ಪಾಲಿಕೆಯಿಂದ ಆತ್ಯಾಧುನಿಕ ಆ್ಯಂಬುಲೆನ್ಸ್ ಖರೀದಿ
Team Udayavani, Feb 15, 2019, 6:38 AM IST
ಬೆಂಗಳೂರು: ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಆ್ಯಂಬುಲೆನ್ಸ್‌ನಲ್ಲೇ ಚಿಕಿತ್ಸೆ ಒದಗಿಸುವ ಉದ್ದೇಶದಿಂದ “ಅಡ್ವಾನ್ಸ್ ಲೈಫ್ ಸಪೋರ್ಟ್ ಸಿಸ್ಟಂ’ ಒಳಗೊಂಡ ಆರು ಆ್ಯಂಬುಲೆನ್ಸ್ ಖರೀದಿಸಲು ಪಾಲಿಕೆ ನಿರ್ಧರಿಸಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಆರು ರೆಫರಲ್ ಆಸ್ಪತ್ರೆಗಳು ಹಾಗೂ ಬಹುತೇಕ ವಾರ್ಡ್‌ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಆದರೆ, ಪ್ರಸ್ತುತ ಇರುವ ಆ್ಯಂಬುಲೆನ್ಸ್‌ಗಳು ಹಳೆಯದಾಗಿದ್ದು, ಪ್ರಾಥಮಿಕ ಚಿಕಿತ್ಸೆ ಮಾತ್ರ ನೀಡಲಿವೆ. ಆ ಹಿನ್ನೆಲೆಯಲ್ಲಿ ಆರು ರೆಫರಲ್ ಆಸ್ಪತ್ರೆಗಳಿಗೆ ತಲಾ ಒಂದು ಆ್ಯಂಬುಲೆನ್ಸ್ ಖರೀದಿಸಲು ಪಾಲಿಕೆ ಯೋಜನೆ ರೂಪಿಸಿದೆ.
2018-19ನೇ ಸಾಲಿನಲ್ಲಿ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಎರಡು ಕೋಟಿ ರೂ. ಅನುದಾನದಲ್ಲಿ ಈ ಆ್ಯಂಬುಲೆನ್ಸ್ ಖರೀದಿಸಲು ಟೆಂಡರ್ ಕರೆಯಲು ಸಿದ್ಧತೆ ನಡೆಸಿದೆ. ಪ್ರತಿ ಆ್ಯಂಬುಲೆನ್ಸ್‌ಗೆ 35 ರಿಂದ 40 ಲಕ್ಷ ರೂ. ವೆಚ್ಚವಾಗಲಿದೆ.
ಪಾಲಿಕೆ ಹಾಗೂ ಸರ್ಕಾರದ ಅನುದಾನ ಬಳಸಿ ತಲಾ ಮೂರು ಅತ್ಯಾಧುನಿಕ ಆ್ಯಂಬುಲೆನ್ಸ್ ಖರೀದಿಸಲಾಗುವುದು ಎಂದು ಆರೋಗ್ಯ ಮತ್ತು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ರಂದೀಪ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.