ಬೋಟ್‌ ನಾಪತ್ತೆ: ಸಚಿವದ್ವಯರ ದ್ವಂದ್ವ ಹೇಳಿಕೆ​​​​​​​

Team Udayavani, Jan 13, 2019, 12:30 AM IST

venkatrao-nadagoudamb-patil.jpg

ಬೆಂಗಳೂರು: ಉಡುಪಿಯಿಂದ ನಾಪತ್ತೆಯಾಗಿರುವ ಮೀನುಗಾರರ ಸುಳಿವಿನ ಬಗ್ಗೆ ಮೈತ್ರಿ ಸರ್ಕಾರದ ಇಬ್ಬರು ಸಚಿವರ ಹೇಳಿಕೆಗಳು ಗೊಂದಲ ಮೂಡಿಸಿವೆ. ಮೀನುಗಾರರ ಸುಳಿವಿನ ಕುರಿತಾಗಿ ಇಬ್ಬರು ಪರಸ್ಪರ ವೈರುಧ್ಯದ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆ ಸಂಬಂಧ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ.

ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅವರು ನಾಪತ್ತೆಯಾಗಿರುವ ಮೀನುಗಾರರನ್ನು ಮಹಾರಾಷ್ಟ್ರದವರು ಹಿಡಿದಿಟ್ಟಿರುವ ಸಾಧ್ಯತೆಯಿದೆ ಎಂಬ ಮಾಹಿತಿಯಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್‌, ನಾಪತ್ತೆಯಾಗಿರುವ ಮೀನುಗಾರರ ಸುಳಿವು ಸಿಕ್ಕಿದೆ ಎನ್ನುವುದು ಸುಳ್ಳು.ಮೀನುಗಾರರ ಹುಡುಕಾಟ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯ ಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ವೆಂಕಟರಾವ್‌ ನಾಡಗೌಡ, ಆಗಾಗ ಮಹಾರಾಷ್ಟ್ರದವರು ನಮ್ಮ ಮೀನುಗಾರರನ್ನು ಹಿಡಿದು ದಂಡ ಹಾಕುತ್ತಾರೆ.

ಈಗಲೂ ನಾಪತ್ತೆಯಾಗಿರುವ ಮೀನುಗಾರರನ್ನು ಅವರೇ ಹಿಡಿದಿಟ್ಟುಕೊಂಡಿರುವ ಶಂಕೆಯಿದೆ. ಕಾಣೆಯಾದ ಬೋಟ್‌ನಿಂದ μಶ್‌ ಕೇಸ್‌ ಗಳೂ ಮೀನುಗಾರರಿಗೆ ಸಿಕ್ಕಿವೆ. ಈ ಎಲ್ಲ ಮಾಹಿತಿ ಇಟ್ಟುಕೊಂಡು ತನಿಖೆ ಮಾಡಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರದ ಮೇಲೂ ಒತ್ತಡ ಹಾಕುವಂತೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಗುಜರಾತ್‌, ಗೋವಾ ಸರ್ಕಾರದ ಜತೆಯೂ ಮಾತನಾಡಿದ್ದೇನೆ ಎಂದರು.

ದೋಣಿಯಲ್ಲಿ ರೇಡಿಯೇಟರ್‌ ಸಮಸ್ಯೆ ಅಂತ ವಾಪಸ್‌ ಬಂದು ಮತ್ತೆ ಹೋಗಿದ್ದು ಅಲ್ಲಿಂದ ಸಂಪರ್ಕ ಕಳೆದುಕೊಂಡಿದೆ. 12 ನಾಟಿಕಲ್‌ ಮೈಲು ಬೋಟ್‌ ದಾಟಿ ಹೋಗಿದೆ. ಕೇಂದ್ರ ಸರ್ಕಾರದ ಮೇಲೂ ಈ ಕುರಿತು ಹೆಚ್ಚಿನ ಜವಾಬ್ದಾರಿ ಇದೆ. ಕೋಸ್ಟ್‌ ಕಾರ್ಡ್‌, ನೌಕಾ ಪಡೆ ನೆರವು ಕೇಳಿದ್ದೇವೆ. ಅವರೂ ಬಂದು ಹೆಲಿಕಾಪ್ಟರ್‌ ಮೂಲಕ ಶೋಧನೆ ಮಾಡಿದ್ದಾರೆ ಎಂದು ಹೇಳಿದರು.

ಸುಳಿವು ಸಿಕ್ಕಿದೆ ಎನ್ನುವುದು ಸುಳ್ಳು: ಇನ್ನೊಂದೆಡೆ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಎಂ.ಬಿ. ಪಾಟೀಲ್‌, ನಾಪತ್ತೆಯಾಗಿರುವ ಮೀನುಗಾರರ ಸುಳಿವು ಸಿಕ್ಕಿದೆ ಎನ್ನುವುದು ಸುಳ್ಳು. ಮೀನುಗಾರರ ಹುಡುಕಾಟ ಮುಂದುವರಿದಿದೆ. ಮೀನುಗಾರರನ್ನು ಪತ್ತೆ ಹಚ್ಚಲು ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಹಾಗೂ ಗೋವಾ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ ಎಂದು ಹೇಳಿದರು.

ರಾಜ್ಯ ಮುಖ್ಯ ಕಾರ್ಯದರ್ಶಿಯಿಂದ ಇಸ್ರೋಗೂ ಸಹಕಾರ ಕೋರಿ ಪತ್ರ ಬರೆಸಲಾಗುವುದು. ರಾಜ್ಯ ಸಚಿವ ಸಂಪುಟದಲ್ಲೂ ಆ ಬಗ್ಗೆ ಚರ್ಚೆಯಾಗಿದೆ.ಮೀನುಗಾರರ ಕುಟುಂಬಗಳು ಆತಂಕದಲ್ಲಿವೆ.ಕೇರಳದ ಕೊಚ್ಚಿನಲ್ಲೂ ಹುಡುಕಾಟ ನಡೆದಿದೆ.ಯಾವುದೇ ಕಾರಣಕ್ಕೂ ತಪ್ಪು ಸಂದೇಶ ಕೊಡುವುದು ಬೇಡ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.