ಅತ್ಯಾಚಾರದ ವಿಡಿಯೋ ಮುಂದಿಟ್ಟು ಲೈಂಗಿಕ ಕ್ರಿಯೆಗೆ ಪೀಡನೆ


Team Udayavani, Feb 8, 2017, 11:34 AM IST

harasment.jpg

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅಪ್ರಾಪ್ತೆಯ ಪರಿಚಯ ಮಾಡಿಕೊಂಡು ಅತ್ಯಾಚಾರಗೈದ ವಿಡಿಯೋ ಮೂಲಕ ಲೈಂಗಿಕ ಕ್ರಿಯೆಗೆ ಪೀಡಿಸು ತ್ತಿದ್ದ ಉತ್ತರ ಭಾರತ ಮೂಲದ ಪ್ರಗತಿಶ್‌ (26) ಎಂಬಾತನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಾಹಿರಾತು ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸಾಮಾಜಿಕ ಜಾಲ ತಾಣದಲ್ಲಿ ಅಪ್ರಾಪ್ತೆಯನ್ನು ಪರಿಚಯಿಸಿಕೊಂಡು ಬಳಿಕ ಅಪಾರ್ಟ್‌ಮೆಂಟ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಆಗಾಗ್ಗ ಅಪ್ರಾಪ್ತೆಗೆ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಪೀಡಿಸುತ್ತಿದ್ದ. 

ಇದರಿಂದ ಬೇಸತ್ತ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಇಂದಿರಾನಗರದಲ್ಲಿರುವ ಗ್ರೇ ಮೀಡಿಯಾ ಅಡ್ವರ್ಟೆçಸಿಂಗ್‌ ಮತ್ತು ಫ್ಯಾಷನ್‌ ಡಿಸೈನರ್‌ ಸಂಸ್ಥೆಯ ವಿಸಿಟಿಂಗ್‌ ಕಾರ್ಡ್‌ ಹೊಂದಿದ್ದ. ಆರೋಪಿ ಕಳೆದ ಒಂದು ತಿಂಗಳ ಹಿಂದೆ ವಿಲ್ಸನ್‌ ಗಾರ್ಡನ್‌ ನಿವಾಸಿ ಅಪ್ರಾಪೆಯನ್ನು ಫೇಸ್‌ಬುಕ್‌ನಲ್ಲಿ ಪರಿಚಯಿಸಿಕೊಂಡಿದ್ದ.

ಫೇಸ್‌ಬುಕ್‌ನಲ್ಲಿ ಇಬ್ಬರು ಮೊಬೈಲ್‌ ಸಂಖ್ಯೆ ವಿನಿಮಯ ಮಾಡಿಕೊಂಡಿದ್ದರು. ಬಳಿಕ ಬಾಲಕಿ ಜತೆ ಸಲುಗೆಯಿಂದ ಇದ್ದ  ಪ್ರಗತಿಶ್‌ ಆಕೆಯನ್ನು ಒಂದೆರಡು ಬಾರಿ ಭೇಟಿ ಕೂಡ ಮಾಡಿದ್ದ. ಆಕೆಯನ್ನು ಮತ್ತೂಮ್ಮೆ ಭೇಟಿ ಮಾಡುವ ನೆಪದಲ್ಲಿ ತನ್ನ ಅಪಾರ್ಟ್‌ ಮೆಂಟ್‌ವೊಂದರ ಫ್ಲ್ಯಾಟ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಂಡು ಆಗ್ಗಾಗ್ಗೆ ಲೈಂಗಿಕ ಕ್ರಿಯೆಗೆ ಪೀಡಿಸುತ್ತಿದ್ದ. 

ಇದಕ್ಕೆ ಒಪ್ಪದ ಬಾಲಕಿಗೆ ಆರೋಪಿ ಪ್ರಾಣ ಬೆದರಿವೊಡ್ಡಿ, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಸುತ್ತಿದ್ದ ಸಂತ್ರಸ್ತ ಬಾಲಕಿ ದೂರಿನಲ್ಲಿ ಹೇಳಿದ್ದಾಳೆ. ಆತನ ಸಮಸ್ಯೆ ತಾಳಲಾರದೆ ಸಂತ್ರಸ್ತ ಬಾಲಕಿ ವಿಲ್ಸನ್‌ಗಾರ್ಡನ್‌ ಠಾಣೆ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದ್ದಳು. ಘಟನೆ ರಾಮಮೂರ್ತಿನಗರದಲ್ಲಿ ನಡೆದ್ದರಿಂದ ರಾಮಮೂರ್ತಿ ನಗರ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.