ಬಜೆಟ್‌ ಮುಖ್ಯಾಂಶಗಳು


Team Udayavani, Jul 6, 2018, 6:45 AM IST

180705kpn94.jpg

ತರಬೇತಿಗೆ 500 ಕೋಟಿ
ಏಳು ಜಿಲ್ಲೆಗಳಲ್ಲಿ ಕೈಗಾರಿಕಾ ತರಬೇತಿಗಾಗಿ 500 ಕೋಟಿ ರೂ. ಒದಗಿಸುವ ಭರವಸೆ ನೀಡಿರುವ ಸರ್ಕಾರ, ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲೆಗೆ ಖಾಸಗಿ ಸಂಸ್ಥೆಗಳು ಉದ್ಯಮ ನಡೆಸಲು 2000 ಕೋಟಿ ರೂ. ಈಕ್ವಿಟಿ ಷೇರು ಬಂಡವಾಳ ನೀಡಲಿದೆ. ಖಾಸಗಿ ಸಂಸ್ಥೆಯು 3000 ಕೋಟಿ ರೂ. ಹೂಡಬೇಕಾಗುತ್ತದೆ. ಇದರಿಂದ ಪ್ರತಿ ಜಿಲ್ಲೆಯಲ್ಲಿ ಸುಮಾರು 5000 ಕೋಟಿ ರೂ. ಬಂಡವಾಳವಿರಲಿದೆ. ಆ ಮೂಲಕ ಬ್ಯಾಂಕ್‌ಗಳಿಂದ 15,000 ಕೋಟಿ ರೂ. ಸಾಲ ಪಡೆಯಲು ಅವಕಾಶ ಕಲ್ಪಿಸಿಕೊಡುವುದಾಗಿ ಪ್ರಕಟಿಸಿದೆ. ಸರ್ಕಾರವು “ಫ‌ಂಡ್‌ ಮ್ಯಾನೇಜರ್‌’ ಮೂಲಕ ಹೂಡಿಕೆ ಮಾಡಲಿದ್ದು, ಒಟ್ಟಾರೆ ಪ್ರತಿ ಜಿಲ್ಲೆಯಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇಟ್ಟುಕೊಂಡಿದೆ.

ಮೊಬೈಲ್‌ ಬಿಡಿಭಾಗ ಘಟಕ
ಚೀನಾದಿಂದ ವಾರ್ಷಿಕವಾಗಿ ದೇಶಕ್ಕೆ ಐದು ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೊತ್ತದ ಮೊಬೈಲ್‌ ಫೋನ್‌ಗಳು ಆಮದಾಗುತ್ತಿರುವುದರಿಂದ ಈ ಉದ್ಯಮದ ಬಗ್ಗೆಯೂ ಸರ್ಕಾರ ಗಮನ ಹರಿಸಿದೆ. ಹಳೆಯ ಮೊಬೈಲ್‌ ಫೋನ್‌ಗಳು ಕೇವಲ ಎರಡು ವರ್ಷಗಳಲ್ಲಿ ಹೊಸ ಮೊಬೈಲ್‌ ಫೋನ್‌ಗಳಾಗಿ ಪರಿವರ್ತನೆಯಾಗುತ್ತವೆ. ಪ್ರತಿ ಹಳೆಯ ಸ್ಮಾರ್ಟ್‌ ಫೋನ್‌ಗಳನ್ನು ಮೂಲ ಬಿಡಿ ಭಾಗಗಳಾಗಿ ಪ್ರತ್ಯೇಕಿಸಿದರೆ ಪ್ರತಿ ಫೋನ್‌ಗೆ 4000 ರೂ. ಸಿಗಲಿದೆ ಎಂಬ ಅಂದಾಜು ಇದೆ. ಅದರಂತೆ 3 ಕೋಟಿ ಫೋನ್‌ಗಳನ್ನು ಬಿಡಿ ಘಟಕಗಳಾಗಿ ಬೇರ್ಪಡಿಸುವ ಅವಕಾಶವಿರುವ ಸಾಧ್ಯತೆಯನ್ನು ಬಳಸಿಕೊಳ್ಳಲು ಚಿಂತಿಸಿರುವ ಸರ್ಕಾರ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್‌ ಫೋನ್‌ ಬಿಡಿ ಘಟಕ ಉದ್ಯಮ ಸ್ಥಾಪಿಸುವ ವಾಗ್ಧಾನ ನೀಡಿದೆ.

ಕೇಂದ್ರೀಕೃತ ತಪಾಸಣೆ
ವಿವಿಧ ಕಾಯ್ದೆಗಳಡಿ ನಿಯಮ ಪಾಲನೆ ಮೇಲ್ವಿಚಾರಣೆಗಾಗಿ ಕಾರ್ಮಿಕ, ಕಾರ್ಖಾನೆ, ಪರಿಸರ, ತೆರಿಗೆ ಜಾರಿ ಇಲಾಖೆಗಳು ಕೈಗೊಳ್ಳುವ ತಪಾಸಣೆಯನ್ನು ಪರಿಣಾಮಕಾರಿ ಯಾಗಿ ಕೈಗೊಳ್ಳಲು ಕೈಗಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಕೇಂದ್ರೀಕೃತ ತಪಾಸಣಾ ವ್ಯವಸ್ಥೆ ರೂಪಿಸಲಿದೆ. ಹೂಡಿಕೆದಾರರನ್ನು ಆಕರ್ಷಿಸಲು ಸರ್ಕಾರದೊಂದಿಗೆ ವ್ಯವಹಾರ ಸರಳಗೊಳಿಸುವ ಜತೆಗೆ ಕಾರ್ಮಿಕ, ಕೈಗಾರಿಕೆ, ನಗರಾಭಿವೃದ್ಧಿ, ಪರಿಸರ ಹಾಗೂ ಇತರೆ ಇಲಾಖೆ ನೀಡುವ ಸೇವೆಗಳನ್ನು ಮರುವಿನ್ಯಾಸಗೊಳಿಸಿ ಕಾಲಮಿತಿಯಲ್ಲಿ ಸೇವೆ ನೀಡುವ ಭರವಸೆ ನೀಡಿದೆ.

1 ಕೋಟಿ ರೂ. ಅನುದಾನ
ರಾಜ್ಯದಲ್ಲಿ ಆಯ್ದ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ನಿಷೇಧಿಸಲಾಗಿದೆ. ಆ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಹೊರತುಪಡಿಸಿ ಜೈವಿಕವಾಗಿ ಕರಗುವ ವಸ್ತು ಬಳಸಿ ಪ್ಯಾಕಿಂಗ್‌ ಮಾಡುವಂತಹ ತಂತ್ರ ಜ್ಞಾನ ವನ್ನು ಅಭಿವೃದ್ಧಿಪಡಿಸಿ ತರಬೇತಿ ನೀಡಲು ಉದ್ದೇಶಿಸಿದೆ. ಅದರಂತೆ ಪರ್ಯಾಯ ಪ್ಯಾಕಿಂಗ್‌ ತಂತ್ರಜ್ಞಾನ ಅಭಿವೃದ್ಧಿ ಸಂಸ್ಥೆ ತೆರೆಯಲು 5 ಕೋಟಿ ರೂ. ಒದಗಿಸಲಾಗಿದೆ.

ವಿಶೇಷ ಆ್ಯಪ್‌ಗೆ ಚಿಂತನೆ
ರಾಜ್ಯದಲ್ಲಿ ಬಳಕೆಯಲ್ಲಿರುವ ಕಲ್ಲು ಗಣಿ ಗುತ್ತಿಗೆ ಹಾಗೂ ಕ್ರಷರ್‌ ಬಗ್ಗೆ ಸಾರ್ವಜನಿಕರು ಹಾಗೂ ಗುತ್ತಿಗೆದಾರರಿಗೆ ಮಾಹಿತಿ ನೀಡಲು ವಿಶೇಷ ಆ್ಯಪ್‌ ಅಭಿವೃದ್ಧಿಪಡಿಸಲು ಚಿಂತಿಸಿದೆ. ಇದರಿಂದ ಗುಣಮಟ್ಟದ ಕಟ್ಟಡ ಕಲ್ಲು, ಜಲ್ಲಿ ಇತರೆ ಉಪ ಖನಿಜಗಳು ಅಧಿಕೃತ ಕಲ್ಲು ಗಣಿಗಳಿಂದ ಸಗಟು ದರದಲ್ಲಿ ದೊರೆಯುವ ವ್ಯವಸ್ಥೆ ಕಲ್ಪಿಸುವ ಚಿಂತನೆ ನಡೆಸಿದೆ.

ಕೆಐಎಂಸಿಒ ಪುನರುಜ್ಜೀವನ
ಹಾಸನದಲ್ಲಿ ಶತಮಾನದಷ್ಟು ಹಳೆಯದಾದ ಕರ್ನಾಟಕ ಇಂಪ್ಲಿಮೆಂಟ್‌ ಮ್ಯಾನುಫ್ಯಾಕ್ಚರಿಂಗ್‌ ಕಂಪನಿಯಲ್ಲಿ (ಕೆಐಎಂಸಿಒ) ಕೆಎಸ್‌ಆರ್‌ಟಿಸಿ ಕಾರ್ಯಾಗಾರ ನಡೆಯುತ್ತಿದೆ. ಈ ಕಂಪನಿಯ ಪುನರುಜ್ಜೀವನ ಹಾಗೂ ಆಧುನೀಕರಣಕ್ಕಾಗಿ 10 ಕೋಟಿ ರೂಪಾಯಿ ನೀಡಲಾಗಿದೆ.

ಪ್ರವಾಸೋದ್ಯಮ ವಿವಿ 
ಪ್ರವಾಸೋದ್ಯಮವನ್ನು ಸಂಘಟಿಸಿ ಉದ್ಯಮದ ರೂಪ ನೀಡಲು ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ವಿಶ್ವವಿದ್ಯಾಲಯ ಆರಂಭಿಸುತ್ತಿದೆ. ಪ್ರವಾಸೋದ್ಯಮದ ಮೂಲಕ ನಿರೀಕ್ಷಿತ ಉದ್ಯೋಗ ಸೃಷ್ಟಿಸಲು, ವಿವಿಧ ಭಾಷೆಯಲ್ಲಿ ಪ್ರವಾಸಿ ಸ್ಥಳದ ವಿವರವಾದ ಮಾಹಿತಿ ನೀಡುವ ಉತ್ತಮ ಮಾರ್ಗದರ್ಶಕರ ಸೃಷ್ಟಿಗಾಗಿ ಹಂಪಿಯಲ್ಲಿ ಪ್ರವಾಸೋದ್ಯಮ ವಿಶ್ವವಿದ್ಯಾಲಯವನ್ನು ಮೂರು ಕೋಟಿ ವೆಚ್ಚದಲ್ಲಿ ಆರಂಭಿಸಲಾಗುತ್ತದೆ.

ಪ್ರವಾಸಿ ವಾಹನಗಳ ಸೂಕ್ತ ನಿರ್ವಹಣೆ, ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಿಬ್ಬಂದಿಗೆ ತರಬೇತಿ, ಪ್ರವಾಸೋದ್ಯಮ ಲಾಭದಾಯಕವಾಗಿ ನಡೆಸುವ ವ್ಯವಹಾರಿಕ ಜ್ಞಾನವನ್ನು ಈ ವಿವಿ ಮೂಲಕ ನೀಡಲಾಗುತ್ತದೆ. ಪ್ರವಾಸಿ ತಾಣಗಳಲ್ಲಿ ರಸ್ತೆ, ಶೌಚಾಲಯ ಸೇರಿ ಅಗತ್ಯ ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗುತ್ತದೆ. ಪ್ರವಾಸಿ ಸ್ಥಳ ಮತ್ತು ಪ್ರವಾಸಿಗರ ನಡುವೆ ಇರುವ ಭಾವನಾತ್ಮಕ ಕೊಂಡಿ ಬೆಸೆಯುವ ಮಾನವ ಸಂಪನ್ಮೂಲ ಸೃಷ್ಟಿಸುವುದೇ ಇದರ ಉದ್ದೇಶ.

ವೃದ್ಧಾಪ್ಯ ವೇತನ ಹೆಚ್ಚಳ
ಹಿರಿಯ ನಾಗರಿಕರ ಕಲ್ಯಾಣದ ಬದ್ಧತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಂಧ್ಯಾ ಸುರûಾ ಯೋಜನೆಯಡಿ ಫ‌ಲಾನುಭವಿಗಳು ಪಡೆಯುತ್ತಿರುವ 600 ರೂ.ಗಳ ಮಾಸಾಶನವನ್ನು 1000 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು 2018ರ ನವೆಂಬರ್‌ 1ರಿಂದ ಜಾರಿಗೆ ಬರಲಿದೆ. ಇದರಿಂದ 65 ವರ್ಷ ಮೀರಿದ 32.92 ಲಕ್ಷ ವೃದ್ಧರು ಆರ್ಥಿಕ ಪ್ರಯೋಜನ ಪಡೆಯಲಿದ್ದಾರೆ. ಈ ಮೊತ್ತವನ್ನು ಮುಂದಿನ 5 ವರ್ಷಗಳಲ್ಲಿ ಹಂತಹಂತವಾಗಿ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಆಯವ್ಯಯದಲ್ಲಿ ಹೆಚ್ಚುವರಿಯಾಗಿ 660 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ರಾಜ್ಯದಲ್ಲಿ ಮರು ಭೂಮಾಪನ ಕಾರ್ಯವನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತದೆ. ಈ ವರ್ಷ ಐದು ಜಿಲ್ಲೆಗಳಲ್ಲಿ ಈ ಕಾರ್ಯ ಆರಂಭಿಸಲಾಗುತ್ತದೆ. ನಾಡಕಚೇರಿಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಹಂತವಾಗಿ 50 ನಾಡಕಚೇರಿಗಳಿಗೆ ತಲಾ 20 ಲಕ್ಷ ರೂ.ಗಳಂತೆ 10 ಕೋಟಿ ರೂ.ಗಳ ವೆಚ್ಚದಲ್ಲಿ ನಾಡಕಚೇರಿಗಳ ಬಲವರ್ಧನೆ ಮಾಡಲಾಗುತ್ತದೆ.

ದಿಶಾ ಯೋಜನೆ ವಿಸ್ತರಣೆ
ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರವು (ಸಿಡಾಕ್‌)ಯು.ಎನ್‌.ಡಿ.ಪಿ. ಸಹಯೋಗದೊಂದಿಗೆ ಉದ್ದಿಮೆದಾರರಿಗೆ ತರಬೇತಿ ನೀಡಲು ಆರಂಭಿಸಿದ್ದ ದಿಶಾ ಯೋಜನೆಯನ್ನು ಎಲ್ಲ ಜಿಲ್ಲೆಗೂ ವಿಸ್ತರಿಸಲಾಗುತ್ತದೆ. 2018-19ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಿ 2 ಕೋಟಿ ರೂ. ಅನುದಾನದಲ್ಲಿ 1 ಲಕ್ಷ ಜನರಿಗೆ ದಿಶಾ ಯೋಜನೆಯಡಿ ತರಬೇತಿ ನೀಡಲಾಗುತ್ತದೆ. 2017-18ರಲ್ಲಿ 16 ಜಿಲ್ಲೆಗಳಲ್ಲಿ 32 ಸಾವಿರ ಸಂಭಾವ್ಯ ಉದ್ದಿಮೆದಾರರಿಗೆ ತರಬೇತಿ ನೀಡಲಾಗಿದೆ.

ವಿದೇಶಗಳಲ್ಲಿ ಉದ್ಯೋಗ ಮತ್ತು ಜೀವನೋಪಾಯ ಹೊಂದಲು ಹಾಗೂ ಕರ್ನಾಟಕವನ್ನು ವಿದೇಶಿ ಉದ್ಯೋಗಕ್ಕೆ ಆದ್ಯತಾ ರಾಜ್ಯವಾಗಿ ರೂಪಿಸಲು ಯುವ ಜನತೆಗೆ ಅಗತ್ಯ ತರಬೇತಿ ಹಾಗೂ ಪ್ರೋತ್ಸಾಹ ಸರ್ಕಾರದಿಂದ ನೀಡಲಾಗುತ್ತದೆ. ಇದಕ್ಕಾಗಿ ಕರ್ನಾಟಕ ಅಂತಾರಾಷ್ಟ್ರೀಯ ವಲಸಿಗ ಕೇಂದ್ರಕ್ಕೆ 2 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

90 ಕೋಟಿ ಅನುದಾನ
ಮೈತ್ರಿ ಸರ್ಕಾರದ ಮೊದಲ ಬಜೆಟ್‌ನಲ್ಲಿ ಸಿನಿಮಾ ರಂಗಕ್ಕೆ ಭರಪೂರ ಕೊಡುಗೆ ನೀಡಲಾಗಿದೆ. ಸಿನಿಮಾ ವಿವಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಬರೋಬ್ಬರಿ 90 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ರಾಮನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಲನಚಿತ್ರ ವಿಶ್ವವಿದ್ಯಾನಿಲಯ ತೆರೆಯಲು 30 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಜೊತೆಗೆ ರಾಮನಗರದ ಫಿಲ್ಮ್ಸಿಟಿಯಲ್ಲಿ ಛಾಯಚಿತ್ರ, ಸಂಕಲನ, ಸೌಂಡ್‌ ರೆಕಾರ್ಡಿಂಗ್‌ ಮಾಡುವ ಸಂಸ್ಥೆ, ಅನಿಮೇಷನ್‌ ಸ್ಟುಡಿಯೋಗಳು, ಕಂಪ್ಯೂಟರ್‌ ಗ್ರಾಫಿಕ್‌ ಸ್ಟುಡಿಯೋಗಳು, ಚಲನಚಿತ್ರ ರಂಗಕ್ಕೆ ಸೇವೆ ಸಲ್ಲಿಸುವ ಉದ್ಯಮಗಳಿಗೆ ಪ್ರೋತ್ಸಾಹ ನೀಡಲು 40 ಕೋಟಿ ರೂ. ಅನುದಾನ ನೀಡಲಾಗಿದೆ. ಅಲ್ಲದೇ ವಿದೇಶದಿಂದ ಚಿತ್ರ ನಿರ್ಮಾಣಕ್ಕೆ ಬರುವ ಕಲಾವಿದರು ಹಾಗೂ ತಂತ್ರಜ್ಞರಿಗೆ ವಸತಿ ಇನ್ನಿತರ ಅವಶ್ಯಕ ಮೂಲಭೂತ ಸೌಲಭ್ಯ ನಿರ್ಮಾಣಕ್ಕಾಗಿ 20 ಕೋಟಿ ರೂ. ಘೊಷಿಸಲಾಗಿದೆ.

ಕೆಆರ್‌ಎಸ್‌ ಅಭಿವೃದ್ಧಿಗೆ ಕ್ರಮ
ಕಳೆಗುಂದಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನದ ವೈಭವವನ್ನು ಮರುಕಳಿಸಲು ಮುಂದಾಗಿರುವ ಸರಕಾರ, ಅಮೆರಿಕದ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಬೃಂದಾವನವನ್ನು ಅಭಿವೃದ್ಧಿಪಡಿಸಲು ಉದ್ದೇಶಿ ಸಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೆಆರ್‌ಎಸ್‌ ಬೃಂದಾವನ ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಬಂಡವಾಳ ಹೂಡಲು ವಿಶ್ವಮಟ್ಟದ ಉದ್ಯಮಿಗಳು ಉತ್ಸುಕರಾಗಿದ್ದಾರೆ. ಇದರ ಕಾರ್ಯ ಯೋಜನೆ ಸಿದ್ಧಪಡಿಸಲು ಬಜೆಟ್‌ನಲ್ಲಿ ಐದು ಕೋಟಿ ರೂ. ಮೀಸಲಿಡಲಾಗಿದೆ. 

ಆಲಮಟ್ಟಿ ಸಾಮರ್ಥ್ಯ ಹೆಚ್ಚಳ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳ ಲಾಗುವುದು ಮತ್ತು ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣೆ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ಸಿಕ್ಕಿದೆ. ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದ ನ್ಯಾಯಾಧೀಕರಣದ ತೀರ್ಪು 2018ರ ಆಗಸ್ಟ್‌ನಲ್ಲಿ ಬರುವ ನಿರೀಕ್ಷೆ ಇದ್ದು, ತೀರ್ಪಿನ ಅನ್ವಯ ಕಾಮಗಾರಿ ಕೈಗೊಳ್ಳಲಾಗುವುದು. 

ಏತ ನೀರಾವರಿ ಜಾರಿ
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೊಡಿ, ನಾಗರಾಳ, ನೇಜ ಇತ್ಯಾದಿ ಗ್ರಾಮಗಳ ಸುಮಾರು 10,225 ಹೆಕ್ಟೇರ್‌ ಪ್ರದೇಶದ ಜಮೀನುಗಳ ನೀರಾವರಿ ಸೌಲಭ್ಯಕ್ಕಾಗಿ ಕೃಷ್ಣಾ ನದಿಯಿಂದ ನೂರು ಕೋಟಿ ರೂ.ವೆಚ್ಚದಲ್ಲಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು ಸರಕಾರ ಉದ್ದೇಶಿಸಿದೆ. ಅದೇ ರೀತಿ, ಹೇಮಾವತಿಯಿಂದ ಹಾಸನದ ದುದ್ದ ಮತ್ತು ಶಾಂತಿಗ್ರಾಮ ಹೋಬಳಿ ವ್ಯಾಪ್ತಿಯಲ್ಲಿ ಬರುವ 160 ಕೆರೆಗಳಿಗೆ ನೀರು ತುಂಬಿಸಲು 70 ಕೋಟಿ ಹಾಗೂ ಮಂಡ್ಯದ ಲೋಕಪಾವನಿ ನದಿಯಿಂದ ದುದ್ದ ಮತ್ತಿತರ ಕೆರೆಗಳಿಗೆ ನೀರು ತುಂಬಿಸಲು ಮತ್ತು ಮಂಡ್ಯ ತಾಲ್ಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸಲು 30 ಕೋಟಿ ಮೀಸಲಿಡಲಾಗಿದೆ. ಮೇಕೆದಾಟು ಪೂರ್ವ ಕಾರ್ಯಸಾಧ್ಯತೆ ವರದಿ ಪ್ರಸ್ತಾವನೆಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ.

ದಾಸ್ತಾನು ಕೇಂದ್ರ ಸ್ಥಾಪನೆ
ಗೃಹ ನಿರ್ಮಾಣ ಹಾಗೂ ಇತರ ಕಾಮಗಾರಿಗಳಿಗೆ ಸಾರ್ವಜನಿಕರು ಅಗತ್ಯವಿರುವ ಗುಣ ಮಟ್ಟದ ಮರಳು, ಜಲ್ಲಿಯನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಸಿಗುವ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿರುವ ಸರಕಾರ ದಾಸ್ತಾನು ಕೇಂದ್ರಗಳನ್ನು ಪ್ರಾರಂಭಿ ಸುವುದಾಗಿ ಘೋಷಿಸಿದೆ. 

ಹೊಸ ಜವಳಿ ನೀತಿ
ಜವಳಿ ಹಾಗೂ ಸಿದ್ಧ ಉಡುಪು ವಲಯಗಳಲ್ಲಿ ಹೆಚ್ಚು ಹೂಡಿಕೆ ಆಕರ್ಷಿಸಲು ಹಾಗೂ ಉದ್ಯೋಗ ಸೃಷ್ಟಿಗಾಗಿ ಹೊಸ ಜವಳಿ ನೀತಿ ಘೋಷಿಸುವುದಾಗಿ ಪ್ರಕಟಿಸಿದೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಡಿಸೈನ್‌ ಮೂಕ ಅತ್ಯಾಧುನಿಕ ಕೈಮಗ್ಗ ಕೇಂದ್ರ ಸ್ಥಾಪಿಸಿ ನೇಕಾರರಿಗೆ ಹೊಸ ವಿನ್ಯಾಸ ತಂತ್ರಜ್ಞಾನ ವರ್ಗಾವಣೆ ಮಾಡುವುದಾಗಿ ತಿಳಿಸಿದೆ.

ಸಾರ್ವಜನಿಕ ಉದ್ದಿಮೆ
ಸಾರ್ವಜನಿಕ ಉದ್ದಿಮೆಗಳ ಇಲಾಖೆ ಅಡಿಯ ಉದ್ಯಮಗಳ ಲಾಭಾಂಶವನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲು ಹಾಗೂ ಜನರಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಸರಕಾರಿ ಸ್ವಾಮ್ಯದ ಮೂರು ಕಂಪೆನಿಗಳನ್ನು ಷೇರು ಮಾರುಕಟ್ಟೆಯ ಲಿಸ್ಟೆಡ್‌ ಕಂಪೆನಿಗಳ ಪಟ್ಟಿಗೆ ಸೇರಿಸಲು ಸರಕಾರ ನಿರ್ಧರಿಸಿದೆ.

30 ಕೋಟಿ ಹೆಚ್ಚು ಅನುದಾನ
ಜಲ ಸಂಪನ್ಮೂಲ ಇಲಾಖೆಗೆ ಈ ಬಾರಿ ಬಜೆಟ್‌ನಲ್ಲಿ 30 ಕೋಟಿ ಹೆಚ್ಚು ಅನುದಾನ ನೀಡಲಾಗಿದೆ. ಈ ಹಿಂದಿನ ಬಜೆಟ್‌ನಲ್ಲಿ 18,112 ಕೋಟಿ ರೂ. ನೀಡಲಾಗಿತ್ತು. ಈ ಬಾರಿ 18,142 ಕೋಟಿ ರೂ .ಮೀಸಲಿಡಲಾಗಿದೆ

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.