ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರಕ್ಕೆ: ಬಿಎಸ್‌ವೈ


Team Udayavani, May 14, 2018, 6:35 AM IST

180513kpn96.jpg

ಬೆಂಗಳೂರು: ರಾಜ್ಯದಲ್ಲಿ 125 ರಿಂದ 130 ಸ್ಥಾನ ಗಳಿಸುವ ಮೂಲಕ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದ್ದು,ಮೇ 15ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಚರ್ಚಿಸಲಿದ್ದೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂಬ ಮತದಾನೋತ್ತರ ಸಮೀಕ್ಷೆಗಳ ಕುರಿತಂತೆ ತಮ್ಮ ಡಾಲರ್
ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಗಳು ಏನೇ ಹೇಳಲಿ. ಬಿಜೆಪಿಗೆ ಅಂತಹ ಯಾವುದೇ ಭಯವಿಲ್ಲ. ಸ್ವಂತ ಬಲದಲ್ಲೇ ಸರ್ಕಾರ ರಚಿಸಲಿದ್ದೇವೆ. ಸ್ಪಷ್ಟ ಬಹುಮತ ಸಿಗಲಿದ್ದು, ಯಾವುದೇ ಪಕ್ಷದ ಸಹಕಾರವೂ ಬೇಕಾಗಿಲ್ಲ. 125ರಿಂದ 130 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದರು.

ರಾಜ್ಯದ ಜನತೆ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದ್ದು, ಶೇ.72ರಷ್ಟು ಮತ ದಾನವಾಗಿದೆ. ರಾಜ್ಯಾದ್ಯಂತ ಕಾಂಗ್ರೆಸ್‌ ಆಡಳಿತ ವಿರೋಧಿ ಅಲೆಯಿದ್ದು, ಇದರಿಂದಾಗಿಯೇ ಜನ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಇದರ ಮುನ್ಸೂಚನೆ ತಿಳಿದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಐದು ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ ಎಂದರು.

ಯಾರ್ಯಾರಿಗೆ ಎಸ್ಟೆಷ್ಟು ಸೀಟು?: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದ್ದು ಭ್ರಷ್ಟ ಹಾಗೂ ರೈತವಿರೋಧಿ
ಸರ್ಕಾರವಾಗಿತ್ತು. ಹೀಗಾಗಿ ಕಾಂಗ್ರೆಸ್‌ 70ಕ್ಕೂ ಹೆಚ್ಚು ಸೀಟು ಗೆಲ್ಲುವುದಿಲ್ಲ. ಜೆಡಿಎಸ್‌ 22ರಿಂದ 23 ಸೀಟು ಪಡೆ 
ಯಬಹುದು. ಪಕ್ಷೇತರರು ಮತ್ತು ಇತರರು 2ರಿಂದ 4 ಸ್ಥಾನಗಳಲ್ಲಿ ಆರಿಸಿ ಬರಲಿದ್ದಾರೆ. ಆದರೆ, ಬಿಜೆಪಿ 125ರಿಂದ 130 ಸೀಟುಗಳನ್ನು ಗೆಲ್ಲಲಿದೆ. ಪ್ರಧಾನಿ ಮೋದಿ, ಅಮಿತ್‌ ಶಾ, ಯುಪಿ ಸಿಎಂ ಆದಿತ್ಯನಾಥ್‌ ಸೇರಿ ಎಲ್ಲರ ಆಶೀರ್ವಾದವೂ ಬಿಜೆಪಿ ಮೇಲಿದೆ ಎಂದು ಹೇಳಿದರು.

ಮತಗಟ್ಟೆ ಸಮೀಕ್ಷೆಗಳ ಬಗ್ಗೆ ಯಾವುದೇ ಮಾತನಾಡುವುದಿಲ್ಲ. ನನ್ನ ಹಿಂದಿನ ಯಾವುದೇ ಲೆಕ್ಕಾಚಾರ ತಪ್ಪಾಗಿಲ್ಲ. ಇಡೀ ರಾಜ್ಯ ಸುತ್ತಿದ್ದೇನೆ. ಜನರ ನಾಡಿಮಿಡಿತ ಅರಿತಿದ್ದೇನೆ. ಸಿಎಂ ಸಿದ್ದರಾಮಯ್ಯ ಸೋಲಿನ ಭೀತಿಯಿಂದ ಹತಾಶರಾಗಿದ್ದಾರೆ.ಹೀಗಾಗಿ ಬಾಯಿಗೆ ಬಂದ ಹಾಗೆ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.