ಬಸ್ ದರ ಏರಿಕೆ ಸದ್ಯಕ್ಕಿಲ್ಲ: ಸಿಎಂ
Team Udayavani, Oct 13, 2018, 8:48 AM IST
ಬೆಂಗಳೂರು: ಸಾರಿಗೆ ಇಲಾಖೆಯ ಬಸ್ ದರ ಏರಿಕೆಯ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ರೇಕ್ ಹಾಕಿದ್ದು, ಸಂಸ್ಥೆಗಳ ನಷ್ಟ ಸರಿದೂಗಿಸಲು ಪರ್ಯಾಯ ಆದಾಯದ ಮೂಲ ಹುಡುಕುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಸ್ ದರ ಏರಿಕೆ ಪ್ರಸ್ತಾಪವನ್ನು ತಳ್ಳಿ ಹಾಕಿದ್ದು, ಸಾರಿಗೆ ನಿಗಮಗಳ ನಷ್ಟ ತುಂಬಿಕೊಳ್ಳಲು ಪ್ರಯಾಣಿಕರ ಆಶಯಗಳನ್ನು ಅರ್ಥೈಸಿಕೊಂಡು ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಯ ಈ ನಿರ್ಧಾರದಿಂದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಯಾಣಿಕರಿಗೆ ಮೂಲ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಸೌಕರ್ಯ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಸೂಚಿಸಿದ್ದಾರೆ. ಮೆಟ್ರೋ ರೈಲಿನೊಂದಿಗೆ ಸಮನ್ವಯ ಸಾಧಿಸುವತ್ತ ಗಮನ ಹರಿಸಬೇಕು, ಅಲ್ಲದೆ, ಬಸ್ ದರ ಹೆಚ್ಚಳ ಮಾಡುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಾರಿಗೆ ಸಂಸ್ಥೆಗಳು ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿವೆ. ನಷ್ಟ ಸರಿದೂಗಿಲು ಮುಖ್ಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಪರ್ಯಾಯ ಆದಾಯದ ಮಾರ್ಗಗಳನ್ನು ಹುಡುಕುವಂತೆ ನಿರ್ದೇಶಿಸಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.