ಸಿ.ಎಂ. ಗೆ ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆಗೆ ಹೋಗಬೇಕು
Team Udayavani, Nov 4, 2019, 1:07 PM IST
ಬೆಂಗಳೂರು: ಆಡಿಯೋ ಪ್ರಕರಣವನ್ನು ತನಿಖೆ ನೀಡಿರುವ ನಳಿನಕುಮಾರ್ ಕಟೀಲ್ ಆಡಿಯೋ ತಮ್ಮ ಸಭೆಯಲ್ಲಿಯೇ ನಡೆದಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಆದ ನಂತರ ಬಿಜೆಪಿ ಸಚಿವರು ಸಮೂಹ ಶನಿ ಹಿಡಿದಂತೆ ಮಾತನಾಡುತ್ತಿದ್ದಾರೆ. ಅವರು ಆರೋಗ್ಯವಾಗಿರಬೇಕಾದರೆ ಅವರಿಗೆ ನಿಮ್ಯಾನ್ಸ್ ನಲ್ಲಿ ಚಿಕಿತ್ಸೆ ಅಗತ್ಯವಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.
ಯಡಿಯೂರಪ್ಪ ಎರಡು ನಾಲಿಗೆ ಇಟ್ಟುಕೊಂಡಿದ್ದಾರೆ. ಅವರೇ ಅನರ್ಹರನ್ನು ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಎರಡು ತಿಂಗಳು ಅವರನ್ನು ಮುಂಬೈನಲ್ಲಿ ಇಟ್ಟುಕೊಂಡಿದ್ದಾರೆ ಎಂದು ಹೇಳಿದವರು ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದರು.
ಆಡಿಯೋ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆಗೆ ಆದೇಶ ಮಾಡಿ. ನಿಮಗೆ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ನೀವು ಬಹುಮತ ಪಡೆದರೆ ನಾನು ನಿಮಗೆ ಸೆಲ್ಯುಟ್ ಹೊಡೆಯುತ್ತೇನೆ. ನೀವು ಯಡಿಯೂರು ಸಿದ್ದಲಿಂಗನ ಸನ್ನಿಧಾನದಲ್ಲಿ ಪ್ರಮಾಣ ಮಾಡಿ, ನೀವು ಅಮಿತ್ ಶಾ ನಿರ್ದೇಶನದಂತೆ ಅನರ್ಹ ಶಾಸಕರನ್ನು ಮುಂಬೈನಲ್ಲಿ.ಇಟ್ಟುಕೊಂಡಿದ್ದೇವು ಎಂದು ಹೇಳಿಲ್ಲ ಎಂದು ಪ್ರಮಾಣ ಮಾಡಿ, ನಾವು ನೀವೇ ಹೇಳಿದ್ದು ಎಂದು ಪ್ರಮಾಣ ಮಾಡಲು ಸಿದ್ದರಿದ್ದೇವೆ ಎಂದು ಸವಾಲು ಹಾಕಿದ್ದರು.
ನಿಮ್ಮನ್ನು ಸಿಎಂ ಸ್ಥಾನದಿಂದ.ಕೆಳಗೆ ಇಳಿಸಲು ಬಿಜೆಪಿಯಲ್ಲಿ ಗುಂಪುಗಳು ಪ್ರಯತ್ನ ನಡೆಸುತ್ತಿದ್ದಾರೆ. 2011ರ ರಲ್ಲಿ ನಿಮ್ಮನ್ನು ಕೆಳಗಿಳಿಸಿದವರು ಈಗ ಮತ್ತೆ ನಿಮ್ಮನ್ನು ಕೆಳಗಿಳಿಸಲು ಪ್ರಯತ್ನ ಮಾಡುತ್ತಿದ್ದಾರೆ.,
ಅಶೋಕ್ ಅವರು ಮೊಯ್ಲಿ ಕಾಲದಿಂದಲೂ ಆಡಿಯೋ ಬರುತ್ತಿದೆ ಎಂದು ಹೇಳುತ್ತಿದ್ದಾರೆ. ಅಶೋಕ್ ಬಾಯಿಗೆ ಬಂದಂತೆ ಮಾತನಾಡಬೇಡಿ. ತಾಕತ್ತಿದ್ದರೆ ಅವರಿಂದಾನೆ ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳಬೇಕು. ಈಗ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೇಲೆ ಭಯ ಶುರುವಾಗಿದೆ . ಅಮಿತ್ ಶಾ ಒಂದು ಸರ್ಕಾರ ಪತನಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಅವರು ಸಚಿವರಾಗಿ ಮುಂದುವರೆಯಲು ನೈತಿಕತೆಯಿಲ್ಲ. ಯಡಿಯೂರಪ್ಪ ಅವರಿಗೆ ಸಂವಿಧಾನ ಅರ್ಥವಾಗುವುದಿಲ್ಲ. ಅವರು ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆಗೆ ಹೋಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur : ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.