ರಂಗ ಕಲಾವಿದರಿಗೆ ಬಡಾವಣೆ ನಿರ್ಮಿಸಿ
Team Udayavani, Jul 14, 2019, 3:06 AM IST
ಬೆಂಗಳೂರು: ವಾಸಿಸಲು ಮನೆಯಿಲ್ಲದೆ ಬಹಳಷ್ಟು ಮಂದಿ ರಂಗಭೂಮಿ ಕಲಾವಿದರು ಕಣ್ಣೀರಿಡುತ್ತಿದ್ದಾರೆ. ಅಂತಹ ಕಲಾವಿದರ ಬದುಕಿಗೆ ಆಸರೆಯಾಗಲು ಸರ್ಕಾರ “ರಂಗಭೂಮಿ ಬಡಾವಣೆ’ ನಿರ್ಮಿಸಿ, ನಿವೇಶನ ಹಂಚಿಕೆ ಮಾಡಬೇಕು ಎಂದು ಹಿರಿಯ ರಂಗಭೂಮಿ ಕಲಾವಿದ ಹಾಗೂ ಬೆಂಗಳೂರು ನಗರ ಜಿಲ್ಲೆಯ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಎಚ್.ಜಿ.ಸೋಮಶೇಖರರಾವ್ ಒತ್ತಾಯಿಸಿದರು.
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಶನಿವಾರದಿಂದ ಎರಡು ದಿನಗಳ ಕಾಲ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ರಂಗಭೂಮಿ ಸೇವೆ ಮಾಡಿ ಬದುಕಿನ ಇಳಿಸಂಜೆಯಲ್ಲಿರುವ ಹಲವು ಹಿರಿಯ ಕಲಾವಿದರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಸಂಕಷ್ಟದಲ್ಲಿ ಬದುಕು ಕಳೆಯುತ್ತಿದ್ದಾರೆ. ಅಂತವರಿಗೆ ಸರ್ಕಾರ ನೆರವಾಗಬೇಕು ಎಂದು ಮನವಿ ಮಾಡಿದರು.
ರಂಗಮಂದಿರ ನಿರ್ಮಾಣಕ್ಕೆ ಒತ್ತಾಯ: ರಂಗಭೂಮಿ ಹಲವು ರೀತಿಯ ಬದಲಾವಣೆಗೆ ಕಾರಣವಾಗುತ್ತದೆ. ಆ ಹಿನ್ನೆಲೆಯಲ್ಲಿ ಸರ್ಕಾರ ಗ್ರಾಮಾಂತರ ಪ್ರದೇಶಕ್ಕೆ ಅನುಕೂಲವಾಗುವಂತಹ ಸಣ್ಣ ರಂಗಮಂದಿರಗಳ ನಿರ್ಮಾಣಕ್ಕೆ ಮುಂದಾಗಬೇಕು. ಅಲ್ಲದೆ ಈ ಸಂಬಂಧ ರಂಗತಜ್ಞರನ್ನು ನೇಮಕ ಮಾಡಿ ರಂಗಭೂಮಿ ಬೆಳವಣಿಗೆಗೆ ಮತ್ತಷ್ಟು ಸಹಕಾರ ನೀಡಬೇಕು ಎಂದು ಹೇಳಿದರು.
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಾಯಾಣ್ಣ, ಹಿರಿಯ ನಟ ದತ್ತಣ್ಣ, ರಮಾದೇವಿ, ಹಿರಿಯ ವಿಮರ್ಶಕ ಬೈರಮಂಗಲ ರಾಮೇಗೌಡ, ಎಂ.ತಿಮ್ಮಯ್ಯ ಇದ್ದರು. ಮಧ್ಯಾಹ್ನದಿಂದ ಸಂಜೆ ವರೆಗೂ “ರಂಗಭೂಮಿ ಮತ್ತು ಚಿತ್ರರಂಗ’ ಕುರಿತ ಗೋಷ್ಠಿಗಳು ನಡೆದವು.
ಸಮ್ಮೇಳನಾಧ್ಯಕ್ಷರ ಮೆರವಣಿಗೆ: ಬಸವನಗುಡಿಯ ನ್ಯಾಷನಲ್ ಕಾಲೇಜು ಸಮೀಪ ಇರುವ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹೊಸ ನಿವೇಶನದಲ್ಲಿ ಭುವನೇಶ್ವರಿ ದೇವಿ ಪ್ರತಿಮೆಗೆ ಮಾರ್ಲಾಪಣೆ ಮಾಡುವ ಮೂಲಕ ಬೆಳಗ್ಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಸಂಸದ ತೇಜಸ್ವಿ ಸೂರ್ಯ, ಡಾ.ಜಯಶ್ರೀ ಕಂಬಾರ, ಚಾಮುಂಡಿ ರಾಮಲಿಂಗಾರೆಡ್ಡಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ಇದಾದ ಬಳಿಕ ಅಲಂಕೃತ ವಾಹನದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿವಿಧ ರಸ್ತೆಗಳ ಮೂಲಕ ಸಾಗಿ ರವೀಂದ್ರ ಕಲಾ ಕ್ಷೇತ್ರ ತಲುಪಿತು.
ಕಾರು ನಿಲ್ಲಿಸಿ ಸಮಸ್ಯೆ ಆಲಿಸಿದ ಸಿಎಂ: ಅಲಂಕೃತ ವಾಹನದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿವಿಧ ರಸ್ತೆಗಳ ಮೂಲಕ ಸಾಗಿ ಮಿನರ್ವ ವೃತ್ತಕ್ಕೆ ಬರುತ್ತಿದ್ದ ವೇಳೆ, ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರು ಕೂಡ ಅದೇ ರಸ್ತೆಯಲ್ಲೆ ಬೆಂಗಾವಲಿನೊಂದಿಗೆ ಸಾಗಿ ಬಂದರು. ದಾರಿಯಲ್ಲೇ ಕಾರು ನಿಲ್ಲಿಸಿದ ಮುಖ್ಯಮಂತ್ರಿಗಳು, ಕನ್ನಡ ಪರ ಹೋರಾಟಗಾರರ ಸಮಸ್ಯೆ ಆಲಿಸಿದರು.
ಸಾಂಸ್ಕೃತಿಕ ಭಯೋತ್ಪಾದನೆಗೆ ಕಡಿವಾಣ ಹಾಕಿ: ಸಾಂಸ್ಕೃತಿಕ ಲೋಕದಲ್ಲಿ ಖೋಟಾ ಸಂಸ್ಥೆಗಳು ಹುಟ್ಟಿಕೊಂಡಿದ್ದು, ಅವುಗಳಿಗೆ ಸರ್ಕಾರದ ಅನುದಾನ ಕೊಡುವುದರಿಂದ ಯಾವುದೇ ಪ್ರಯೋಜನವಾಗದು. ಸಾಂಸ್ಕೃತಿಕ ಹೆಸರಿನ ಮುಖವಾಡ ಧರಿಸಿಕೊಂಡು ಸವಲತ್ತು ಪಡೆಯುತ್ತಿರುವವರು ಅನೇಕ ಮಂದಿ ಇದ್ದಾರೆ.
ಇಂತಹ “ಸಂಸ್ಕೃತಿ ಭಯೋತ್ಪಾದನೆ’ಗೆ ಕಡಿವಾಣ ಬೀಳಬೇಕು. ಭ್ರಷ್ಟಾಚಾರಕ್ಕೆ ದಾರಿಯಾಗಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನಿಜವಾದ ರಂಗಯಾತ್ರಿಗಳಿಗೆ ಸರ್ಕಾರ ನೆರವು ನೀಡಬೇಕು ಎಂದು ಬೆಂಗಳೂರು ನಗರ ಜಿಲ್ಲೆಯ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಎಚ್.ಜಿ. ಸೋಮಶೇಖರರಾವ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.