KPCC ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? ಡಿಕೆಶಿ ಗೆ BJP ಪ್ರಶ್ನೆ
Team Udayavani, Mar 27, 2021, 7:46 PM IST
ಬೆಂಗಳೂರು: ರಮೇಶ ಜಾರಕಿಹೊಳಿಯವರದು ಎನ್ನಲಾದ ಸಿಡಿ ಪ್ರಕರಣಕ್ಕೆ ಇಂದು ರೋಚಕ ತಿರುವು ಸಿಕ್ಕಿದೆ. ಸಿಡಿಯಲ್ಲಿದ್ದಾಳೆ ಎನ್ನಲಾಗುತ್ತಿರುವ ಯುವತಿಯ ಕುಟುಂಬದವರು ಇಂದು ಡಿಕೆಶಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಆರೋಪ ಹಾಗೂ ಪ್ರತ್ಯಾರೋಪಗಳು ಶುರುವಾಗಿವೆ.
ರಾಜ್ಯ ಬಿಜೆಪಿ ಸರಣಿ ಟ್ವೀಟ್‍ಗಳ ಮೂಲಕ ನೇರವಾಗಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದೆ. ಯುವತಿಯ ಪೋಷಕರ ಮಾತುಗಳನ್ನು ಗಮನಿಸುವುದಾದರೆ ಸಂತ್ರಸ್ಥೆಯನ್ನು ಕೂಡಿಹಾಕುವ ಪೂರ್ವ ತಯಾರಿ ಕೆಪಿಸಿಸಿ ಕಚೇರಿಯಲ್ಲೇ ನಡೆದಿತ್ತಾ? ಸಂತ್ರಸ್ಥೆಯ ಪೋಷಕರು ನೇರವಾಗಿ ಡಿ.ಕೆ ಶಿವಕುಮಾರ್ ಮೇಲೆ ಆರೋಪ ಮಾಡಿದ್ದಾರೆ.
ಸೆಕ್ಷನ್ ಸ್ಪೆಷಲಿಸ್ಟ್ ಅವರೇ, ರಾಜಕೀಯ ಆಟಕ್ಕೆ ಸಂತ್ರಸ್ಥೆಯನ್ನು ಬಳಸಿಕೊಂಡದ್ದು ಯಾವ ಸೆಕ್ಷನ್‌ನಲ್ಲಿ ಅಪರಾಧ ಎಂದು ಬಿಡಿಸಿ ಹೇಳುವಿರಾ? ಎಂದು ಬಿಜೆಪಿ ಪ್ರಶ್ನಿಸಿದೆ.
ಸಂತ್ರಸ್ಥೆಯನ್ನು ಕೂಡಿಹಾಕುವ ಪೂರ್ವ ತಯಾರಿ ಕೆಪಿಸಿಸಿ ಕಚೇರಿಯಲ್ಲೇ ನಡೆದಿದ್ದಾ?
ಸಂತ್ರಸ್ಥೆಯ ಪೋಷಕರು ನೇರವಾಗಿ @DKShivakumar ಮೇಲೆ ಆರೋಪ ಮಾಡಿದ್ದಾರೆ.
ಸೆಕ್ಷನ್ ಸ್ಪೆಷಲಿಸ್ಟ್ @siddaramaiah ಅವರೇ, ರಾಜಕೀಯ ಆಟಕ್ಕೆ ಸಂತ್ರಸ್ಥೆಯನ್ನು ಬಳಸಿಕೊಂಡದ್ದು ಯಾವ ಸೆಕ್ಷನ್‌ನಲ್ಲಿ ಅಪರಾಧ ಎಂದು ಬಿಡಿಸಿ ಹೇಳುವಿರಾ?#DKShiMustResign
— BJP Karnataka (@BJP4Karnataka) March 27, 2021
ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಮಾನ್ಯ ಡಿಕೆ ಶಿವಕುಮಾರ್ ಅವರೇ, ನಿಮ್ಮದೆಂತಹ ಕುತ್ಸಿತ ಮನೋಸ್ಥಿತಿ ಇರಬಹುದು? ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? ಸಂತ್ರಸ್ಥೆಯ ಕುರಿತು ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್ ನಾಯಕರು ಈಗೆಲ್ಲಿದ್ದಾರೆ?
ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಮಾನ್ಯ @DKShivakumar ಅವರೇ, ನಿಮ್ಮದೆಂತಹ ಕುತ್ಸಿತ ಮನೋಸ್ಥಿತಿ ಇರಬಹುದು?
ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ?
ಸಂತ್ರಸ್ಥೆಯ ಕುರಿತು ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್ ನಾಯಕರು ಈಗೆಲ್ಲಿದ್ದಾರೆ?#DKShiMustResign pic.twitter.com/EPd8edScu2
— BJP Karnataka (@BJP4Karnataka) March 27, 2021
ಎಲ್ಲವನ್ನೂ ತಾನೇ ಮುಂದೆ ನಿಂತು ಮಾಡಿಸುತ್ತಾರೆ, ಸದನದಲ್ಲಿ ಬೊಬ್ಬಿರಿಯುತ್ತಾರೆ, ಸುಭಗನಂತೆ ನಟಿಸುತ್ತಾರೆ. ಮಹಾನಾಯಕ ಡಿಕೆ ಶಿವಕುಮಾರ್ ಅವರೇ, ನಿಮಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟುಬಿಡಿ. ಒತ್ತೆಯಲ್ಲಿಟ್ಟುಕೊಂಡಿರುವ ಸಂತ್ರಸ್ತೆಯನ್ನು ಬಿಟ್ಟುಬಿಡಿ, ತನಿಖೆಗೆ ಸಹಕರಿಸಿ ಎಂದು ಸವಾಲು ಹಾಕಿದೆ.
ಎಲ್ಲವನ್ನೂ ತಾನೇ ಮುಂದೆ ನಿಂತು ಮಾಡಿಸುತ್ತಾರೆ, ಸದನದಲ್ಲಿ ಬೊಬ್ಬಿರಿಯುತ್ತಾರೆ, ಸುಭಗನಂತೆ ನಟಿಸುತ್ತಾರೆ.
ಮಹಾನಾಯಕ @DKShivakumar ಅವರೇ, ನಿಮಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟುಬಿಡಿ.
ಒತ್ತೆಯಲ್ಲಿಟ್ಟುಕೊಂಡಿರುವ ಸಂತ್ರಸ್ತೆಯನ್ನು ಬಿಟ್ಟುಬಿಡಿ, ತನಿಖೆಗೆ ಸಹಕರಿಸಿ.#DKShiMustResign pic.twitter.com/QutCYQJRON
— BJP Karnataka (@BJP4Karnataka) March 27, 2021
ರಾಜೀನಾಮೆ ನೀಡಲು ಇನ್ನೆಷ್ಟು ಕಾಲ ಬೇಕು ಎಂದು ಪ್ರಶ್ನಿಸಿರುವ ಬಿಜೆಪಿ, ರಾಜಕೀಯ ಲಾಭಕ್ಕಾಗಿ ಸಂತ್ರಸ್ಥೆಯನ್ನು ಬಳಸಿಕೊಂಡ ಆರೋಪ ನಿಮ್ಮ ಮೇಲೆ ಇದೆ. ಇಷ್ಟೆಲ್ಲಾ ಮಾಡಿಯೂ ಸದನದಲ್ಲಿ ಹೇಗೆ ಮುಖ ಇಟ್ಟುಕೊಂಡು ಸಿಡಿ ವಿಚಾರವಾಗಿ ಮಾತನಾಡಿದ್ದೀರಿ? ತಕ್ಷಣವೇ ರಾಜೀನಾಮೆ ನೀಡಿ ಎಂದು ಆಗ್ರಹಿಸಿದೆ.
ರಾಜೀನಾಮೆ ನೀಡಲು ಇನ್ನೆಷ್ಟು ಕಾಲ ಬೇಕು ಮಾನ್ಯ @DKShivakumar ಅವರೇ!?
ನೇರವಾಗಿ ಆರೋಪ ಮಾಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಂತ್ರಸ್ಥೆಯನ್ನು ಬಳಸಿಕೊಂಡ ಆರೋಪ ನಿಮ್ಮ ಮೇಲೆ ಇದೆ.
ಇಷ್ಟೆಲ್ಲಾ ಮಾಡಿಯೂ ಸದನದಲ್ಲಿ ಹೇಗೆ ಮುಖ ಇಟ್ಟುಕೊಂಡು ಸಿಡಿ ವಿಚಾರವಾಗಿ ಮಾತನಾಡಿದ್ದೀರಿ?
ತಕ್ಷಣವೇ ರಾಜೀನಾಮೆ ನೀಡಿ.#DKShiMustResign pic.twitter.com/dkbk6vBzcq
— BJP Karnataka (@BJP4Karnataka) March 27, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.