ದೇಶದ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್
Team Udayavani, Feb 1, 2021, 6:06 PM IST
ಬೆಂಗಳೂರು: ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500 ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವುದು- ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮಂಗಳೂರಿನ ಹೋಟೆಲ್ ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ: ಪ್ರೇಮ ವೈಫಲ್ಯವೇ ಕಾರಣ, ಮೂವರ ಬಂಧನ
ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: 2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.