BMTC bus: ಬಿಎಂಟಿಸಿ ಬಸ್‌ ಹರಿದು ಸ್ಥಳದಲ್ಲೇ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


Team Udayavani, Oct 15, 2023, 1:20 PM IST

tdy-12

ಬೆಂಗಳೂರು: ಯಶವಂತಪುರದ ಗಾರೆಪ್ಪನಪಾಳ್ಯ ರಸ್ತೆಯಲ್ಲಿ ಶನಿವಾರ ಬಿಎಂಟಿಸಿ ಬಸ್‌ ಹರಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಕಮಲಾನಗರದ ನಿವಾಸಿ ಗಂಗಾಧರ್‌ (21) ಮೃತ ದುರ್ದೈವಿ.

ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗಂಗಾಧರ್‌, ಎಚ್‌ ಎಎಲ್‌ನಲ್ಲಿ ಇಂಟರ್ನ್ಶಿಪ್‌ ಮಾಡುವ ಸಲುವಾಗಿ ಕಾಲೇಜಿನಿಂದ ಪ್ರಮಾಣಪತ್ರ ತರಲು ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಲಿಖೀತ್‌ ಜೊತೆಗೆ ಬೈಕ್‌ನಲ್ಲಿ ಹಿಂಬದಿ ಕುಳಿತುಕೊಂಡು ಎಚ್‌ಎಎಲ್‌ ಕಡೆಗೆ ಹೋಗುತ್ತಿದ್ದ. ಮಾರ್ಗಮಧ್ಯೆ ಯಶವಂತಪುರದ ಗಾರೆಪ್ಪನಪಾಳ್ಯ ರಸ್ತೆಯ ಹೂವಿನ ಮಾರ್ಕೆಟ್‌ ಸಮೀಪ ಬಿಎಂಟಿಸಿ ಬಸ್‌ ಹಿಂಭಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಗಂಗಾಧರ್‌ ನೆಲಕ್ಕುರುಳಿ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಬೈಕ್‌ ಚಲಾಯಿಸುತ್ತಿದ್ದ ಆತನ ಸ್ನೇಹಿತ ಲಿಖಿತ್‌ಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಸ್‌ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ 10 ದಿನಗಳಲ್ಲಿ ಬಿಎಂಟಿಸಿ ಬಸ್‌ಗೆ ಬಲಿಯಾದ ಮೂರನೇ ಸಾವು ಇದಾಗಿದೆ.

ಯಲಹಂಕ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಅ.5ರಂದು ಸಂಜೆ ಅಟ್ಟೂರಿನ ಡೇರಿ ಬಳಿ ಓವರ್‌ಟೇಕ್‌ ಮಾಡುವ ಭರದಲ್ಲಿ ಬಿಎಂಟಿಸಿ ಬಸ್‌ ಬೈಕ್‌ಗೆ ಡಿಕ್ಕಿಯಾಗಿ ಭರತ್‌ರೆಡ್ಡಿ (23) ಮೃತಪಟ್ಟಿದ್ದ. ಅ.9ರಂದು ಹುಳಿಮಾವು ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಾರೇಪಾಳ್ಯ ಜಂಕ್ಷನ್‌ನಲ್ಲಿ ಬಿಎಂಟಿಸಿ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿತ್ತು.

ಟಾಪ್ ನ್ಯೂಸ್

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.