![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 8, 2020, 4:14 PM IST
ಬೆಂಗಳೂರು: ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ವಿತರಣಾ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಆಯ್ದ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಅನುಕೂಲಕ್ಕಾಗಿ ಬಸ್ ಸೇವೆ ಕಲ್ಪಿಸಲಾಗಿದೆ. ಸರ್ಕಾರಿ, ನಿಗಮ-ಮಂಡಳಿ, ಬ್ಯಾಂಕ್, ವಿಮಾ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮಾಸಿಕ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಕೆಲವು ನಿರ್ದೇಶನಗಳನ್ನು ನೀಡಿ ಬಿಎಂಟಿಸಿ ಆದೇಶ ಹೊರಡಿಸಿದೆ.
ಅದರಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳ ಸಿಬ್ಬಂದಿ ಹಾಗೂ ಅಗತ್ಯಸೇವೆಗಳ ಸಿಬ್ಬಂದಿ ಮಾತ್ರ ಈ ಬಸ್‌ಗಳಲ್ಲಿ ಪ್ರಯಾಣಿ ಸಬಹುದು. ಮಾಸಿಕ ಪಾಸುಗಳ ಆಧಾರದಲ್ಲಿ ಸೇವೆ ನೀಡಲಾಗುತ್ತದೆ. ನಿರ್ವಾಹಕರು ಯಾವುದೇ ಟಿಕೆಟ್ ವಿತರಿಸುವಂತಿಲ್ಲ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ. ನಿರ್ವಾಹಕರು ಪಾಸು ಮತ್ತು ಪ್ರಯಾಣಿಕರ ಗುರುತಿನಚೀಟಿ ಪರಿಶೀಲಿಸಿದ ನಂತರವೇ ಬಸ್‌ನಲ್ಲಿ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಬಸ್ ಸೌಲಭ್ಯ: ಬಿಎಂಟಿಸಿ ವತಿಯಿಂದ ಸರ್ಕಾರಿ ಅಧಿಕಾರಿ, ನೌಕರರು, ಪತ್ರಕರ್ತರರಿಗೆ ಶುಕ್ರವಾರ ಸೌಲಭ್ಯ ಒದಗಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮೇ. 8 ರಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು ಬಸ್ ಸೌಲಭ್ಯ ಪಡೆಯಲು ತಲಾ ಒಬ್ಬರಿಗೆ 850 ರೂ. ಗಳ ಬಸ್ ಪಾಸಿನ ದರವನ್ನು ನಿಗದಿಪಡಿಸಿದೆ.
You seem to have an Ad Blocker on.
To continue reading, please turn it off or whitelist Udayavani.