ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಎಚ್ಚರ
Team Udayavani, Aug 10, 2018, 6:10 AM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಬಹುದಾದ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಕೊಡಗು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆಯಿದೆ.
ಆ ಭಾಗದಲ್ಲಿ ನಾವು ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರ ವಹಿಸಬೇಕು. ಚುನಾವಣಾ ಕಾರ್ಯತಂತ್ರ ಬದಲಿಸಿಕೊಳ್ಳ ಬೇಕೆಂದು ನಿರ್ದೇಶನ ನೀಡಿದ್ದಾರೆ.
ಬಿಜೆಪಿ ಪ್ರಬಲವಾಗಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಆಯಾ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಅಧಿಕಾರ ನೀಡಿರುವುದರಿಂದ ಬಹು ತೇಕ 9 ರಿಂದ 10 ಜಿಲ್ಲೆಗಳಲ್ಲಿ ಮೈತ್ರಿಗೆ ಸ್ಥಳೀಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಬಹುದು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿಯುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ತೀವ್ರ ಸ್ಪರ್ಧೆ
ನೀಡಬೇಕು. ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಉಂಟಾಗದಂತೆ ನೋಡಿಕೊಳ್ಳಬೇಕು.
ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಲೋಕಸಭೆ ಚುನಾವಣೆಗೆ ಅಡಿಪಾಯ ಹಾಕಿಕೊಳ್ಳಬೇಕಿದೆ. ಹೀಗಾಗಿ, ಸ್ಥಳೀಯವಾಗಿ ಪ್ರಬಲರಾಗಿರುವ, ವರ್ಚಸ್ಸು ಹಾಗೂ ಸಮುದಾಯದ ಬೆಂಬಲ ಇರುವವರಿಗೆ ಟಿಕೆಟ್ ನೀಡಿ. ಭಿನ್ನಾಭಿಪ್ರಾಯ ಅಥವಾ ಬಂಡಾಯಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.