ಮಹಿಳಾ ದೌರ್ಜನ್ಯ ಪ್ರಕರಣಗಳ ಅಸಮರ್ಪಕ ತನಿಖೆಗೆ ಬೇಸರ
Team Udayavani, Mar 8, 2017, 12:04 PM IST
ಬೆಂಗಳೂರು: ನಗರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 95 ಪ್ರಕರಣ ದಾಖಲಾಗಿದ್ದು ಆ ಪೈಕಿ ಕೆಲವು ಪ್ರಕರಣಗಳಲ್ಲಿ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ರೇಖಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೌರ್ಜನ್ಯದ ಪ್ರಕರಣಗಳಲ್ಲಿ ಸಂತ್ರಸ್ತೆಯರ ಮೇಲೆ ಒತ್ತಡ ಹಾಕಿ ಪ್ರಕರಣ ಇತ್ಯರ್ಥಪಡಿಸಿರುವ ಆರೋಪಗಳು ಕೇಳಿ ಬಂದಿವೆ,” ಎಂದರು. “ಮಹಿಳೆಯರ ಮೇಲಿನ ದೌರ್ಜನ್ಯ ಆರೋಪದ ಪ್ರಕರಣಗಳು ದಾಖಲಾದ ತಕ್ಷಣವೇ ಪೊಲೀಸರು ತೆಗೆದುಕೊಂಡ ಕ್ರಮ ಕುರಿತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿ ನೀಡಬೇಕು.
ಆದರೆ, ಪೊಲೀಸರು ಈಗಷ್ಟೇ ವರದಿ ತಯಾರಿಸುವಲ್ಲಿ ನಿರತರಾಗಿರುವುದು ಕಂಡು ಬಂದಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಲಾಗುವುದು,” ಎಂದು ತಿಳಿಸಿದರು. “ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪೊಲೀಸ್ ಠಾಣೆಗಳು ಸ್ಥಾಪನೆಯಾಗಿವೆ. ಆದರೆ, ಮಹಿಳೆಯರ ಸುರಕ್ಷತೆ ದೃಷ್ಟಿಯಲ್ಲಿ ಮಹತ್ವದ ಬೆಳವಣಿಗೆ ಸಾಧ್ಯವಾಗಿಲ್ಲ.
ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ದೂರು ನೀಡಲು ಠಾಣೆಗೆ ಬಂದರೆ ಕೆಲ ಪೊಲೀಸರು ಸ್ಪಂದಿಸುವುದಿಲ್ಲ. ಮಹಿಳೆಯರಿಗಾಗಿಯೇ ಮಹಿಳಾ ಠಾಣೆಗಳಲ್ಲಿ ಪ್ರತ್ಯೇಕವಾಗಿ ಮಹಿಳಾ ಡೆಸ್ಕ್ ಆರಂಭಿಸುವ ಅಗತ್ಯವಿದೆ,” ಎಂದು ಅಭಿಪ್ರಾಯಪಟ್ಟರು. ಉತ್ತರ ಭಾರತದ ರಾಜ್ಯಗಳ ನಗರಗಳಿಗೆ ಹೋಲಿಕೆ ಮಾಡಿದರೆ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.