BMTC bus: ಬಸ್ ಚಕ್ರ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Jan 9, 2024, 11:16 AM IST
ಬೆಂಗಳೂರು: ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಪಟೂರು ಮೂಲದ ತೇಜಸ್(22) ಮೃತ ಸವಾರ. ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ.
ಕೆಲ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿರುವ ತೇಜಸ್ ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದು, ಕೆಂಗೇರಿಯ ಪೇಯಿಂಗ್ ಗೆಸ್ಟ್‌ನಲ್ಲಿ ವಾಸವಾಗಿದ್ದರು. ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಸ್ನೇಹಿತನನ್ನು ಭೇಟಿಯಾಗಲು ಬೈಕ್‌ನಲ್ಲಿ ಉತ್ತರಹಳ್ಳಿ ಕಡೆಗೆ ಹೋಗುತ್ತಿದ್ದ. ಇದೇ ವೇಳೆ ಬಿಎಂಟಿಸಿ ಬಸ್ ಚಾಲಕ ಉತ್ತರಹಳ್ಳಿ ಕಡೆ ಹೋಗುತ್ತಿದ್ದ. ಆಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಸವಾರ ತೇಜಸ್, ಮಾರ್ಗ ಮಧ್ಯೆ ಮಂತ್ರಿ ಆನ್‌ಲೈನ್ ಅಪಾರ್ಟ್‌ಮೆಂಟ್ ಪ್ರವೇಶ ದ್ವಾರದ ಬಳಿ ಬಸ್ ಅನ್ನು ಹಿಂದಿಕ್ಕಲು ಮುಂದಾದಾಗ ದ್ವಿಚಕ್ರ ವಾಹನಕ್ಕೆ ಬಸ್ ತಗುಲಿದೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ತೇಜಸ್ ತಲೆ ಮೇಲೆಯೇ ಬಸ್‌ನ ಚಕ್ರಗಳು ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಬಸ್ ಹಿಂದಿಕ್ಕುವ ಭರದಲ್ಲಿ ಈ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.