ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಹೊರಹಾಕಿ
Team Udayavani, Aug 7, 2017, 7:35 AM IST
ಬೆಂಗಳೂರು: ವರ್ಗಾವಣೆಯನ್ನೇ ದಂಧೆ ಮಾಡಿಕೊಂಡಿರುವ, ಕಳೆದ ನಾಲ್ಕು ವರ್ಷದಲ್ಲಿ 19 ಹಿಂದೂಪರ ಕಾರ್ಯಕರ್ತರನ್ನು
ಕಗ್ಗೊಲೆ ಮಾಡಿರುವ ಕೊಲೆಗಡುಕ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಿಂದ ಮುಕ್ತಗೊಳಿಸುವ ಕಾಲ ಬಂದಿದೆ ಎಂದು ಬಿಜೆಪಿ
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಅಧಿಕಾರಿಗಳ ವರ್ಗಾವಣೆ, ಹದಗೆಟ್ಟ ಕಾನೂನು ಸುವ್ಯವಸ್ಥೆ ಕುರಿತಂತೆ ಅಂಕಿ ಅಂಶಗಳ ಸಹಿತ ವಿವರಿಸಿದ ಅವರು, ಈ ವಿಚಾರಗಳನ್ನೇ ಮುಂದಿಟ್ಟುಕೊಂಡು ರಾಜ್ಯದ 150 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು, ಕಾಂಗ್ರೆಸ್ ಸರ್ಕಾರ ತೊಲಗಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಆ ಮೂಲಕ ಕರ್ನಾಟಕವನ್ನು ಮಾದರಿ ರಾಜ್ಯ ಮಾಡುವ ಸಂಕಲ್ಪ ಮಾಡಬೇಕಿದೆ ಎಂದರು.
ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಸಹ ಉಸ್ತುವಾರಿ ಪುರಂದರೇಶ್ವರಿ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಸಂತೋಷ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಅರವಿಂದ ಲಿಂಬಾವಳಿ ಮುಖಂಡರಾದ ಗೋವಿಂದ ಕಾರಜೋಳ, ಸಿ.ಎಂ.ಉದಾಸಿ ಮೊದಲಾದವರು ಉಪಸ್ಥಿತರಿದ್ದರು.
ದೇಶದ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರದ ಯೋಜನೆಗಳು
ತಲುಪಬೇಕು ಎಂಬುದು ನಮ್ಮ ಆಶಯ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಡ್ಡಿಯಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಇದಕ್ಕೆ ಸಂಘಟಿತ ಪ್ರಯತ್ನ ಅಗತ್ಯವಿದೆ.
– ಡಿ.ವಿ.ಸದಾನಂದ ಗೌಡ, ಕೇಂದ್ರ ಯೋಜನಾ
ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು
ಸೀಟುಗಳನ್ನು ಗೆಲ್ಲುವ ಮೂಲಕ ದಕ್ಷಿಣ ಭಾರತದಲ್ಲಿ ರಾಜಕೀಯ ಬದಲಾವಣೆಗೆ ಚಾಲನೆ ನೀಡಬೇಕು. ಕರ್ನಾಟಕದಲ್ಲೂ
ಕಾಂಗ್ರೆಸ್ ಸೋಲಿಸಿ ಕಾಂಗ್ರೆಸ್ ಮುಕ್ತ ಭಾರತಕ್ಕೆ ದಕ್ಷಿಣ ಭಾರತದಲ್ಲಿ ಮುನ್ನುಡಿ ಬರೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ವಿವಿಧ ಪಕ್ಷಗಳ ನಾಯಕರು ಬಿಜೆಪಿ ಸೇರಲು ಹಂಬಲಿಸುತ್ತಿದ್ದಾರೆ. ತಮಿಳುನಾಡಿನಲ್ಲೂ ಬದಲಾವಣೆ ಆರಂಭವಾಗಿದೆ.
– ಮುರಳೀಧರರಾವ್,
ಬಿಜೆಪಿ ರಾಜ್ಯ ಉಸ್ತುವಾರಿ.
ಬಿಜೆಪಿಗೆ ಸೇರ್ಪಡೆ
ಕಲಬುರಗಿ ಜಿಲ್ಲೆಯ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಸೇರಿದಂತೆ ವಿವಿಧ ಪಕ್ಷದ 15ಕ್ಕೂ ಅಧಿಕ ಮುಖಂಡರು ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಯಡಿಯೂರಪ್ಪ ಅವರು ಎಲ್ಲಾ ಮುಖಂಡರಿಗೂ ಪಕ್ಷದ ಶಾಲು ಹೊದಿಸಿ, ಬಿಜೆಪಿಗೆ ಬರಮಾಡಿಕೊಂಡರು.+
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.