ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ ಜಯ ಖಚಿತ
Team Udayavani, Apr 13, 2019, 3:00 AM IST
ಬೆಂಗಳೂರು: “ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲೂ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದಿಂದ ಜಯಗಳಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ,’ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೇಜಸ್ವಿ ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದರು.
ತಪ್ಪದೇ ಮತ ಹಾಕಿ: ನಾಗರಿಕರು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು. ವಿಶೇಷವಾಗಿ ಬೆಂಗಳೂರಿಗರಲ್ಲಿ ಮತ ಹೊಂದಿರುವ ಮತದಾರರು ಹಕ್ಕು ಚಲಾಯಿಸುವಂತೆ ಎಸ್.ಎಂ.ಕೃಷ್ಣ ಅವರು ಮನವಿ ಮಾಡಿದರು.
ವಿಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಅವರು, ಎಚ್.ರವೀಂದ್ರ ಸೇರಿದಂತೆ ಬಿಜೆಪಿ ನಾಯಕರ ಜತೆಗೂಡಿ ನಡೆಸಿದ ವಿಜಯಸಂಕಲ್ಪ ಯಾತ್ರೆಗೆ ಎಸ್.ಎಂ. ಕೃಷ್ಣ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಸೇರಿಕೊಂಡರು. ಅಲ್ಲಿಂದ ಬ್ಯಾಟರಾಯನಪುರ, ಆವಲಹಳ್ಳಿ, ಟಿ.ಆì.ಮಿಲ್ ಮಾರ್ಗವಾಗಿ ಗಾಳಿ ಆಂಜನೇಯ ದೇವಸ್ಥಾನದ ವರೆಗೂ ಪ್ರಚಾರ ರ್ಯಾಲಿಯಲ್ಲಿ ಭಾಗಿಯಾಗಿ ತೇಜಸ್ವಿ ಸೂರ್ಯ ಪರ ಮತಯಾಚಿಸಿದರು.
ಇದಕ್ಕೂ ಮೊದಲು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾದ ವಿಜಯ ಸಂಕಲ್ಪ ಯಾತ್ರೆಯು ಗೋವಿಂದರಾಜನಗರ, ಪ್ರಶಾಂತ ನಗರ, ಮೂಡಲಪಾಳ್ಯ, ನಾಗರಬಾವಿ ಮುಖ್ಯ ರಸ್ತೆ ಮಾರ್ಗವಾಗಿ ಅನುಭವನಗರ, ಮಾರುತಿ ನಗರದವರೆಗೂ ಸಂಚರಿಸಿತು.
ಯಾತ್ರೆಯಲ್ಲಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕರಾದ ಆರ್.ಅಶೋಕ್, ವಿ.ಸೋಮಣ್ಣ, ಆರ್.ದೇವೆಗೌಡ, ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ, ಮಾಜಿ ಮೇಯರ್ ಶಾಂತಕುಮಾರಿ, ಬುಲೆಟ್ ಪ್ರಕಾಶ್ ಭಾಗವಹಿಸಿದ್ದರು. ಬಿಬಿಎಂಪಿ ಬಿಜೆಪಿ ಸದಸ್ಯರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.