40 ವಸತಿ ಶಾಲೆಗಳಿಗೆ ಸಂಪುಟ ಸಮ್ಮತಿ


Team Udayavani, May 6, 2017, 10:54 AM IST

Bangalore—Vidhan-Saudha.jpg

646.42 ಕೋಟಿ ರೂ. ವೆಚ್ಚದಲ್ಲಿ 15 ಜಿಲ್ಲೆಗಳಲ್ಲಿ ನಿರ್ಮಾಣ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮಕ್ಕಳಿಗಾಗಿ “ಹೋಬಳಿಗೊಂದು ವಸತಿ ಶಾಲೆ’ ಎಂಬ ಆಶಯ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಅಂದಾಜು 646.42 ಕೋಟಿ ರೂ. ವೆಚ್ಚದಲ್ಲಿ 40 ವಸತಿ ಶಾಲಾ ಸಂಕೀರ್ಣಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿ.ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು.

ಚಿತ್ರದುರ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪರಿಶಿಷ್ಟ ವರ್ಗದ 6 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಸಂಕೀರ್ಣಗಳನ್ನು 99.16 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಅದೇ ರೀತಿ ಕೋಲಾರ, ಚಿತ್ರದುರ್ಗ, ತುಮಕೂರು, ಹಾಸನ, ಉತ್ತರ ಕನ್ನಡ, ಹಾವೇರಿ, ಕಲಬುರಗಿ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಯ 13 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಪದವಿ ಪೂರ್ವ ಕಾಲೇಜು/ ಅಟಲ್‌ ಬಿಹಾರಿ ವಾಜಪೇಯಿ ಶಾಲಾ ಸಂಕೀರ್ಣಗಳನ್ನು 208.65 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಒಪ್ಪಿಗೆ ನೀಡಲಾಗಿದೆ.

ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಯ 8 ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣಗಳನ್ನು 132.67 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅನುಮೋದನೆ ನೀಡಲಾಗಿದೆ. ಅಲ್ಲದೇ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ದಾವಣಗೆರೆ, ಹಾಸನ, ಚಾಮರಾಜನಗರ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಯ 13 ಮೊರಾರ್ಜಿ
ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲಾ ಸಂಕೀರ್ಣಗಳನ್ನು 205.94 ಕೋಟಿ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಜಯಚಂದ್ರ ತಿಳಿಸಿದರು.

ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ವ್ಯಾಪ್ತಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 48.95 ಕೋಟಿ ರೂ. ಅಂದಾಜು ಮೊತ್ತದಲ್ಲಿ ಒಳಚರಂಡಿ ಯೋಜನೆ ಕೈಗೆತ್ತಿಕೊಳ್ಳಲು ಒಪ್ಪಿಗೆ ಕೊಡಲಾಗಿದೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣಕ್ಕೆ ನೀರು ಸರಬರಾಜು ಕಾಮಗಾರಿಯನ್ನು 88 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣಕ್ಕೆ 49.36 ಕೋಟಿ ರೂ. ವೆಚ್ಚದಲ್ಲಿ ನೀರು ಸರಬರಾಜು ಯೋಜನೆಗೆ ಅನುಮೋದನೆ ಕೊಡಲಾಗಿದೆ ಎಂದು ಅವರು ಹೇಳಿದರು. ಭೀಮಾ ಏತ ನೀರಾವರಿ ಯೋಜನೆಯಡಿಬಾಧಿತರಾದ ಸಂತ್ರಸ್ತರಿಗೆ ಶೇ.25ರಷ್ಟು ಸವಕಳಿ ಮೊತ್ತವನ್ನು ಕಡಿತಗೊಳಿಸದೆ ಕಟ್ಟಡಗಳ ಪರಿಹಾರವಾಗಿ ಒಟ್ಟು 6.32 ಕೋಟಿ ರೂ. ಮೌಲ್ಯದ ಅವಾರ್ಡ್‌ ಮಾಡಿರುವ ಪ್ರಕರಣದ ವ್ಯತ್ಯಾಸದ ಮೊತ್ತ ಹಾಗೂ ಅವಾರ್ಡ್‌ ಮಾಡಬೇಕಾಗಿರುವ ಪ್ರಕರಣಗಳ ಮೊತ್ತ ಪಾವತಿಗೆ ಒಪ್ಪಿಗೆ. ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲೂಕಿನ ಸರಗೂರು-ಹೆಡೆಯಾಲ ರಸ್ತೆಯನ್ನು ಬಡಗಲಪುರ ಮಾರ್ಗವಾಗಿ ಕಾಮಗಾರಿ ಪೂರ್ಣಗೊಳಿಸಲು 29.84 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇತರ ನಿರ್ಣಯಗಳು
– ಕರ್ನಾಟಕ ಜಲಸಂಪನ್ಮೂಲ ಇಲಾಖೆ (ಸಹಾಯಕ ಇಂಜಿನಿಯರ್‌ ಮತ್ತು ಕಿರಿಯ ಇಂಜಿನಿಯರುಗಳ ವೃಂದದ ನೇಮಕಾತಿ) (ವಿಶೇಷ) ನಿಯಮಗಳು-2017ಕ್ಕೆ ಅನುಮೋದನೆ.

– ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ 300 ಕೋಟಿ ರೂ. ಸಾಲಕ್ಕೆ ಸರ್ಕಾರಿ ಖಾತರಿಗೆ ಒಪ್ಪಿಗೆ.

– ಕುಪಲತಿಗಳ ನಿವೃತ್ತಿ ವಯೋಮತಿ ಪರಿಷ್ಕರಿಸುವ ಸಂಬಂಧ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಅಧಿನಿಯಮಕ್ಕೆ ತಿದ್ದುಪಡಿ.

– ಇಲಾಖಾ ವಿಚಾರಣೆ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳಾದ ಗಿರೀಶ್ಚಂದ್ರ ಹಾಗೂ ಎಸ್‌.ಕೆ. ಹೆಗಡೆಗೆ ಕಡ್ಡಾಯ ನಿವೃತ್ತಿಗೆ ಒಪ್ಪಿಗೆ.

– ಬ್ರಹ್ಮಕುಮಾರಿ ಸಂಸ್ಥೆ ಮುಂಬೈ ಇವರಿಗೆ ಭಾಲ್ಕಿ ಪುರಸಭೆ ವ್ಯಾಪ್ತಿಯಲ್ಲಿ ಸಿಎ ನಿವೇಶನ ಮಂಜೂರು.

– ಹಟ್ಟಿ ಚಿನ್ನದ ಗಣಿ ಕಂಪೆನಿಗೆ 57 ಕೋಟಿ ರೂ. ವೆಚ್ಚದಲ್ಲಿ ಸಾವಿರ ಟನ್‌ ಅದಿರು ಅರೆಯವ ಸಾಮರ್ಥಯದ 2 ಬಾಲ್‌ ಮಿಲ್‌ಗ‌ಳ ಅಳವಡಿಕೆಗೆ ಒಪ್ಪಿಗೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.