ಸಿಎಂ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ತಂತ್ರ
Team Udayavani, Apr 13, 2018, 6:25 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವುದರಿಂದ ಬಿಜೆಪಿ ಸಹ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದೆ. ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಲ್ಲೇ ಹೆಚ್ಚು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿಯಿಂದಲೂ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಪಕ್ಷದಲ್ಲಿ ವರ್ಚಸ್ಸು ಹೊಂದಿರುವ ನಾಯಕರನ್ನೇ ಎರಡೂ ಕಡೆ ಅಭ್ಯರ್ಥಿಯಾಗಿಸಬೇಕೆಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದು, ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಹಾಗೂ ರಾಜ್ಯ ನಾಯಕರು ಸಮರ್ಥ ಅಭ್ಯರ್ಥಿಗಳ ತಲಾಷೆಯಲ್ಲಿದ್ದಾರೆಂದು ಹೇಳಲಾಗಿದೆ.
2013ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹೇಮಂತ್‌ಗೌಡ, ಬಾದಾಮಿಯಿಂದ ಎಂ.ಕೆ.ಪಟ್ಟಣಶೆಟ್ಟಿ ಸ್ಪರ್ಧಿಸಿದ್ದರು. ಈ ಬಾರಿಯೂ ಇವರೇ ಆಕಾಂಕ್ಷಿಗಳಾಗಿದ್ದರೂ ಸಿದ್ದರಾಮಯ್ಯ ಸ್ಪರ್ಧೆ ಹಿನ್ನೆಲೆಯಲ್ಲಿ ಕಾರ್ಯತಂತ್ರ ಬದಲಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇನ್ನು, ಜೆಡಿಎಸ್ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜಿ.ಟಿ.ದೇವೇಗೌಡರನ್ನು ಘೋಷಿಸಿದ್ದು, ಬಾದಾಮಿಗೆ ಹನುಮಂತಪ್ಪ ಮಾವಿನಮರದ ಹೆಸರು ಪ್ರಕಟಿಸಿದೆ. ಈ ಪೈಕಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರೇ ಸ್ಪರ್ಧೆಗೆ ಇಳಿಯುತ್ತಿರುವುದರಿಂದ ಈಗ ಘೋಷಿಸಿರುವ ಅಭ್ಯರ್ಥಿ ಬದಲಿಸಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.