ನಗರದಲ್ಲಿ ಆಯುಧಪೂಜೆಗೆ ವ್ಯಾಪಾರ ಭರಾಟೆ ಜೋರು

Team Udayavani, Oct 17, 2018, 12:54 PM IST

nagaradalli.jpg

ಬೆಂಗಳೂರು: ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ನಗರದ ಮಾರುಕಟ್ಟೆಗಳಲ್ಲಿ ಹೂವು-ಹಣ್ಣು , ಪೂಜಾ ಸಾಮಗ್ರಿಗಳ ಮಾರಾಟದ ಭರಾಟೆ ಜೋರಾಗಿದೆ. ಕೆ.ಆರ್‌ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ, ಮಲ್ಲೇಶ್ವರದ ಮಾರುಕಟ್ಟೆ, ಗಾಂಧಿ  ಬಜಾರ್‌ ಸೇರಿದಂತೆ ಮಾರುಕಟ್ಟೆಗಳಲ್ಲಿ ಗ್ರಾಹಕರು ಹೂವು- ಹಣ್ಣು, ಕುಂಬಳಕಾಯಿ, ಕಡಲೇಪುರಿ, ನಿಂಬೆ ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದರು.

ದಸರಾ ಪ್ರಯುಕ್ತ ನಗರದ ಮಾರುಕಟ್ಟೆಗಳಿಗೆ ಆಂಧ್ರ ಹಾಗೂ ತಮಿಳುನಾಡಿನಿಂದ ಮಲ್ಲಿಗೆ, ಮಾರಿಗೋಲ್ಡ್‌ ಸೇವಂತಿಗೆ, ಐಸ್‌ಬರ್ನ್ ಸೇವಂತಿಗೆ, ಮಲ್ಲೆ, ಜಾಜಿ ಹೂವುಗಳು ಲೋಡ್‌ಗಟ್ಟಲೆ ಬಂದಿವೆ. ಹೂವುಗಳ ಬೆಲೆಯು ಮಂಗಳವಾರದಿಂದಲೇ ಏರಿಕೆ ಕಂಡುಬಂದಿದೆಯಾದರೂ ಹಣ್ಣಿನ ದರ ಸ್ವಲ್ಪಮಟ್ಟಿಗೆ ಕಡಿಮೆ ಇದೆ.

ಮಂಗಳವಾರ ಕೆ.ಆರ್‌ ಮಾರುಕಟ್ಟೆಯಲ್ಲಿ ಸೇವಂತಿ ಹೂವು ಕೆ.ಜಿ.ಗೆ 200 ರಿಂದ 350 ರೂ. ಇದೆ. ಚೆಂಡು ಹೂವು ಕೆ.ಜಿ.ಗೆ 60 ರಿಂದ 100 ರೂ. ತಲುಪಿದೆ. ಬಹು ಬೇಡಿಕೆಯ ಸೇವಂತಿ ಹೂವು, ಚೆಂಡು ಹೂವುಗಳ ಬೆಲೆ ಬುಧವಾರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹೂವಿನ ವ್ಯಾಪಾರಿ ಚಂದ್ರಮ್ಮ.

ಈ ಬಾರಿ ಗುರುವಾರ ಆಯುಧಪೂಜೆ ಇರುವುದರೊಂದಿಗೆ ಮುಂದಿನ ಮೂರ್‍ನಾಲ್ಕು ದಿನಗಳು ಸಾಲು ಸಾಲು ರಜೆಗಳಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಬುಧವಾರವೇ ಆಯುಧ ಪೂಜೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಆಯುಧಪೂಜೆ ಹಾಗೂ ವಿಜಯದಶಮಿಗೆ ಕಚೇರಿಗಳು ಮತ್ತು ಕಾರ್ಖಾನೆಗಳಲ್ಲಿ ಪೂಜೆ ಸಲ್ಲಿಸಿದ ನಂತರ ಸಿಬ್ಬಂದಿಗೆ ಸಿಹಿ ಜೊತೆಗೆ ಕಡ್ಲೆಪುರಿ ವಿತರಿಸುವುದು ವಾಡಿಕೆ. ಹೀಗಾಗಿ ಕಡ್ಲೆಪುರಿಗೆ ಹೆಚ್ಚು ಬೇಡಿಕೆಯಿದ್ದು, ಒಂದು ಸೇರಿಗೆ 10-20 ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ. ಸಿಹಿ ತಿನಿಸುಗಳ ದರವೂ ಗ್ರಾಹಕರ ಕೈ ಸುಡಲಿದೆ. ಲಾಡು 300 ರೂ., ಒಣ ಹಣ್ಣುಗಳು (ಡ್ರೈ ಫ್ರೂಟ್ಸ್‌)ಲಾಡು 500 ರೂ., ಜಿಲೇಬಿ -ಜಹಾಂಗೀರ್‌ 400 ರೂ. ಬಾದಮ್‌ ಬರ್ಫಿ 480 ರೂ. ಆಗಿದೆ.

ದರಪಟ್ಟಿ
ಹೂವುಗಳು    ಬೆಲೆ ಒಂದು ಕೆ.ಜಿಗೆ (ರೂ.ಗಳಲ್ಲಿ)

-ಮಲ್ಲಿಗೆ        300-400
-ಕಾಕಡ    350-400
-ಮಲ್ಲೆ    300-350
-ಚೆಂಡು    ಹೂವು    60-100
-ಕಣಗಲೆ    200-250
-ಸೇವಂತಿಗೆ    200-350
-ಮಾರಿಗೋಲ್ಡ್‌ ಸೇವಂತಿಗೆ    200-350
-ಕನಕಾಂಬರ    400
-ಸುಗಂಧರಾಜ    120-150
-ಡೈರೆ ಒಂದಕ್ಕೆ    5 ರೂ.

ಹಣ್ಣಿನ ದರಪಟ್ಟಿ
ಹಣ್ಣುಗಳು    ದರಪಟ್ಟಿ (ಒಂದು ಕೆಜಿಗೆ ರೂ.ಗಳಲ್ಲಿ)
ಹಾಪ್ಸ್‌ಕಾಮ್ಸ್‌    ಕೆ.ಆರ್‌ಮಾರುಕಟ್ಟೆ

-ಏಲಕ್ಕಿ ಬಾಳೆ    68    70
-ಪಚ್ಚಾ ಬಾಳೆ    25    28-30
ದ್ರಾಕ್ಷಿ    63    70-75
-ಸೀಬೆಕಾಯಿ    75    80-100
-ಕಿತ್ತಳೆ    65    65-80
-ಫೈನ್‌ಆ್ಯಪಲ್‌    67    ಜೋಡಿ 50-60
-ಸೇಬು    118    120
-ದಾಳಿಂಬೆ    167    150-180
-ಮೂಸಂಬಿ    —    50-60

-ಕುಂಬಳಕಾಯಿ 150-250 ರೂ.
-ಬಾಳೆಕಂಬ ಜೋಡಿಗೆ 30 ರೂ.
-ನಿಂಬೆಹಣ್ಣು ಒಂದಕ್ಕೆ  4-5 ರೂ.
-ತೆಂಗಿನಕಾಯಿ ಜೋಡಿ 50 ರೂ.

ಟಾಪ್ ನ್ಯೂಸ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

7

Karkala: ಅನಂತಶಯನ ಗುಡ್ಡೆಯಂಗಡಿ ರಸ್ತೆ ದುಃಸ್ಥಿತಿ; ಸವಾರರಿಗೆ ಪ್ರಾಣಸಂಕಟ

6(1

Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.