ಶೂ ಖರೀದಿಯಲ್ಲಿ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಬ್ರೇಕ್‌

Team Udayavani, Jul 9, 2017, 3:50 AM IST

shoes.jpg

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್‌ ಖರೀದಿಸಿ, ವಿತರಿಸುವ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ(ಎಸ್‌ಡಿಎಂಸಿ) ವಹಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಂತೆ ಖಡಕ್‌ ಎಚ್ಚರಿಕೆ ನೀಡಲಾಗಿದೆ.

1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಪಾದರಕ್ಷೆಯ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಶೂ ಅಥವಾ ಸ್ಯಾಂಡಲ್ಸ್‌ ಹಾಗೂ ಸಾಕ್ಸ್‌ ಖರೀದಿಸಿ ವಿತರಿಸುವಂತೆ ಎಲ್ಲಾ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಸದಸ್ಯರಿಗೆ ಸೂಚಿಸಿ,
ಇಲಾಖೆಯಿಂದ ಅವರ ಖಾತೆಗೆ ಹಣ ಜಮಾ ಮಾಡಲಾಗಿದೆ. ಕಪ್ಪು ಬಣ್ಣದ ಒಂದು ಜತೆ ಶೂ ಅಥವಾ ಸ್ಯಾಂಡಲ್ಸ್‌ ಹಾಗೂ ಎರಡು ಜತೆ ಸಾಕ್ಸ್‌(ಕಾಲುಚೀಲ) ಖರೀದಿಗೆ ನಿರ್ದೇಶನ ನೀಡಲಾಗಿದೆ.

ಶೂ ಅಥವಾ ಸ್ಯಾಂಡಲ್ಸ್‌ ಮತ್ತು ಸಾಕ್ಸ್‌ ಖರೀದಿಗೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರಾಗಲಿ, ಕ್ಷೇತ್ರ
ಶಿಕ್ಷಣಾಧಿಕಾರಿಗಳಾಗಲಿ, ಬಿಆರ್‌ಪಿ ಅಥವಾ ಸಿಆರ್‌ಪಿಗಳಿಗೆ ಯಾವುದೇ ಅಧಿಕಾರ ನೀಡಿಲ್ಲ. ಹೀಗಾಗಿ ಸರ್ಕಾರಿ ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಶೂ, ಸಾಕ್ಸ್‌ ಖರೀದಿ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ದೂರು ಬಂದರೆ, ಅಂಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಕಟ್ಟುನಿಟ್ಟಾಗಿ ಸೂಚಿಸಿದೆ. ಪ್ರತಿ ಶಾಲೆಯ ಎಸ್‌ಡಿಎಂಸಿಗಳು ಪ್ರತ್ಯೇಕವಾಗಿಯೇ ಶೂ, ಸಾಕ್ಸ್‌ ಖರೀದಿಸಬೇಕು. ಯಾವುದೇ ಕಾರಣಕ್ಕೂ ಒಂದಕ್ಕಿಂತ ಅಧಿಕ ಶಾಲೆಗಳಾಗಲಿ ಅಥವಾ ಬ್ಲಾಕ್‌, ಕ್ಲಸ್ಟರ್‌ ಮಟ್ಟದಲ್ಲಿ ಕೇಂದ್ರೀಕೃತ ಮಾದರಿಯಲ್ಲಿ ಶೂ, ಸಾಕ್ಸ್‌ ಖರೀದಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗುಣಮಟ್ಟ ಪರಿಶೀಲನೆಗೆ ಸಮಿತಿ: ಶೂ, ಸಾಕ್ಸ್‌ ನ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾ ಹಣಾಧಿಕಾರಿಗಳು ಪ್ರತಿ ತಾಲೂಕಿನಲ್ಲೂ ಒಂದೊಂದು ಸಮಿತಿ ರಚಿಸಲಿದ್ದಾರೆ. ಶೂ ಖರೀದಿಗೆ ಸಂಬಂಧಿಸಿದಂತೆ ಎಸ್‌ ಡಿಎಂಸಿಯಿಂದಲೂ ಒಂದು ಸಮಿತಿ ರಚಿಸಿಕೊಳ್ಳಲಿದ್ದಾರೆ. ಎಸ್‌ಡಿಎಂಸಿ ಅಧ್ಯಕ್ಷರೇ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಶಾಲಾ ಮುಖ್ಯ ಶಿಕ್ಷಕರು, ಇಬ್ಬರು ಮಹಿಳೆಯರು ಸೇರಿ ಎಸ್‌ಡಿಎಂಸಿ ನಾಮನಿರ್ದೇಶಿತ ಮೂವರು ಸದಸ್ಯರು ಇರುತ್ತಾರೆ.

ಪ್ರಾದೇಶಿಕ ಪರಿಸರಕ್ಕೆ ಹೊಂದಿಕೊಳ್ಳುವ ಶೂ ವಿತರಣೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಭಿನ್ನವಾದ ವಾತಾವರಣ ಇರುತ್ತದೆ. ಅಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುವಂತೆ ಶೂ, ಸ್ಯಾಂಡಲ್‌ ಹಾಗೂ ಸಾಕ್ಸ್‌ ಖರೀದಿಸಬೇಕು. ಕರಾವಳಿ ಮತ್ತು ಮಲೆನಾಡಿನಲ್ಲಿ ವರ್ಷದಲ್ಲಿ ಮೂರ್‍ನಾಲ್ಕು ತಿಂಗಳು ಮಳೆ ಇರುವುದರಿಂದ ಶೂ ಧರಿಸುವುದು ಕಷ್ಟವಾದರೆ ಸ್ಯಾಂಡಲ್ಸ್‌ ವಿತರಣೆ ಮಾಡಬಹುದು. ಹಾಗೆಯೇ ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದಲೂ ಶೂ ಧರಿಸುವುದು ಕಷ್ಟವಾದರೆ ಸ್ಯಾಂಡಲ್‌ ವಿತರಣೆ ಮಾಡಬಹುದು. ಆದರೆ, ಬಣ್ಣದಲ್ಲಿ ಯಾವುದೇ ವ್ಯತ್ಯಾಸ ಆಗಬಾರದು ಮತ್ತು ಇದು ಸಮಿತಿಯ ತೀರ್ಮಾನವಾಗಿರಬೇಕು ಎಂಬ ಸೂಚನೆಯನ್ನು ಇಲಾಖೆ ನೀಡಿದೆ.

ಟಾಪ್ ನ್ಯೂಸ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Andhra-CM-Naidu

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ

Naxal BIG

Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Andhra-CM-Naidu

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ

Naxal BIG

Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.