ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ


Team Udayavani, Nov 10, 2018, 12:20 PM IST

m1-tippu.jpg

ಮೈಸೂರು ನಗರ ಮತ್ತು ಗ್ರಾಮೀಣ ಬಿಜೆಪಿ ಘಟಕಗಳಿಂದ ಟಿಪ್ಪು ಜಯಂತಿ ವಿರೋಧಿಸಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರೆ,  ಟಿಪ್ಪು ಜಯಂತಿ ಆಚರಣೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ರಾಜ್ಯದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಚಾಮರಾಜ ವಿಧಾನಸಭಾ ಕ್ಷೇತ್ರದ ದೇವರಾಜ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ನಗರದ ಚಿಕ್ಕ ಗಡಿಯಾರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಮೈಸೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಮೈಸೂರು ನಗರ ಮತ್ತು ಜಿಲ್ಲಾ ಬಿಜೆಪಿ ಘಟಕ ನಗರದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಯಿತು.

ನಗರ ಬಿಜೆಪಿ ವತಿಯಿಂದ ಗಾಂಧಿಚೌಕದಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂದನ್‌, ಆಮಂತ್ರಣದಲ್ಲಿ ಹೆಸರು ಹಾಕಿಸಿಕೊಳ್ಳದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಟಿಪ್ಪು ಜಯಂತಿಯನ್ನು ಬಹಿಷ್ಕರಿಸಿ ಸಂದೇಶ ಕೊಟ್ಟಿದ್ದಾರೆ.

ಆದರೆ, ಮುಖ್ಯಮಂತ್ರಿ ರಾಹುಲ್‌ಗಾಂಧಿಯ ಕಾಂಗ್ರೆಸ್‌ ಋಣ ಮುಖ್ಯಮಂತ್ರಿ ಕುಮಾರಸ್ವಾಮಿ ತಲೆಯ ಮೇಲಿದೆ. ಹೀಗಾಗಿ ಅಸಹಾಯಕರಾಗಿ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ ಎಂದು ಟೀಕಿಸಿ, ನೀವು ಕಾಂಗ್ರೆಸ್‌ ಋಣದಲ್ಲೇ ಇರಿ, ಆದರೆ ರಾಜ್ಯವನ್ನು ಟಿಪ್ಪು ಋಣಕ್ಕೆ ತಳ್ಳಬೇಡಿ ಎಂದು ಆಗ್ರಹಿಸಿದರು.

ರಾಜ್ಯಕ್ಕೆ ಅಪಮಾನ: ಹಳೇ ಮೈಸೂರು ಭಾಗದಲ್ಲಿ ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ, ಸಾವಿರಾರು ಹಿಂದೂಗಳ ಮಾರಣಹೋಮ ನಡೆಸಿದ್ದು ಮಾತ್ರವಲ್ಲ, ಆತ ಕ್ರೈಸ್ತ ಮಿಷನರಿಗಳ ಮೇಲೂ ದಾಳಿ ನಡೆಸಿ ಕ್ರೈಸ್ತರ ಮಾರಣ ಹೋಮ ನಡೆಸಿದ್ದಾನೆ. ಇಂತಹ ಧರ್ಮಾಂಧ, ಧರ್ಮದ್ರೋಹಿ, ಕಾಮಾಂಧ ಟಿಪ್ಪು ಜಯಂತಿ ಆಚರಣೆ ಮಾಡಲು ಹೊರಟಿರುವುದು ರಾಜ್ಯಕ್ಕೇ ಅಪಮಾನ ಎಂದು ಖಂಡಿಸಿದರು. 

ನಜರ್‌ಬಾದ್‌ ಹೆಸರು ಬದಲು: ದೇಶ ಇಂದು ದಾಸ್ಯದಿಂದ ಹೊರಬಂದು ಪುರಾತನ ಹಿಂದೂ ಸಂಸ್ಕೃತಿಯ ಕಡೆಗೆ ಹೋಗುತ್ತಿದೆ. ಅದರ ಫ‌ಲವಾಗಿ ದೇಶದ ಅನೇಕ ನಗರಗಳ ಹೆಸರು ಬದಲಾವಣೆಯಾಗಿದೆ. ಅಗ್ರಹಾರವಾಗಿದ್ದ ಮೈಸೂರಿನ ಭಾಗಕ್ಕೆ ನಜರ್‌ಬಾದ್‌ ಎಂದು ಟಿಪ್ಪು ಇಟ್ಟಿರುವ ಹೆಸರನ್ನು ಬದಲಾಯಿಸಿ, ಹಿಂದಿನ ಹೆಸರನ್ನೇ ಇಡಬೇಕು ಎಂದು ಆಗ್ರಹಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಜರ್‌ಬಾದ್‌ ಹೆಸರು ಬದಲಾಯಿಸುವುದಾಗಿ ಹೇಳಿದರು.

ಟಿಪ್ಪು ಜಯಂತಿ ಕೈಬಿಡಿ: ಟಿಪ್ಪು ಮೈಸೂರು ಹುಲಿಯೂ ಅಲ್ಲ, ಇಲಿಯೂ ಅಲ್ಲ. ಮೇಲಾಗಿ ಆತ ಸುಲ್ತಾನನೇ ಆಗಿರಲಿಲ್ಲ, ಮೈಸೂರು ಅರಸು ಮನೆತನದವರಿಗೆ ಕಿರುಕುಳ ನೀಡಿದ, ಭಾರತವನ್ನು ಇಸ್ಲಾಂಮಯ ಮಾಡಲು ವಿರೋಧಿಗಳ ಜೊತೆ ಕೈಜೋಡಿಸಿ ಷಡ್ಯಂತ್ರ ನಡೆಸಿದ ದುಷ್ಟ ವ್ಯಕ್ತಿ ಟಿಪ್ಪು ಜಯಂತಿ ಆಚರಿಸಿದ್ದರಿಂದಲೇ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯ ಸೋಲು ಕಾಣಬೇಕಾಯಿತು.

ಇನ್ನಾದರೂ ಕಾಂಗ್ರೆಸ್ಸಿಗರು ಎಚ್ಚೆತ್ತು ಟಿಪ್ಪು ಜಯಂತಿ ಆಚರಣೆ ಕೈಬಿಡಲಿ ಎಂದು ಆಗ್ರಹಿಸಿದರು. ನಗರ ಬಿಜೆಪಿ ಅಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌ ಮಾತನಾಡಿ, ಟಿಪ್ಪು ಜಯಂತಿಯನ್ನು ಆತನ ಸಂಬಂಧಿಕರು ಮಾಡಿಕೊಳ್ಳಲಿ, ಸರ್ಕಾರಿ ಪ್ರಾಯೋಜಿತ ಆಚರಣೆ ಬೇಡ ಎಂದು ಒತ್ತಾಯಿಸಿದರು.

ಉಗ್ರ ಹೋರಾಟ: ಕೊಡವರು, ಕ್ರೈಸ್ತರ ಮಾರಣಹೋಮ ನಡೆಸಿ, ಬಲವಂತದ ಮತಾಂತರ ಮಾಡಿದ ಟಿಪ್ಪು ಆಡಳಿತದಲ್ಲಿ ಪರ್ಷಿಯನ್‌ ಭಾಷೆಯನ್ನು ಹೇರಿ ಕನ್ನಡ ದ್ರೋಹಿಯಾಗಿರುವ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸುವುದು ಬೇಡ. ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನು ಕೈಬಿಡದಿದ್ದಲ್ಲಿ ಬಿಜೆಪಿ ಉಗ್ರ ಹೋರಾಟ ನಡೆಸಲಿದ್ದು, ರಾಜ್ಯದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇತೃತ್ವದಲ್ಲಿ ನಗರದ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು. ಪಕ್ಷದ ನಾಗರಾಜ ಮಲ್ಲಾಡಿ, ಹೊಸಹಳ್ಳಿ ವೆಂಕಟೇಶ್‌, ಬಾಲಕೃಷ್ಣ, ಬೋರೇಗೌಡ ಮೊದಲಾದವರು ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಗಾಂಧಿ ಚೌಕದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಎಲ್‌.ನಾಗೇಂದ್ರ, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಬಿ.ಪಿ.ಮಂಜುನಾಥ್‌, ನಗರ ಬಿಜೆಪಿ ಮಾಧ್ಯಮ ಪ್ರಮುಖ ಪ್ರಭಾಕರ ಶಿಂಧೆ ಸೇರಿದಂತೆ ಪಾಲಿಕೆಯ ಬಿಜೆಪಿ ಸದಸ್ಯರು, ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.