ಬ್ರಿಗೇಡ್‌ ಜಗಳಕ್ಕೆ ಕಾರ್ಯಕಾರಿಣಿ ತುಪ್ಪ!


Team Udayavani, Jan 23, 2017, 3:45 AM IST

21BNP5.jpg

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ವಿಚಾರವಾಗಿ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲದ ಬೆಂಕಿಗೆ ಕಲಬುರಗಿಯಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯಕಾರಿಣಿ ತುಪ್ಪ ಸುರಿದಿದ್ದು, ಇದರಿಂದ ವಿವಾದ ಇನ್ನಷ್ಟು ತೀವ್ರಗೊಳ್ಳುವ ಆತಂಕ ಕಾಣಿಸಿಕೊಂಡಿದೆ. ಬ್ರಿಗೇಡ್‌ ಕುರಿತ ವಿವಾದ ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಿ ಗೊಂದಲ ತಕ್ಕಮಟ್ಟಿಗೆ ಪರಿಹಾರವಾಗಬಹುದು ಎಂದು ನಿರೀಕ್ಷಿಸಲಾಗಿತ್ತಾದರೂ ಅದು ಸಂಪೂರ್ಣ ಹುಸಿಯಾಗಿದೆ. ಬದಲಾಗಿ, ಇನ್ನಷ್ಟು ಕಾವೇರುವಂತಹ ವಾತಾವರಣ ಕಾಣಿಸಿಕೊಂಡಿದೆ. 

ಪಕ್ಷದಲ್ಲಿ ಗೊಂದಲಗಳಿದ್ದರೆ ಅವುಗಳನ್ನು ಬಗೆಹರಿಸುವ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯುತ್ತದೆ. ಆದರೆ, ಕಾರ್ಯಕಾರಿಣಿಯಲ್ಲಿ ಈ ಕುರಿತು ಚರ್ಚಿಸುವ ಬದಲು ಬ್ರಿಗೇಡ್‌ನ‌ಲ್ಲಿ ಭಾಗವಹಿಸುವವರ ವಿರುದ್ಧ ಕ್ರಮಕ್ಕೆ ಯಡಿಯೂರಪ್ಪ ಬಣದವರು ಆಗ್ರಹಿಸಿದ್ದು, ಅದರಲ್ಲಿ ಗುರುತಿಸಿಕೊಂಡಿರುವ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಆದಿಯಾಗಿ ಅವರ ಬೆಂಬಲಿಗರು ಮತ್ತು ಬ್ರಿಗೇಡ್‌ನ‌ಲ್ಲಿರುವ ಬಿಜೆಪಿಯವರನ್ನು ಕೆರಳಿಸಿದೆ. 

ಬ್ರಿಗೇಡ್‌ನ‌ಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕ್ರಮಕ್ಕೆ ಕಾರ್ಯಕಾರಿಣಿಯಲ್ಲಿದ್ದ ಬಹುತೇಕ ಮಂದಿ ಬೆಂಬಲವಾಗಿದ್ದರೂ, ಪಕ್ಷದಲ್ಲಿರುವ ಕೆಲವು ಹಿರಿಯ ಮುಖಂಡರು ಪರೋಕ್ಷವಾಗಿ ಈಶ್ವರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ, ಬ್ರಿಗೇಡ್‌ ಸಂಘಟನೆಯಲ್ಲಿ ಮುಂದುವರಿಯಲು ನಿರ್ಧರಿಸಿರುವ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವುದಿಲ್ಲ. ಜ.26ಕ್ಕೆ ಕೂಡಲಸಂಗಮದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತೇನೆ. ಬಿಜೆಪಿಗೆ ಬೆಂಬಲವಾಗಿ ಅದು ನಡೆಯುತ್ತಿರುವುದರಿಂದ ರಾಷ್ಟ್ರೀಯ ನಾಯಕರು ಒಪ್ಪಿಕೊಳ್ಳುತ್ತಾರೆ ಎಂಬ ಭರವಸೆ ತಮಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಆದರೆ, ಬ್ರಿಗೇಡ್‌ಗೆ ವಿರೋಧ ಮುಂದುವರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಬ್ರಿಗೇಡ್‌ನಿಂದ ಪಕ್ಷ ಸಂಘಟನೆಗೆ ಧಕ್ಕೆಯಾಗುತ್ತಿದೆ. ಈ ಜನ್ಮದಲ್ಲಿ ತಾವು ಖಂಡಿತವಾಗಿಯೂ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಅಲ್ಲದೆ, ಬಿಜೆಪಿಗೆ ಯಾವುದೇ ವ್ಯಕ್ತಿ ಮುಖ್ಯವಲ್ಲ ಎಂದು ಹೇಳುವ ಮೂಲಕ ಬ್ರಿಗೇಡ್‌ನ‌ ಸಭೆಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ಶಿಸ್ತುಕ್ರಮ ಮುಂದುವರಿಸುವ ಪರೋಕ್ಷ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

ಈಶ್ವರಪ್ಪಗೆ ಪರೋಕ್ಷ ಬೆಂಬಲ: 
ರಾಜ್ಯ ಕಾರ್ಯಕಾರಿಣಿಯಲ್ಲಿ ಹಾಜರಿದ್ದ ಬಹುತೇಕ ಮಂದಿ ಈಶ್ವರಪ್ಪ ಮತ್ತು ಬ್ರಿಗೇಡ್‌ ವಿರುದ್ಧವಿದ್ದರೂ ಪಕ್ಷ ಸಂಘಟನೆ, ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಯಡಿಯೂರಪ್ಪ ಅವರ ಏಕಪಕ್ಷೀಯ ನಿರ್ಧಾರಗಳಿಂದ ಅಸಮಾಧಾನಗೊಂಡಿದ್ದು, ಈಶ್ವರಪ್ಪ ಅವರಿಗೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. ಬ್ರಿಗೇಡ್‌ ವಿಚಾರದಲ್ಲಿ ನೀವು ಮುಂದುವರಿಯಿರಿ. ನಿಮ್ಮ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದು, ಕಾರ್ಯಕಾರಣಿ ಬಳಿಕವೂ ಈ ಮಾತನ್ನು ಪುನರುತ್ಛರಿಸಿದ್ದಾರೆ ಎನ್ನಲಾಗಿದೆ. ಇದು ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿರುವ ಈಶ್ವರಪ್ಪ ಅವರಿಗೆ ಮತ್ತಷ್ಟು ಬಲ ತಂದುಕೊಟ್ಟಿದೆ.

ಈ ಇಬ್ಬರೂ ಮುಖಂಡರ ಮಾತುಗಳು ಮತ್ತು ಕಾರ್ಯಕಾರಿಣಿಯಲ್ಲಿ ನಡೆದ ಬೆಳವಣಿಗೆಗಳು ಪಕ್ಷದಲ್ಲಿ ಈಗಾಗಲೇ ಉದ್ಭವವಾಗಿರುವ ಎರಡು ಗುಂಪುಗಳನ್ನು ಮತ್ತಷ್ಟು ದೂರವಾಗುವಂತೆ ಮಾಡುವುದು ಖಂಡಿತ ಎಂದು ಮೂಲ ಬಿಜೆಪಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಾರ್ಯಕಾರಿಣಿಯಲ್ಲಿ ಗೊಂದಲದ ಬಗ್ಗೆ ಚರ್ಚಿಸಿ ಅದನ್ನು ತಿಳಿಗೊಳಿಸುವ ಪ್ರಯತ್ನ ಮಾಡಬೇಕಿತ್ತು. ಆದರೆ, ನೇರವಾಗಿ ಬ್ರಿಗೇಡ್‌ನ‌ಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರಿಂದ ಗುಂಪುಗಾರಿಕೆ ಹೆಚ್ಚಾಗುವಂತಾಗಿದೆ ಎಂಬುದು ಅವರ ಅಭಿಮತ.

ವರಿಷ್ಠರಿಗೆ ವರದಿ ನೀಡಲು ಮುರಳೀಧರ ರಾವ್‌ ನಿರ್ಧಾರ:
ಬ್ರಿಗೇಡ್‌ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ಕುರಿತು ಆದ ಬೆಳವಣಿಗೆಗಳ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಅವರು ಪಕ್ಷದ ಹೈಕಮಾಂಡ್‌ಗೆ ವರದಿ ನೀಡಲು ತೀರ್ಮಾನಿಸಿದ್ದಾರೆ.

ಬ್ರಿಗೇಡ್‌ ಗೊಂದಲ ಕುರಿತಂತೆ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ ಮಾಹಿತಿ ಪಡೆದಿದ್ದಾರೆ. ಅಲ್ಲದೆ, ಎರಡೂ ಕಡೆಯವರ ಬೆಂಬಲಿಗರಿಂದಲೂ ವಿವರ ಸಂಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ವಿವಾದ ರಾಜ್ಯಮಟ್ಟದ ನಾಯಕರ ನಡುವೆ ಇತ್ಯರ್ಥವಾಗುವ ಸಾಧ್ಯತೆ ಇಲ್ಲ ಎಂದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಹೈಕಮಾಂಡ್‌ಗೆ ಈ ಬೆಳವಣಿಗೆಗಳ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಆದರೆ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೊಡಗಿಕೊಂಡಿರುವ ಪಕ್ಷದ ವರಿಷ್ಠರು ಸದ್ಯಕ್ಕೆ ರಾಜ್ಯದ ಭಿನ್ನಾಭಿಪ್ರಾಯದ ಬಗ್ಗೆ ಗಮನ ಹರಿಸುವ ಸ್ಥಿತಿಯಲ್ಲಿಲ್ಲ. ಆ ಚುನಾವಣೆ ಮುಗಿದ ಬಳಿಕವೇ ಭಿನ್ನಮತ ಶಮನಕ್ಕೆ ಪ್ರಯತ್ನಿಸಲಿದ್ದು, ಅದುವರೆಗೆ ಗೊಂದಲ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಲಾಗಿದೆ.

– ಪ್ರದೀಪ್‌ ಕುಮಾರ್‌ ಎಂ.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.