೇಳಿದರು.

ಆಡಳಿತದ ಅಲ್ಲ, ವ್ಯವಸ್ಥೆಯ ಪರಿವರ್ತನೆ:
ಬಿಜೆಪಿ ಪರಿವರ್ತನಾ ಯಾತ್ರೆಯ ಉದ್ದೇಶ ಕೇವಲ ಆಡಳಿತದ ಪರಿವರ್ತನೆ ಅಲ್ಲ, ಬದಲಾಗಿ ವ್ಯವಸ್ಥೆಯಲ್ಲಿ ಪರಿವರ್ತನೆಯಾಗಿ ಕರ್ನಾಟಕವನ್ನು ವೇಗವಾಗಿ ವಿಕಾಸಪಥದಲ್ಲಿ ಮುನ್ನೆಡಿಸಿಕೊಂಡು ಹೋಗಲು ಪರಿವರ್ತನೆ ತರಬೇಕಾಗಿದೆ. ಪರಿವರ್ತನಾ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ಹಾಗೂ ಕಾರ್ಯಕರ್ತರ ಉತ್ಸಾಹ ನೋಡಿದರೆ, ಮುಂದಿನ ಬಾರಿ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯದದಲ್ಲಿ ನಿರುದ್ಯೋಗ, ಮೂಲಸೌಕರ್ಯಗಳು, ಕಾನೂನು-ಸುವ್ಯವಸ್ಥೆ ಸೇರಿ ಸಾರ್ವಂಗೀಣ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಅವಶ್ಯಕವಾಗಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ 46 ದಿನಗಳಲ್ಲಿ 112 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿವರ್ತನಾ ಯಾತ್ರೆ ಕೈಗೊಂಡು, 16 ಜಿಲ್ಲೆಗಳಲ್ಲಿ ಪ್ರವಾಸ ಮಾಡಿರುವ ಬಿ.ಎಸ್‌. ಯಡಿಯೂರಪ್ಪನವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಇದೇ ವೇಳೆ ರಾಜನಾಥ್‌ ಸಿಂಗ್‌ ಹೇಳಿದರು.

ಕೊಲೆಗಡುಕರನ್ನು ಜೈಲಿಗಟ್ಟುತ್ತೇವೆ 
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಪತ್ರಕರ್ತೆ ಗೌರಿ ಲಂಕೇಶ್‌, ಹಿಂದೂ ಕಾರ್ಯಕರ್ತರಾದ ರುದ್ರೇಶ್‌, ಕುಟ್ಟಪ್ಪ, ಪರೇಶ ಮೇಸ್ತಾ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆ ಮಾಡಿದ ಕೊಲೆಗಡುಕರನ್ನು ಜೈಲಿಗಟ್ಟುತ್ತೇವೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಸಚಿವ ರಾಜನಾಥ್‌ ಸಿಂಗ್‌ ಹೇಳಿದರು.

ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಅನೇಕ ಸಾಮಾಜಿಕ ಕಾರ್ಯಕರ್ಯರ ಕೊಲೆ ನಡೆದಿದೆ. ಆದರೆ. ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಆದರೆ, ಕರ್ನಾಟಕದ ಜನತೆಗೆ ನಾನು ಭರವಸೆ ನೀಡುತ್ತೇನೆ, ಬಿಜೆಪಿ ಅಧಿಕಾರಕ್ಕೆ ಬಂದರೆ, ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆಳಕ್ಕೆ ಹೋಗಿ ಪ್ರತಿಯೊಂದು ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಜೈಲಿಗೆ ಹಾಕುತ್ತೇವೆ. ಅದೇ ರೀತಿ ರುದ್ರೇಶ್‌, ಕುಟ್ಟಪ್ಪ, ಮೇಸ್ತ ಸೇರಿದಂತೆ ಉಳಿದ ಸಾಮಾಜಿಕ ಕಾರ್ಯಕರ್ತರ ಹತ್ಯಾಕೋರರಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದರು.

ದೇಶದ ಆರ್ಥಿಕ ವ್ಯವಸ್ಥೆಗೆ ಸಾಫ್ಟ್ವೇರ್‌ ರಫ್ತಿನ ದೊಡ್ಡ ಪಾತ್ರವಿದೆ. ದೇಶದ ಒಟ್ಟು ಸಾಫ್ಟ್ವೇರ್‌ ರಫ್ತಿನಲ್ಲಿ ಬೆಂಗಳೂರಿನ ಪಾಲು ಶೇ.98ರಷ್ಟಿದೆ. ಆದರೆ, ಇಂದು ಬೆಂಗಳೂರು ಕೊಲೆಗಡುಕರ ನಗರವಾಗಿದೆ. ಅಪರಾಧ ಪ್ರಕರಗಳನ್ನು ಹೆಚ್ಚುತ್ತಲೇ ಇವೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಗೂಂಡಾಗಳು, ದುಷ್ಕರ್ಮಿಗಳ ವಾಸಸ್ಥಾನ ಜೈಲು ಆಗಲಿದೆ ಎಂದರು.

“ಕರ್ನಾಟಕದಲ್ಲಿ ಬೆಂಕಿ ಹಚ್ಚುವ ಕೆಲಸ ಯಾರಾದರೂ ಮಾಡುತ್ತಿದ್ದರೆ, ಅದು ಕಾಂಗ್ರೆಸ್‌ ಪಕ್ಷ. ಈ ಮಧ್ಯೆ, ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹೊಸ ಅಧ್ಯಕ್ಷರು. ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದಿದ್ದಾರೆ. ದೇಶದಲ್ಲಿ ಮೂಲಭೂತವಾದ, ಕೋಮುವಾದ, ನಕ್ಸಲ್‌ವಾದ, ಉಗ್ರವಾದ, ಸಿಖVರ ಹತ್ಯೆ, ಕುಟುಂಬ ರಾಜಕಾರಣದ ಬೆಂಕಿ ಹತ್ತಿಕೊಂಡಿದ್ದು, ಬಿಜೆಪಿಯ ನೀತಿಗಳಿಂದಾಗಿ ಅಲ್ಲ. ಈ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಬೆಂಕಿ ಹಚ್ಚುತ್ತಿದ್ದರೆ, ಅದನ್ನು ಆರಿಸುವ ಕೆಲಸ ಬಿಜೆಪಿ ಮಾಡುತ್ತಿದೆ’.
– ರಾಜ್‌ನಾಥ್‌ಸಿಂಗ್‌, ಕೇಂದ್ರ ಗೃಹ ಸಚಿವ.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.