
ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
Team Udayavani, May 4, 2018, 6:45 AM IST

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಬಿಜೆಪಿ ಪ್ರಣಾಳಿಕೆ ಶುಕ್ರವಾರ ಬಿಡುಗಡೆಯಾಗಲಿದೆ.
ಆತ್ಮಹತ್ಯೆ, ಸಾಲ ಬಾಧೆ, ಬೆಳೆ ನಷ್ಟ ಸೇರಿ ಸಂಕಷ್ಟದಲ್ಲಿರುವ ರೈತಾಪಿ ಸಮುದಾಯದ ನೆರವಿಗಾಗಿ ಸಹಕಾರ ಸಂಘಗಳು ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಒಂದು ಲಕ್ಷ ರೂ.ವರೆಗಿನ ಸಾಲಮನ್ನಾ ಘೋಷಣೆಯೂ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ 50 ಸಾವಿರ ರೂ.ವರೆಗೆ ರೈತರು ಸಹಕಾರ ಸಂಘಗಳಲ್ಲಿ ಮಾಡಿರುವ ಸಾಲಮನ್ನಾ ಮಾಡಿ ವಾಣಿಜ್ಯ ಬ್ಯಾಂಕುಗಳ ಸಾಲ ಕೇಂದ್ರ ಸರ್ಕಾರ ಮನ್ನಾ ಮಾಡಲಿ ಎಂದು ಒತ್ತಾಯಿಸಿತ್ತು. ಸಹಕಾರ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿನ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಈಗಾಗಲೇ ಘೋಷಿಸಿದೆ. ಹೀಗಾಗಿ, ಇದೀಗ ಬಿಜೆಪಿ ಒಂದು ಲಕ್ಷ ರೂ.ವರೆಗಿನ ಸಾಲಮನ್ನಾ ಘೋಷಣೆ ಹಾಗೂ ಕೃಷಿ, ತೋಟಗಾರಿಕೆ, ನೀರಾವರಿ, ಪಶು ಸಂಗೋಪನೆ, ಸಹಕಾರ, ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹೆಚ್ಚು ಒತ್ತು ನೀಡುವ ಭರವಸೆ ಪ್ರಣಾಳಿಕೆಯಲ್ಲಿ ನೀಡಿ ರೈತರ ಒಲವು ಗಳಿಸುವ ಪ್ರಯತ್ನ ಮಾಡಲಿದೆ.
ಜತೆಗೆ, ಬೆಂಗಳೂರು, ಮಂಗಳೂರು, ಬೆಳಗಾವಿ, ಮೈಸೂರು ಸೇರಿ ಪ್ರಮುಖ ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದಿಟಛಿ, ಶಿಕ್ಷಣ, ಇಂಧನ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವುದು. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಗೃಹ ಇಲಾಖೆ ಬಲವರ್ಧನೆಗಾಗಿ ಹಲವು ಕ್ರಮಗಳನ್ನು ಪ್ರಣಾಳಿಕೆ ಒಳಗೊಂಡಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಹಲವು ದೋಷಗಳಿಂದಾಗಿ ಟೀಕೆಗೊಳಗಾಗಿರುವುದರಿಂದ ಎಚ್ಚರಿಕೆಯಿಂದ ಪ್ರಣಾಳಿಕೆ ಸಿದಟಛಿಪಡಿಸಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.