ಬಿ.ಖರಾಬು: 4 ಪಟ್ಟು ದರ ವಸೂಲಿ
Team Udayavani, Sep 16, 2020, 12:17 PM IST
ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಬಿ. ಖರಾಬು ಜಮೀನಿನಲ್ಲಿ ಮನೆ ಹಾಗೂ ಅಪಾರ್ಟ್‌ಮೆಂಟ್ ಕಟ್ಟಿಕೊಂಡಿದ್ದರೆ, ಅಂಥವರಿಂದ ಸರ್ಕಾರದ ಮಾರ್ಗಸೂಚಿದರದ4 ಪಟ್ಟು ದರ ನಿಗದಿ ಮಾಡಿ ವಸೂಲಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟದ ನಿರ್ಣಯದ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರ ಜಮೀನು ಬಿ ಖರಾಬು ವ್ಯಾಪ್ತಿಯಲ್ಲಿದ್ದರೆ. ಅಂತಹ ಜಮೀನಿನಲ್ಲಿ ಮನೆ ಅಥವಾ ಅಪಾರ್ಟ್ ಮೆಂಟ್ ಕಟ್ಟಿಕೊಂಡಿದ್ದರೆ, ಅಂತಹ ಮನೆಗಳಿಗೆ ಮಾರ್ಗಸೂಚಿ ದರದ 4 ಪಟ್ಟು ಹೆಚ್ಚಿನ ದರ ನಿಗದಿ ಪಡಿಸಿ ವಸೂಲಿ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಭೂ ಸುಧಾರಣೆ ಕಾಯ್ದೆಯ ಸೆಕ್ಷನ್ 64/2 ಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ತಿದ್ದುಪಡಿ ನಂತರ ಬೆಂಗಳೂರಿನ 18 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಬಿ. ಖರಾಬು ಭೂಮಿಯಲ್ಲಿ ಮನೆ ಕಟ್ಟಿಕೊಂಡವರು ಸಕ್ರಮ ಮಾಡಿಕೊಳ್ಳಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇಲ್ಲದಿದ್ದರೆ ಸರ್ಕಾರದ ಬಳಿ ದಾಖಲೆ ಇರುತ್ತದೆ. ಅದರ ಆಧಾರದ ಮೇಲೆ ನೊಟೀಸ್ ನೀಡಿ, ದಂಡ ವಸೂಲಿ ಮಾಡಲಾಗುವುದು ಎಂದು ಹೇಳಿದರು. ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಮಾತ್ರ ಇದು ಅನ್ವಯಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಯಾವುದೇ ರೀತಿಯಲ್ಲಿ ಮಾರಾಟ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.
ಇನ್ನು ನಗರದ ಆಗರ ಕೆರೆಯ ನೀರನ್ನುಶುದ್ಧೀಕರಣಗೊಳಿಸಿ ಆನೇಕಲ್ ಕೆರೆಗಳಿಗೆ ತುಂಬಿಸುವ ಯೋಜನೆಗೆ 30 ಕೋಟಿ ಅನುದಾನ ನೀಡಲು ಸಂಪುಟ ಒಪ್ಪಿಗೆ ನೀಡಿದೆ.ಮೊದಲು35ಎಂಎಲ್‌ಡಿನೀರನ್ನು ಶುದ್ಧೀಕರಿಸಲು ಕೆರೆಗಳಿಗೆ ಹರಿಸಲುನಿರ್ಧರಿಸಲಾಗಿತ್ತು. ಈಗ ಇನ್ನೂ 15 ಎಂ.ಎಲ್.ಡಿ ನೀರು ಶುದ್ಧೀಕರಿಸಲು ನಿರ್ಧರಿಸಲಾಗಿರುವುದರಿಂದ ಒಟ್ಟು 50 ಎಂ.ಎಲ್‌ಡಿ ನೀರು ಶುದ್ಧಿಕರಣಕ್ಕೆ ಸಂಪುಟ ಒಪ್ಪಿಗೆ ನೀಡಿದ್ದು, ಅದಕ್ಕಾಗಿ 30 ಕೋಟಿ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.
ಬಿಬಿಎಂಪಿ ವಿಭಜನೆ ಮಾಡಲು ಬಿಡುವುದಿಲ್ಲ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಬಿಬಿಎಂಪಿಯನ್ನು ವಿಭಜನೆ ಮಾಡಲು ಅವಕಾಶ ಕಲ್ಪಿಸುವುದಿಲ್ಲ. ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಅಧಿವೇಶನದಲ್ಲಿಯೇ ಮಂಡಿಸಲು ಪ್ರಯತ್ನ ನಡೆಸಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಜಂಟಿ ಸದನ ಸಮಿತಿ ಆದಷ್ಟು ಶೀಘ್ರವಾಗಿ ತಿದ್ದುಪಡಿ ಮಾಡಲು ಉಪ ಸಮಿತಿಗಳನ್ನು ರಚನೆ ಮಾಡಿದ್ದು, ವಾರದಲ್ಲಿ ಎರಡು ಬಾರಿ ಸಭೆ ನಡೆಸಿ ಚರ್ಚಿಸಲಾಗುತ್ತಿದೆ. ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 225 ಕ್ಕೆ ಹೆಚ್ಚಳ ಮಾಡುವ ಬಗ್ಗೆಯೂ ಸಭೆಯಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದು, ಅದೂ ಕೂಡ ಅಂತಿಮವಾಗಿಲ್ಲ. ಅಲ್ಲದೇ 40 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್ ಮಾಡುವ ಬಗ್ಗೆ ಆಕ್ಷೇಪಗಳು ಕೇಳಿ ಬಂದಿದೆ. ನಗರದ ಹೊರ ವಲಯದ ವಾರ್ಡ್‌ಗಳಲ್ಲಿ ಸಮಸ್ಯೆಯಾಗಲಿದೆ. ಅಲ್ಲದೇ 8 ರಿಂದ 15ವಲಯ ರಚನೆ ಮಾಡುವ ಬಗ್ಗೆ ಬೆಂಗಳೂರಿನ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ವಲಯಗಳಿಗೆ ಐಎಎಸ್ ಅಧಿಕಾರಿಗಳನೇಮಕಮಾಡುವಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆದರೆ, ಆದಷ್ಟುಇದೇ ಅಧಿವೇಶನದಲ್ಲಿ ತಿದ್ದುಪಡಿಗೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.