ಸೌಲಭ್ಯವಿಲ್ಲದ ಶಿಕ್ಷಣ ಸಂಸ್ಥೆ ಬಂದ್ ಮಾಡಿ
Team Udayavani, Dec 12, 2017, 12:22 PM IST
ಬೆಂಗಳೂರು: ಮೂಲ ಸೌಕರ್ಯ ಹಾಗೂ ಬೋಧಕರ ಕೊರತೆ ಎದುರಿಸುತ್ತಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಮುಂದಿನ ವರ್ಷದಿಂದ ಮಾನ್ಯತೆ ನೀಡದಂತೆ ರಾಜ್ಯಪಾಲ ವಿ.ಅರ್.ವಾಲಾ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದ ಹೋಟೆಲೊಂದರಲ್ಲಿ ಸೋಮವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ ಹಾಗೂ ಸ್ವಾಯತ್ತ ತಾಂತ್ರಿಕ ಮಹಾವಿದ್ಯಾಲಯಗಳ ಅಧ್ಯಕ್ಷ, ಕಾರ್ಯಾಧ್ಯಕ್ಷ, ಆಡಳಿತ ಮಂಡಳಿ ಸದಸ್ಯರ ಶೃಂಗಸಭೆ ಉದ್ಘಾಟಿಸಿ ಮತನಾಡಿದರು.
ಶಿಕ್ಷಣ ಸಂಸ್ಥೆಯಲ್ಲಿ ಎಲ್ಲ ರೀತಿಯ ಸೌಲಭ್ಯ ಇದ್ದಾಗ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯ. ಸರ್ಕಾರಿ ಕಾಲೇಜುಗಳಲ್ಲಿ ಶೇ.50ರಷ್ಟು ಸೀಟು ಭರ್ತಿಯಾಗುವುದಿಲ್ಲ ಎಂಬ ಆರೋಪವೂ ಇದೆ. ಬೋಧಕರಿಲ್ಲದೇ ಶೈಕ್ಷಣಿಕ ಸಾಧನೆ ಅಸಾಧ್ಯ.
ಹೀಗಾಗಿ ಸೌಲಭ್ಯ ಚೆನ್ನಾಗಿಲ್ಲದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಮುಂದಿನ ವರ್ಷದಿಂದ ಮಾನ್ಯತೆ ನವೀಕರಿಸಬೇಡಿ ಎಂದು ವೇದಿಕೆಯಲ್ಲಿ ಕುಳಿತಿದ್ದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಸೂಚಿಸಿದರು.
ಸಂಸ್ಥೆ ಮುಖ್ಯಸ್ಥರಿಗೆ ಪಾಠ: ಹಣಗಳಿಸುವ ಉದ್ದೇಶದಿಂದ ಖಾಸಗಿ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಕೆಲಸ ಮಾಡಬಾರದು. ಶಿಕ್ಷಣ ವ್ಯಾಪಾರದ ಸೊತ್ತಲ್ಲ. ರಾಷ್ಟ್ರದ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಗುಣ ತುಂಬುವ ಕೆಲಸ ಆಗಬೇಕು.
ಹಣ ಮಾಡುವ ಉದ್ದೇಶದಿಂದ ಆರಂಭವಾಗುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ಸೇವಾ ಮನೋಧರ್ಮ ಬೆಳೆಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಸಂಸ್ಥೆಯ ಮುಖ್ಯಸ್ಥರು ಅರಿತಿರಬೇಕು ಎಂಬ ಸಲಹೆ ನೀಡಿದರು.
ಕೋಟ್ಯಾಂತರ ರೂಪಾಯಿ ವ್ಯಯಿಸಿ ವೈದ್ಯ ಪದವಿ ಪಡೆದವರಿಂದ ವೈದ್ಯಕೀಯ ಸೇವೆ ನಿರೀಕ್ಷೆ ಮಾಡಲು ಸಾಧ್ಯವೇ? ಹೀಗಾಗಿ ಶಿಕ್ಷಣ ಸಂಸ್ಥೆಗಳು ಹಣ ಮಾಡುವ ಸಂಸ್ಥೆಗಳಾಗದೇ ರಾಷ್ಟ್ರ ಅಭ್ಯುದಯದ ಕೇಂದ್ರವಾಗಬೇಕು. ರಾಷ್ಟ್ರದ ಹಿತ ಗಮನದಲ್ಲಿಟ್ಟುಕೊಂಡು ತಂತ್ರಜ್ಞರನ್ನು ಸೃಷ್ಠಿಸಬೇಕು. ಶಿಕ್ಷಣ ಸಂಸ್ಥೆಗಳು ಸಮಸ್ಯೆಯನ್ನು ಮುಕ್ತವಾಗಿ ಹೇಳಿಕೊಳ್ಳುವಂತಿರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಎಚ್.ಎನ್. ಜಗನ್ನಾಥರೆಡ್ಡಿ, ಡಾ. ಸತೀಶ ಅಣ್ಣಿಗೇರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.