ಅಪರಾಧ ಪ್ರಕರಣಕ್ಕೆ ಕಡಿವಾಣ ಹಾಕಿ

Team Udayavani, Jun 10, 2018, 6:35 AM IST

180609kpn93.jpg

ಬೆಂಗಳೂರು: ತಮಗೆ ಗೃಹ ಖಾತೆ ಹಂಚಿಕೆಯಾದ ಮಾರನೇ ದಿನವೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸೇರಿ
ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಉಪಮುಖ್ಯಮಂತ್ರಿ ಡಾ.ಪರಮೇಶ್ವರ್‌, ಗೃಹ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಇರುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ಸರ್ಕಾರದ ಪ್ರಥಮ ಆದ್ಯತೆ. ಆದ್ದರಿಂದ ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಸಮಾಜಘಾತಕ ಶಕ್ತಿಗಳು, ಶಾಂತಿ ಕದಡುವವರ ಬಗ್ಗೆ ನಿಗಾವಹಿಸಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ನಿರ್ದೇಶಿಸಿದರು.

ಜೂ. 16ರ ಬಳಿಕ ಮತ್ತೆ ಸಭೆ: ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಇದು ಆರಂಭಿಕ ಸಭೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಭೆ ನಡೆಸಿ ಇಲಾಖೆ ಕಾರ್ಯವೈಖರಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜೂ.16ರ ನಂತರ ಮತ್ತೆ ಪೊಲೀಸ್‌ ಹಿರಿಯ ಅಧಿಕಾರಿಗಳೊಂದಿಗೆ ವಿಭಾಗವಾರು ಸಭೆ ನಡೆಸಿ, ಸಮಗ್ರವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸುನೀಲ್‌ ಕುಮಾರ್‌, ಡಿಜಿಪಿಗಳಾದ ಎಚ್‌.ಸಿ.ಕಿಶೋರ್‌ಚಂದ್ರ, ಎಂ.ಎನ್‌.ರೆಡ್ಡಿ , ಎ.ಎಂ.ಪ್ರಸಾದ್‌, ಪಿ.ಕೆ.ಗರ್ಗ್‌, ಪ್ರವೀಣ್‌ ಸೂದ್‌, ಎಡಿಜಿಪಿಗಳಾದ ಅಲೋಕ್‌ ಮೋಹನ್‌, ಪರಶಿವಮೂರ್ತಿ, ಕಮಲ… ಪಂತ್‌, ಎಂ.ಎ.ಸಲೀಂ, ಆರ್‌.ಪಿ.ಶರ್ಮಾ, ರಾಘವೇಂದ್ರ ಔರಾದ್ಕರ್‌, ಪ್ರತಾಪ್ ರೆಡ್ಡಿ, ಅಮರ್‌ಕುಮಾರ್‌ ಪಾಂಡೆ, ಮಾಲಿನಿ ಕೃಷ್ಣಮೂರ್ತಿ,
ಪಿ.ಕೆ.ಠಾಕೂರ್‌, ಐಜಿಪಿಗಳಾದ ಉಮೇಶ್‌ ಕುಮಾರ್‌,ಹರಿಶೇಖರನ್‌, ಬಿ.ಕೆ.ಸಿಂಗ್‌, ನಂಜುಂಡಸ್ವಾಮಿ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಗೌರಿ, ಕಲಬುರಗಿ ಹಂತಕರ ಶೀಘ್ರ ಬಂಧನಕ್ಕೆ ಸೂಚನೆ
ಪತ್ರಕರ್ತೆ ಗೌರಿ ಲಂಕೇಶ್‌ ಮತ್ತು ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು
ಶೀಘ್ರವೇ ಬಂಧಿಸುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಡಿಸಿಎಂ ಡಾ.ಜಿ.ಪರಮೇಶ್ವರ್‌
ಹೇಳಿದ್ದಾರೆ. ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಗೌರಿ ಲಂಕೇಶ್‌ ಹಾಗೂ ಕಲಬುರಗಿ ಅವರ ಹತ್ಯೆ ಕುರಿತಂತೆ
ಅಧಿಕಾರಿಗಳಿಂದ ವಿವರ ಮಾಹಿತಿ ಪಡೆದಿದ್ದೇನೆ.

ಎರಡೂ ಪ್ರಕರಣಗಳಲ್ಲಿ ತನಿಖೆಯ ಪ್ರಗತಿ ಬಗ್ಗೆ ಅಧಿಕಾರಿಗಳು ವಿವರ ಒದಗಿಸಿದ್ದಾರೆ. ಜತೆಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಒದಗಿಸುವುದಾಗಿ ಹೇಳಿದ್ದಾರೆ. ಇದೆಲ್ಲವನ್ನೂ ಪರಾಮರ್ಶಿಸಿದ ಬಳಿಕ ಹಂತಕರನ್ನು ಬಂಧಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದರು.

ಟಾಪ್ ನ್ಯೂಸ್

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.