ಗೋದಾಮಿಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು
ಕಾರ್ಮಿಕರು ಪ್ರಾರ್ಥನೆಗಾಗಿ ಮಸೀದಿಗೆ ತೆರಳಿದ್ದ ವೇಳೆ ಅವಘಡ ; ಅದೃಷ್ಟವಷಾತ್ ಪ್ರಾಣಾಪಾಯ ಸಂಭವಿಸಿಲ್ಲ
Team Udayavani, Dec 16, 2022, 9:15 PM IST
ಮಹದೇವಪುರ: ಹಳೆ ಟಿವಿ , ಪ್ರೀಡ್ಜ್ ಹಾಗೂ ವಾಷಿಂಗ್ ಮಿಷನ್ ರಿಪೇರಿ ಗೋದಾಮಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ರಾಂಪುರದಲ್ಲಿ ಜರುಗಿದೆ.
ಶುಕ್ರವಾರ ಮಧ್ಯಾಹ್ನ ಗೋದಾಮಿನ ಕಾರ್ಮಿಕರು ಪ್ರಾರ್ಥನೆಗಾಗಿ ಮಸೀದಿಗೆ ತೆರಳಿದ್ದ ವೇಳೆ ಈ ಅಗ್ನಿ ಅವಘಡ ಸಂಭವಿಸಿದೆ. ಅದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನೋಡು ನೋಡುತ್ತಲೇ ಬೆಂಕಿಯು ಕೆನ್ನಾಲಿಗೆ ಹರಡಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರ ಸಹಕಾರದೊಂದಿಗೆ ಸತತವಾಗಿ ಮೂರು ಗಂಟೆಗೂ ಹೆಚ್ಚು ಕಾರ್ಯಚರಣೆ ಮಾಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ಅವಘಡದಿಂದ ಬೈರತಿಯಿಂದ ಬಿದರಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು ಇದ್ದರಿಂದ ವಾಹನ ಸವಾರರು ಪರದಾಡಿದರು.
ಗೋದಾಮಿನಲ್ಲಿದ್ದ 11 ಲಕ್ಷ ರೂ.ಗೂ ಹೆಚ್ಚು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ ಇದರಿಂದ ದಿಕ್ಕೆ ತೋಚದಂತೆ ಅಗಿದೆ ಎಂದು ಗೋದಾಮಿನ ಮಾಲೀಕ ರಂಜಿತ್ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.