ಎನ್‌ಸಿಇಆರ್‌ಟಿ ಪಠ್ಯದ ಮಾಹಿತಿಗೆ ಬ್ರಿಡ್ಜ್ ಕೋರ್ಸ್‌

Team Udayavani, Apr 15, 2018, 6:45 AM IST

Ban15041806Medn.jpg

ಬೆಂಗಳೂರು : ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿಗೆ ಸರ್ಕಾರಿ ಕಾಲೇಜು  ಸೇರಲಿರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಮತ್ತು ಪಠ್ಯಕ್ರಮದ ಮಾಹಿತಿ ನೀಡಲು ಮುಂದಿನ ಶೈಕ್ಷಣಿಕ ಸಾಲಿನಿಂದ ಬ್ರಿಡ್ಜ್ ಕೋರ್ಸ್‌ (ಸೇತುಬಂಧ) ಕಡ್ಡಾಯ ಮಾಡಲಾಗಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನೇ ಗಮನದಲ್ಲಿಟ್ಟುಕೊಂಡು ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳಿಗೆ ಇದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.

2018-19ನೇ ಸಾಲಿನಿಂದ ಎಸ್ಸೆಸ್ಸೆಲ್ಸಿಯ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮ ಅವಳಡಿಸಿಕೊಳ್ಳಲಾಗುತ್ತಿದೆ. ಆದರೆ, ಪಿಯುಸಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಈಗಾಗಲೇ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ರಾಜ್ಯ ಪಠ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿ ಎನ್‌ಸಿಇಆರ್‌ಟಿ ಪಠ್ಯಕ್ರಮದಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಂದವರಿಸುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ಪಿಯು ಇಲಾಖೆ  2018-19ನೇ ಸಾಲಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್‌ ಕಡ್ಡಾಯ ಮಾಡಿದೆ. ಇತ್ತೀಚೆಗೆ ಪ್ರಕಟಿಸಿರುವ ಶೈಕ್ಷಣಿಕ ವೇಳಾಪಟ್ಟಿಯಲ್ಲೇ  ಈ ಬಗ್ಗೆ ಸ್ಪಷ್ಟ ಪಡಿಸಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರ ಪ್ರದೇಶದಲ್ಲಿ ಸಿಬಿಎಸ್‌ಇ ಅಥವಾ ಐಸಿಎಸ್‌ಇ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್‌ ಅಗತ್ಯವಿರುವುದಿಲ್ಲ. ಆದರೆ, ರಾಜ್ಯ ಪಠ್ಯಕ್ರಮದಲ್ಲಿ  ಓದಿದ ವಿದ್ಯಾರ್ಥಿಗಳಿಗೆ ಇದು ಅನಿವಾರ್ಯವಾಗಿದೆ. ಪಿಯುಸಿ ಸೇರಿದ ವಿದ್ಯಾರ್ಥಿಗಳಿಗೆ ಒಮ್ಮೆಗೆ ಎನ್‌ಸಿಇಆರ್‌ಟಿ ಪಠ್ಯಕ್ರಮ ಹೊರೆಯಾಗಿ ಕಾಣಬಾರದು. ಎನ್‌ಸಿಇಆರ್‌ಟಿ ಪಠ್ಯದ ಮೂಲಾಂಶಗಳನ್ನು ತರಗತಿಯ ಆರಂಭದಲ್ಲಿ ಕಲಿಸಿದರೆ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸುಲಭವಾಗಿ ಅರ್ಥೈಸಿಕೊಳ್ಳುತ್ತಾರೆ. ಹೀಗಾಗಿ ಬ್ರಿಡ್ಜ್ಕೋರ್ಸ್‌ ಕಡ್ಡಾಯ ಮಾಡಲಾಗಿದೆ ಎಂದು ಪಿಯು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಬ್ರಿಡ್ಜ್ ಕೋರ್ಸ್‌ನಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮಕ್ಕೆ ಆದ್ಯತೆ ನೀಡಲಾಗುತ್ತದೆ. ಮೇ.14ರಿಂದ ಪ್ರಥಮ ಪಿಯುಸಿ ತರಗತಿ ಆರಂಭವಾಗಲಿದ್ದು, ಅಂದಿನಿಂದಲೇ ಬ್ರಿಡ್ಜ್ ಕೋರ್ಸ್‌ ಕೂಡ ನಡೆಯಲಿದೆ. ಸಮಯದ ಹೊಂದಾಣಿಕೆಯ ಆಧಾರದಲ್ಲಿ ಬ್ರಿಡ್ಜ್ ಕೋರ್ಸ್‌ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಲಾಗುತ್ತದೆ. ಪಿಯುಸಿಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಸೇರಿಕೊಳ್ಳುವ ವಿದ್ಯಾರ್ಥಿಗಳಿಗೆ ಇದು ಇರಲಿದೆ.

ಟಾಪ್ ನ್ಯೂಸ್

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಏಲಕ್ಕಿ ನಾಡಿಗಿಂತ ಸಕ್ಕರೆ ನಾಡು ಸಮ್ಮೇಳನ ಭಿನ್ನ: ಡಾ| ಮಹೇಶ್‌ ಜೋಶಿ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

CM-teach

Suvarna Soudha: ಅನುಭವ ಮಂಟಪದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.