“ನಾನು ಬಿಜೆಪಿ, ನಾನು ಆರ್‌ಎಸ್‌ಎಸ್’ “ಅರೆಸ್ಟ್ ಮಿ’ ಸಿದ್ದರಾಮಯ್ಯ
Team Udayavani, Jan 13, 2018, 6:00 AM IST
ಬೆಂಗಳೂರು: ಆರೆಸ್ಸೆಸ್, ಬಿಜೆಪಿ, ಭಜರಂಗದಳದಲ್ಲಿರುವವರು ಉಗ್ರಗಾಮಿಗಳು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಶುಕ್ರವಾರದಿಂದ ರಾಜ್ಯಾದ್ಯಂತ ಜೈಲ್‌ಭರೋ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಶನಿವಾರ ಜೈಲ್‌ಭರೋ ಹಮ್ಮಿಕೊಂಡಿದ್ದಾರೆ.
ತುಮಕೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಶೋಭಾ ಕರಂದ್ಲಾಜೆ, ಶಾಸಕ ಬಿ.ಸುರೇಶ್ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ.ಜ್ಯೋತಿ ಗಣೇಶ್ ಸೇರಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು. ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.
ಮಂಗಳೂರಿನಲ್ಲಿ 86ಕ್ಕೂ ಹೆಚ್ಚು, ಯಾದಗಿರಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿಯ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು. ಕೊಪ್ಪಳದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಇದೇ ವೇಳೆ, ಉಡುಪಿ, ಮೈಸೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ ಸೇರಿ ರಾಜ್ಯದ ಇತರೆಡೆಯೂ ಜೈಲ್‌ಭರೋ ನಡೆಯಿತು.
ನಾನು ಒಬ್ಬ ಹಿಂದೂ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಜಯಂತಿಯನ್ನು ಮುಂದೆ ನಿಂತು ಮಾಡುತ್ತಾರೆ. ಆದರೆ, ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸರ್ಕಾರದಿಂದ ಆಚರಿಸಿಲ್ಲ. ಇದು ಮುಖ್ಯಮಂತ್ರಿಯ ದ್ವಿಮುಖ ನೀತಿಯಾಗಿದೆ.
– ಶೋಭಾ ಕರಂದ್ಲಾಜೆ ಸಂಸದೆ.
ಸಮಾಜದಲ್ಲಿ ಭಯ ಸೃಷ್ಟಿಸುವುದೇ ಭಯೋತ್ಪಾದನೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡುವ ಪ್ರತಿ ಹೇಳಿಕೆಯೂ ಸಮಾಜದಲ್ಲಿ ಭಯ ಸೃಷ್ಟಿಸುವಂತಹದ್ದೇ ಆಗಿರುತ್ತದೆ. ಅವರ ಹೇಳಿಕೆಯಲ್ಲಿ ಬೆದರಿಕೆ, ದುರಹಂಕಾರ, ದಾಸ್ಯ ಇದ್ದೇ ಇರುತ್ತದೆ. ಹಾಗಾದರೆ ಗೃಹ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಾರೆಯೇ?
– ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.