Blackmail Case: ಖಾಸಗಿ ದೃಶ್ಯ ಸೆರೆಹಿಡಿದು ಬ್ಲಾಕ್ಮೇಲ್; ಇಬ್ಬರ ಬಂಧನ
Team Udayavani, Sep 16, 2023, 9:49 AM IST
ಬೆಂಗಳೂರು: ಹೋಟೆಲ್ ರೂಮ್ನಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದು 1 ಲಕ್ಷ ರೂ. ನೀಡುವಂತೆ ಎಂಬಿಎ ವಿದ್ಯಾರ್ಥಿನಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಂದ್ರಲೇಔಟ್ನ ನಿವಾಸಿ ನಯನಾ, ಕಿರಣ್ ಬಂಧಿತರು.
ನಯನಾ ಜತೆಗೆ ಕಿರಣ್ ಸೇರಿಕೊಂಡು ಹೋಟೆಲ್ ಪ್ರಾರಂಭಿಸಿದ್ದರು. ಬೆಂಗಳೂರಿನ ಚಂದ್ರಲೇಔಟ್ನಲ್ಲಿ ವಾಸವಿದ್ದ 22 ವರ್ಷದ ಎಂಬಿಎ ವಿದ್ಯಾರ್ಥಿನಿಯು ತನ್ನ ಪ್ರಿಯಕರನ ಜತೆಗೆ ಆಗಾಗ ಇವರ ಹೋಟೆಲ್ಗೆ ಬಂದು ರೂಮ್ ಪಡೆಯುತ್ತಿದ್ದಳು. ಯುವತಿಯ ಸ್ನೇಹಿತನ ಜೊತೆಯಿದ್ದ ಖಾಸಗಿ ಫೋಟೊ, ವಿಡಿಯೋಗಳನ್ನು ಆರೋಪಿಗಳು ಸೆರೆಹಿಡಿದು ಇತ್ತೀಚೆಗೆ ಯುವತಿಯ ಮೊಬೈಲ್ಗೆ ಕಳಿಸಿದ್ದರು. 1 ಲಕ್ಷ ರೂ. ನೀಡಬೇಕು. ಇಲ್ಲದಿದ್ದರೆ ಈ ಫೋಟೊ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡಿದ್ದರು.
ಆತಂಕಗೊಂಡ ಯುವತಿ ಇ ಬಗ್ಗೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.