ಸೇಡಿಗೆ ಸವ್ವಾ ಸೇಡು; ಬಿಜೆಪಿಯಲ್ಲಿ ಅಮಿತೋತ್ಸಾಹ: ವಿಧಾನಸೌಧ ಚಲೋ
Team Udayavani, Aug 19, 2017, 6:00 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ “ಭ್ರಷ್ಟಾಚಾರ ಕಾಳಗ’ ತಾರಕಕ್ಕೇರಿದೆ. ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಕೆಂಡಾಮಂಡಲರಾಗಿರುವ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಸೇಡಿನ ರಾಜಕಾರಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಕಳುಹಿಸದಿದ್ದರೆ ನನ್ನನ್ನು ಯಡಿಯೂರಪ್ಪ ಎಂದು ಕರೆಯಬೇಡಿ’ ಎಂದು ಸವಾಲು ಹಾಕಿದ್ದಾರೆ.
ಆದಾಯ ತೆರಿಗೆ ದಾಳಿಗೊಳಗಾದ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪಕ್ಷವು ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, “”ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿರಬೇಕಾದರೆ ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದ ಡಿನೋಟಿಫಿಕೇಷನ್ ಪ್ರಕರಣ ಕೆದಕಿ ಕೇಸು ಹಾಕುವ ಪ್ರಯತ್ನ ಮಾಡುತ್ತಿದ್ದೀರಾ? ಇನ್ನು ನೂರು ಕೇಸ್‌ಗಳನ್ನಾದರೂ ಹಾಕಿ, ಹೆದರುವುದಿಲ್ಲ. ಬಡವರು ತಮ್ಮ ಜಮೀನು ಉಳಿಸಿಕೊಡಿ ಎಂದು ಕೇಳಿದಾಗ ಅವರಿಗಾಗಿ ಡಿನೋಟಿಫಿಕೇಷನ್ ಮಾಡುವುದು ಮುಖ್ಯಮಂತ್ರಿಯಾದವನ ಕರ್ತವ್ಯ. ಆ ಕೆಲಸ ಮಾಡಿದ್ದೆ. ಇತರೆ ಮುಖ್ಯಮಂತ್ರಿಗಳೂ ಮಾಡಿದ್ದಾರೆ. ಆದರೆ, ನನ್ನ ವಿರುದ್ಧ ಮಾತ್ರ ಗುರುತರ ಆರೋಪಗಳನ್ನು ಮಾಡುವ ಮೂಲಕ ಈ ಹೋರಾಟ ನಿಲ್ಲಿಸಬಹುದು ಎಂಬ ಭ್ರಮೆಯಲ್ಲಿದ್ದರೆ ಅದು ನಡೆಯುವುದಿಲ್ಲ,” ಎಂದು ಎಚ್ಚರಿಕೆ ನೀಡಿದರು.
“”ಇವತ್ತು ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದೀರಿ. ನಮ್ಮ ನಾಯಕರ ಹೆಸರು ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದೀರಿ. ಆದರೆ, ಬಹಳ ಹೆಚ್ಚು ಎಂದರೆ ಇನ್ನು ಆರೇಳು ತಿಂಗಳು. ನಿಮ್ಮ ಸರ್ಕಾರದಲ್ಲಿ ಎಷ್ಟೊಂದು ಹಗರಣಗಳು, ಲೂಟಿ, ಹಗಲು ದರೋಡೆ ನಡೆಯುತ್ತಿದೆ? ಸಾಕ್ಷ್ಯಾಧಾರವಿದ್ದರೂ ಅದನ್ನು ಮುಚ್ಚಿ ಹಾಕುತ್ತೀರಿ. ಮರಳು ದಂಧೆಯಲ್ಲಿ ನಿಮ್ಮ ಸಂಪುಟದ ಸಚಿವರಾಗಿರುವ ಮಹದೇವಪ್ಪ ಅವರ ಪುತ್ರ ಸಿಕ್ಕಿಕೊಂಡು ತನಿಖೆ ಎದುರಿಸುತ್ತಿರುವುದು, ನಿಮ್ಮ ಪುತ್ರ ಹಗರಣದಲ್ಲಿ ಸಿಲುಕಿಕೊಂಡಿರುವುದು ನಿಜ ತಾನೆ? ಎಂದು ಪ್ರಶ್ನಿಸಿದರು.
ಒಂದು ಹಂತದಲ್ಲಿ ಕೋಪೋದ್ರಿಕ್ತರಾಗಿ ಏಕವಚನಕ್ಕೆ ಇಳಿದ ಬಿಎಸ್‌ವೈ, “”ಅಮಿತ್ ಶಾ ಅವರು ಕೇಂದ್ರ ಸರ್ಕಾರ ಕೊಟ್ಟ ಹಣದ ಲೆಕ್ಕ ಕೇಳಿದಾಗ ಕೊಡಬೇಕಾದುದು ನಿನ್ನ ಕರ್ತವ್ಯ, ಅದರ ಬದಲು ಅವರಾರು ಎಂದು ಕೇಳುತ್ತೀಯಾ? ಯಾವುದೇ ಪ್ರಜೆಗೆ ಈ ಲೆಕ್ಕ ಕೇಳುವ ಸಂಪೂರ್ಣ ಸ್ವಾತಂತ್ರ್ಯಇದೆ. ಜನ ಕೊಟ್ಟ ಹಣವನ್ನು ಲೂಟಿ ಮಾಡಲು ಅಲ್ಲಿ (ಮುಖ್ಯಮಂತ್ರಿ ಸ್ಥಾನ) ನಿನ್ನನ್ನು ಕೂರಿಸಿಲ್ಲ” ಎಂದು ಕಿಡಿ ಕಾರಿದರು.
ಬಂಧನ: ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅಲ್ಲಿಂದ ಆನಂದರಾವ್ ವೃತ್ತ, ರೇಸ್ ಕೋರ್ಸ್ ಮಾರ್ಗವಾಗಿ ಮೆರವಣಿಗೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಆದರೆ, ವಿಧಾನಸೌಧ ಬಳಿ ತೆರಳಲು ಪ್ರತಿಭಟನಾಕಾರರಿಗೆ ಅವಕಾಶ ನೀಡದ ಪೊಲೀಸರು ರೇಸ್‌ಕೋರ್ಸ್ ಬಳಿ ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರರಾವ್, ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಸಂಸದರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಪೊಲೀಸರಿಂದ ಬಂಧನಕ್ಕೆ ಒಳಗಾದರು.
ಸೋನಿಯಾ, ರಾಹುಲ್ ಕೂಡ ಜೈಲಿಗೆ ಹೋಗಬೇಕು
ಕೇಂದ್ರ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ ಕೊಟ್ಟ ಹಣ ಖರ್ಚು ಮಾಡದೆ ಕಾಂಗ್ರೆಸ್ ನಾಯಕರು ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಆದಾಯ ತೆರಿಗೆ ದಾಳಿ ಸಂದರ್ಭದಲ್ಲಿ ಸಿಕ್ಕಿದ ಡೈರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ. ಭ್ರಷ್ಟರ ವಿರುದ್ಧ ಕ್ರಮ ಕೈಗೊಂಡರೆ ಇವರೆಲ್ಲರೂ ಜೈಲಿಗೆ ಹೋಗುತ್ತಾರೆ ಎಂಬ ಭೀತಿಯಿಂದ ಮುಖ್ಯಮಂತ್ರಿಗಳು ಭ್ರಷ್ಟ ಸಚಿವರ ರಾಜಿನಾಮೆ ಪಡೆಯುತ್ತಿಲ್ಲ.
– ಮುರಳೀಧರರಾವ್, ಬಿಜೆಪಿ ರಾಜ್ಯ ಉಸ್ತುವಾರಿ
ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು
ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಮೇಲೆ ಆದಾಯ ತೆರಿಗೆ ದಾಳಿಯಾದಾಗ ನೂರಾರು ಕೋಟಿ ರೂ. ಮೌಲ್ಯದ ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿ ಪತ್ತೆಯಾಗಿದೆ. ಆದ್ದರಿಂದ ಅವರು ಕಳಂಕದಿಂದ ಮುಕ್ತರಾಗುವವರೆಗೆ ಸಚಿವ ಸಂಪುಟದಿಂದ ದೂರವಿಡಬೇಕು. ಜತೆಗೆ ಲೋಕಾಯುಕ್ತ ಮತ್ತು ಚುನಾವಣಾ ಆಯೋಗಕ್ಕೆ ಅವರು ಈ ಕುರಿತು ಮಾಹಿತಿ ನೀಡದ ಕಾರಣ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಬೇಕು.
– ಜಗದೀಶ್ ಶೆಟ್ಟರ್, ವಿಧಾನಸಭೆ ಪ್ರತಿಪಕ್ಷ ನಾಯಕ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಯಾರೋ ಒಬ್ಬರು ಎಸಿಬಿಯಲ್ಲಿ ದೂರು ಕೊಟ್ಟಿದ್ದಾರೆ. ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಕಾನೂನಿನಂತೆ ಯಡಿಯೂರಪ್ಪ ವಿರುದ್ಧ ಕ್ರಮವಾಗಲಿದೆ. ರಾಜ್ಯದಲ್ಲಿ ಕಾನೂನು ಜಾರಿಗೊಳಿಸಬೇಡಿ ಅಂದರೆ ಹೇಗೆ? ಕಾನೂನಿನ ಮುಂದೆ ಎಲ್ಲರೂ ಒಂದೇ. ಎಸಿಬಿಯಲ್ಲಿ ಕೇಸ್ ದಾಖಲಿಸಿದರೆ ಅದು ದ್ವೇಷದ ರಾಜಕಾರಣ ಎನ್ನುವುದಾದರೆ ಡಿ.ಕೆ.ಶಿವಕುಮಾರ್ ಅವರ ಮನೆ-ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಏನು?
– ಸಿದ್ದರಾಮಯ್ಯ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.