ಬಜೆಟ್‌ನ ಪ್ರತಿಕ್ರಿಯೆ


Team Udayavani, Jul 6, 2018, 6:25 AM IST

180705kpn95.jpg

ನಾವು ಕೋರಿದ್ದ ಕೆಲ ಬೇಡಿಕೆಗಳನ್ನು ಮೊದಲ ಹಂತದಲ್ಲಿ ಈಡೇರಿಸಿದ್ದಾರೆ. ಚಿತ್ರರಂಗಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.  
– ಎಸ್‌.ಎ.ಚಿನ್ನೇಗೌಡ, ಚಲನಚಿತ್ರ ಮಂಡಳಿ ಅಧ್ಯಕ್ಷ

ಕರ್ನಾಟಕದಲ್ಲಿ ನಮ್ಮ ಸರ್ಕಾರವು ರೈತರ ಸಾಲ ಮನ್ನಾ ಮಾಡಿ, ಅವರಿಗೆ ನ್ಯಾಯ ಒದಗಿಸಿದೆ. ಕೇಂದ್ರ ಸರ್ಕಾರಕ್ಕೆ ಶ್ರೀಮಂತರ ಸಾಲ ಮನ್ನಾ ಮಾಡಲು ಸಾಧ್ಯವಾಗಿರುವಾಗ, ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ 

ಇದು ಕರ್ನಾಟಕದ ಬಜೆಟ್‌ ಅಲ್ಲ. ಹಾಸನ, ಮಂಡ್ಯ, ರಾಮನಗರ ಬಜೆಟ್‌. ಉತ್ತರ ಕರ್ನಾಟಕ, ಹೈದರಾಬಾದ್‌-ಕರ್ನಾಟಕಕ್ಕೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಹೈ-ಕ ವಿಶೇಷ ಪ್ಯಾಕೇಜ್‌ ಬಗ್ಗೆ ಪ್ರಸ್ತಾಪ ಮಾಡಿಲ್ಲ.
– ಜಗದೀಶ್‌ ಶೆಟ್ಟರ್‌, ಮಾಜಿ ಮುಖ್ಯಮಂತ್ರಿ

ಬಹು ನಿರೀಕ್ಷಿತ ಬಜೆಟ್‌ ಅನ್ನು  ನಮ್ಮ ಸರ್ಕಾರ ಮಂಡಿಸಿದ್ದು  ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ, ತೋಟಗಾರಿಕೆ ಇತರೆ ಮುಂತಾದ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿಂದಿನ ಯೋಜನೆಗಳನ್ನು ಮುಂದುವರಿಸಲಾಗುತ್ತದೆ.  
– ಶಿವಾನಂದ ಎಸ್‌.ಪಾಟೀಲ್‌, ಆರೋಗ್ಯ ಸಚಿವ

ರಾಜ್ಯಸರ್ಕಾರದ ಬಜೆಟ್‌ನಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ. ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ರಕ್ಷಿಸಲು ಸಾಲಮನ್ನಾ ಮಾಡಲಾಗಿದೆ. ಮತ್ತೆ ಸಾಲ ನೀಡಲು 6.500 ಕೋಟಿ ರೂ. ಮೀಸಲಿಟ್ಟಿದೆ. 
– ಎಚ್‌.ವಿಶ್ವನಾಥ್‌, ಶಾಸಕರು

ರೈತರ ಸಾಲ ಮನ್ನಾ ಮಾಡುವಂತಹ ದಿಟ್ಟ ನಿರ್ಧಾರವನ್ನು ಸರಕಾರ ಘೋಷಿಸಿದೆ. ಇದೇ ಮೊದಲ ಬಾರಿಗೆ ಇಸ್ರೇಲ್‌ ಮಾದರಿ ಕೃಷಿಗೆ ಮನ್ನಣೆ ನೀಡಲಾಗಿದೆ.  ಇದೊಂದು ಸಮತೋಲನದ ಬಜೆಟ್‌. 
– ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ

ಇದು ರಾಜ್ಯದ ಜನತೆಗೆ ಸಿಕ್ಕಿದ ದೋಖಾ ಬಜೆಟ್‌. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಸಿಎಂ ಹೇಳಿಕೊಂಡಿದ್ದರು. ಆದರೆ, ಹೇಳಿದಂತೆ ಅವರು ನಡೆದುಕೊಂಡಿಲ್ಲ.
– ಕೆ.ಎಸ್‌.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ

ಬಜೆಟ್‌ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ. ಹೈದ್ರಾಬಾದ್‌ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂಬ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುವುದು. 
– ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ರೈತರ ಸಾಲ ಮನ್ನಾ ಮಾಡಿರುವುದು ಸಮಾಧಾನ ತಂದಿದೆ. ಆದರೆ, ಸರ್ಕಾರ ಇದೀಗ 34 ಸಾವಿರ ಕೋಟಿಯಷ್ಟೇ ಮನ್ನಾ ಮಾಡಿದ್ದು, ಮುಂದಿನ ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿ.
– ಕೋಡಿಹಳ್ಳಿ ಚಂದ್ರಶೇಖರ್‌, ರಾಜ್ಯ ರೈತ ಸಂಘ 

ಸಾಲ ಮನ್ನಾ ಮಾಡಿರುವುದೇನೋ ಸರಿ, ಆದರೆ, ಹಣ ಹೊಂದಾಣಿಕೆ ಸೇರಿ ಇನ್ನಿತರ ವಿಷಯಗಳ ಬಗ್ಗೆ ಸ್ಪಷ್ಟತೆ ನೀಡಿಲ್ಲ.  ಹೀಗಾಗಿ, ಇದೊಂದು ಸರಾಸರಿಯ ಬಜೆಟ್‌ ಎಂದು ಹೇಳಬಹುದಷ್ಟೇ.
– ಪ್ರೊ.ನರಸಿಂಹಯ್ಯ, ಆರ್ಥಿಕ ತಜ್ಞ

34 ಸಾವಿರ ಕೋಟಿ ರೂ. ಸಾಲಮನ್ನಾ ಎಂದು ಹೇಳಿದ್ದಾರೆ. ಆದರೆ ಸಾಲ ಅವಧಿ ಸೇರಿ ಅಂಕಿ-ಅಂಶಗಳ ಬಗ್ಗೆ ಬಜೆಟ್‌ನಲ್ಲಿ ನಿಖರ ಮಾಹಿತಿ ನೀಡಿಲ್ಲ. ಉತ್ತರಕರ್ನಾಟಕವನ್ನು ಕಡೆಗಣಿಸಿರುವುದು ಸರಿಯಲ್ಲ. 
– ಬಸವರಾಜ ಬೊಮ್ಮಾಯಿ, ಬಿಜೆಪಿ ಶಾಸಕ

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ನೀಡಲಾಗುತ್ತಿರುವ ಅಕ್ಕಿಯನ್ನು 7 ರಿಂದ 5ಕ್ಕೆ ಕಡಿತಗೊಳಿಸಿರುವ ಕ್ರಮ ಸರಿಯಲ್ಲ. ಸರ್ಕಾರ ಈ ಬಗ್ಗೆ ಪುನರ್‌ ಪರಿಶೀಲನೆ ಮಾಡಬೇಕು. ಬಡವರಿಗೆ ಅನ್ಯಾಯವಾಗಬಾರದು.
– ಡಿ.ಕೆ.ಸುರೇಶ್‌, ಬೆಂಗಳೂರು ಗ್ರಾಮಾಂತರ ಸಂಸದ

9 ಜಿಲ್ಲಾ ಘಟಕಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಿ ಕ್ಲಸ್ಟರ್‌ ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಿಸಿದ್ದಾರೆ. ವಾಣಿಜ್ಯ ತೆರಿಗೆ ಆಡಳಿತವನ್ನು ವಿವೇಚಿಸಲು ಕರಸಮಾಧಾನ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ. 
– ವಿಜಯ್‌ ಕುಮಾರ್‌, ಸಹಾಯಕ ಕಾರ್ಯದರ್ಶಿ, ಎಫ್ಕೆಸಿಸಿಐ

ರಾಜ್ಯ ನೌಕರರಿಗೆ ಎನ್‌ಪಿಎಸ್‌ ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ ಜಾರಿ ಮಾಡುತ್ತೇ ವೆಂದು ಕುಮಾರಸ್ವಾಮಿ ಹೇಳಿದ್ದರು. ಆದರೆ, ಬಜೆಟ್‌ನಲ್ಲಿ ಎನ್‌ಪಿಎಸ್‌ ಯೋಜನೆಯ ವಿಚಾರವನ್ನೇ ಎತ್ತಿಲ್ಲ.  
– ರಮೇಶ್‌ ಜಿ. ಸಂಗಾ, ಅಧ್ಯಕ್ಷ, ಎನ್‌ಪಿಎಸ್‌ ನೌಕರರ ಸಂಘ

ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಈ ಬಜೆಟ್‌ ಪೂರಕವಾಗಿದೆ. ಎಸ್ಸಿ, ಎಸ್ಟಿ ಮಹಿಳೆಯರಿಗೆ ಉದ್ಯಮಶೀಲತಾ ಯೋಜನೆಯಡಿ 10 ಕೋಟಿ ವರೆಗೂ ಸಾಲ ನೀಡಲು ಮುಂದಾಗಿರುವುದು ಸ್ವಾಗತಾರ್ಹ. 
– ರವಿಕಿರಣ್‌ ಕುಲಕರ್ಣಿ,  ಪ್ರ.ಕಾರ್ಯದರ್ಶಿ, ಕಾಸಿಯಾ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.