ನಗರದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣ

Team Udayavani, Sep 16, 2017, 12:49 PM IST

plastic-park.jpg

ಬೆಂಗಳೂರು: ರಾಜ್ಯದಲ್ಲಿ ತಲಾ 100 ಎಕರೆ ಪ್ರದೇಶದಲ್ಲಿ ಪ್ಲಾಸ್ಟಿಕ್‌ ಹಾಗೂ ಔಷಧೀಯ ಉತ್ಪನ್ನ ತಯಾರಿಕಾ ಪಾರ್ಕ್‌ ನಿರ್ಮಾಣಕ್ಕಾಗಿ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೇಳಿದರು.

ಬೆಂಗಳೂರಿನ ಬಳಿ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಿಸಲು ಚಿಂತಿಸಲಾಗಿದೆ. ಔಷಧೀಯ ಉತ್ಪನ್ನಗಳ ಪಾರ್ಕ್‌ಗೆ ಸೂಕ್ತ ಸ್ಥಳ ಗುರುತಿಸಬೇಕಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮೂಲ ಸೌಕರ್ಯ ಕಲ್ಪಿಸಿದರೆ ಶೇ.30 ವೆಚ್ಚ ತಗ್ಗಲಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯವಹಾರ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಟ್ಯಾಲಿ ಸೊಲ್ಯೂಷನ್ಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್‌ ಗೋಯೆಂಕಾರಿಗೆ 2017ನೇ ಸಾಲಿನ ಸರ್‌ ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ರೈಲು ಸಂಪರ್ಕ: ಬೆಂಗಳೂರು ಹಾಗೂ ರಾಜ್ಯದ ಇತರೆ ಪ್ರದೇಶಗಳಲ್ಲಿ ರೈಲು ಸಂಪರ್ಕಕ್ಕಾಗಿ 30,000 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಯೋಜನೆಗಳಿಗೆ 10,000 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಮೆಟ್ರೋ 2 ಮತ್ತು 3ನೇ ಹಂತಕ್ಕೆ 10,000 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ಉಪನಗರ ರೈಲು ಸಂಪರ್ಕ ಸಂಪೂರ್ಣ ಕಾರ್ಯಾಚರಣೆಗೊಳ್ಳಲಿದೆ. 2,000 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಭರತ್‌ ಗೋಯೆಂಕಾ, “ಉದ್ಯಮಿಗಳ ಸಲಹೆಗಳನ್ನು ಪಡೆಯುವ ಆಡಳಿತವನ್ನು ಉದ್ಯಮ ವಲಯ ನಿರೀಕ್ಷಿಸುತ್ತದೆ. ಜಿಎಸ್‌ಟಿಯು ಆರ್ಥಿಕ ಕ್ಷೇತ್ರದಲ್ಲಿ ಬದಲಾವಣೆ ತರುವ ನಿರೀಕ್ಷೆಗಳಿದ್ದು, ತಕ್ಷಣವೇ ಯಾವುದೇ ನಿರ್ಧಾರ ಕೈಗೊಳ್ಳುವುದು ಸೂಕ್ತವಲ್ಲ. ಬದಲಾವಣೆಗಳ ಬಗ್ಗೆ ನಂಬಿಕೆ ಇರಿಸಬೇಕು’ ಎಂದು ಅಭಿಪ್ರಾಯಪಟ್ಟರು.

ಎಫ್ಕೆಸಿಸಿಐ ಅಧ್ಯಕ್ಷ ಕೆ.ರವಿ ಮಾತನಾಡಿ, “ದಾಬಸ್‌ಪೇಟೆ ಬಳಿ 1.5 ಎಕರೆ ಪ್ರದೇಶದಲ್ಲಿ ಕೌಶಲ್ಯ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದೆ. ಜಿಎಸ್‌ಟಿಗೆ ಸಂಬಂಧಪಟ್ಟಂತೆ ಉದ್ಯಮಿಗಳಲ್ಲಿನ ಗೊಂದಲಗಳನ್ನು ಜಿಲ್ಲಾ ಮಟ್ಟದಲ್ಲಿ ನಿವಾರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಎಫ್ಕೆಸಿಸಿಐ ಹಿರಿಯ ಉಪಾಧ್ಯಕ್ಷ ಸುಧಾಕರ್‌ ಎಸ್‌.ಶೆಟ್ಟಿ, ಉಪಾಧ್ಯಕ್ಷ ಸಿ.ಆರ್‌.ಜನಾರ್ದನ್‌, ಮಾಜಿ ಅಧ್ಯಕ್ಷ ಎಂ.ಸಿ.ದಿನೇಶ್‌ ಇದ್ದರು.

ಜಿಎಸ್‌ಟಿ ಬಗ್ಗೆ ಈಗಲೇ ಟೀಕೆ ಬೇಡ. ಹೊಸ ತೆರಿಗೆ ಪದ್ಧತಿ ಜಾರಿಯಾಗಿ 75 ದಿನವಷ್ಟೇ ಕಳೆದಿದೆ. ಜಿಎಸ್‌ಟಿಯಿಂದ ಸಾಕಷ್ಟು ಅನುಕೂಲಗಳಿವೆ. ಯಾವುದೇ ಸಮಸ್ಯೆಗಳಿದ್ದರೂ ಪ್ರಧಾನಿಯವರ ಗಮನ ಸೆಳೆಯಲು ಸಿದ್ಧ. ಕೇಂದ್ರ ಬಜೆಟ್‌ನಲ್ಲಿ ಉದ್ಯಮಕ್ಕೆ ಪೂರಕ ಅಂಶಗಳ ಬಗ್ಗೆ ಎಫ್ಕೆಸಿಸಿಐ ಸಲಹೆ ನೀಡುವುದಾದರೆ ಸ್ವಾಗತ.
-ಅನಂತಕುಮಾರ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.