ಬಲ್ಕ್ ಎಸ್ಎಂಎಸ್, ಇಮೇಲ್ ಮೇಲೆ ಆಯೋಗ ನಿಗಾ
Team Udayavani, Apr 14, 2018, 6:35 AM IST
ಬೆಂಗಳೂರು:ಅಭ್ಯರ್ಥಿ ಇಲ್ಲವೇ ರಾಜಕೀಯ ಪಕ್ಷಗಳ ಪರವಾಗಿ ಒಮ್ಮೆಗೆ ಸಾಕಷ್ಟು ಮಂದಿಗೆ ಎಸ್ಎಂಎಸ್, ಇ ಮೇಲ್ ರವಾನಿಸುವುದರ ಬಗ್ಗೆಯೂ ಚುನಾವಣಾ ಆಯೋಗ ನಿಗಾ ವಹಿಸುತ್ತಿದೆ.
ಚುನಾವಣೆ ಹಿನ್ನೆಲೆಯಲ್ಲಿ ಸರ್ವ ರೀತಿಯ ಪ್ರಚಾರಗಳ ಬಗ್ಗೆಯೂ ನಿಗಾ ವಹಿಸಿರುವ ಆಯೋಗ ರಾಜಕೀಯ ಜಾಹೀರಾತುಗಳ ಬಗ್ಗೆಯೂ ಸೂಕ್ಷ್ಮ ಮೇಲ್ವಿಚಾರಣೆ ನಡೆಸುತ್ತಿದೆ. ಮುಖ್ಯವಾಗಿ ಸುಧಾರಿತ ತಂತ್ರಜ್ಞಾನದಿಂದಾಗಿ ಒಮ್ಮೆಗೆ ಒಂದು ಸಂದೇಶವನ್ನು ನೂರಾರು ಮಂದಿಗೆ ರವಾನಿಸುವ, ಒಂದೇ ಮಾಹಿತಿಯನ್ನು ನೂರಾರು ಮಂದಿಗೆ ಇ ಮೇಲ್ ಮೂಲಕ ರವಾನಿಸುವ ಪ್ರಕ್ರಿಯೆಗಳು ನಡೆದಿವೆ. ಈ ರೀತಿಯ ಸಂದೇಶಗಳನ್ನೂ ಆಯೋಗ ಸೂಕ್ಷ್ಮವಾಗಿ ಗಮನಿಸುತ್ತಿದೆ.
ದೊಡ್ಡ ಸಮೂಹಕ್ಕೆ ಎಸ್ಎಂಎಸ್ ರವಾನಿಸುವಾಗ ಅದಕ್ಕೆ ಶುಲ್ಕ ಭರಿಸಬೇಕಾಗುತ್ತದೆ. ಆ ವೆಚ್ಚ ಅಭ್ಯರ್ಥಿಯ ವೆಚ್ಚದ ಬಾಬಿ¤ಗೆ ಒಳಪಡುತ್ತದೆ. ಜತೆಗೆ ಎಸ್ಎಂಎಸ್ನಲ್ಲಿನ ಸಂದೇಶದಿಂದ ನೀತಿ ಸಂಹಿತೆ ಉಲ್ಲಂಘನೆಯಾಗುವುದಾದರೆ ಆ ಬಗ್ಗೆಯೂ ಪ್ರಕರಣ ದಾಖಲಿಸಬೇಕಾಗುತ್ತದೆ. ಹಾಗಾಗಿ ಆಯೋಗ ಸದ್ಯದಲ್ಲೇ ಟೆಲಿಕಾಂ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಲು ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.