ಮತ್ತೆ ಕೈ-ಕಮಲ ಟಿಪ್ಪು ಸಮರ
Team Udayavani, Oct 17, 2018, 5:59 AM IST
ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿಷಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮಾತಿನ ಸಮರ ಆರಂಭಿಸಿದ್ದಾರೆ. ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಸಮಾಜದಲ್ಲಿ ಒಡಕು ಉಂಟು ಮಾಡುವ ಪ್ರಯತ್ನ ಮಾಡುತ್ತಿದೆ. ಈ ಬಾರಿ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಬಿಡುವುದಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವ
ಮೂಲಕ ಪದೇ ಪದೆ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ. ಟಿಪ್ಪು ಜಯಂತಿ ಆಚರಣೆ ಮೂಲಕ ಕೊಲೆ, ದಂಗೆ
ಯಂತಹ ಪ್ರಕರಣಗಳಿಗೆ ಪ್ರಚೋದನೆ ನೀಡುತ್ತಿದೆ. ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ಮಾಡಬಾರದು. ಒಂದೊಮ್ಮೆ ಆಚರಣೆಗೆ ಮುಂದಾದರೆ ಪತ್ರಿಪಕ್ಷ ವಾಗಿ ನಾವು ಏನು ಮಾಡಬೇಕೋ ಮಾಡುತ್ತೇವೆ ಎಂದು ಹೇಳಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ರಾಜ್ಯದಲ್ಲಿ ಟಿಪ್ಪು ಖಡ್ಗ ಹಿಡಿದು ಕೊಂಡವರೆಲ್ಲಾ ಏನಾದರು
ಎನ್ನುವುದು ಗೊತ್ತಿದೆ. ಟಿಪ್ಪು ಟೋಪಿ ಹಾಕಿಕೊಂಡವರೆಲ್ಲ ಅಧಿಕಾರ ಕಳೆದುಕೊಂಡಿದ್ದಾರೆ. ಟಿಪ್ಪು ಜಯಂತಿ ಆಚರಣೆಯಿಂದಲೇ ಈ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದರು. ಈ ಮಧ್ಯೆ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಬಿಜೆಪಿ ಟಿಪ್ಪು ವಿಷಯದಲ್ಲಿ ಅನಗತ್ಯ ರಾಜಕಾರಣ ಮಾಡಬಾರದು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಟಿಪ್ಪು ವೇಷ ಹಾಕಿರುವ ನಾಯಕರನ್ನು ನೋಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.