ಪಿತೃಪಕ್ಷ ನಂತರ ಸಂಪುಟ ವಿಸ್ತರಣೆ
Team Udayavani, Oct 2, 2018, 6:45 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗುತ್ತಿದ್ದು ಪಿತೃಪಕ್ಷ ಮುಗಿದ ನಂತರ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ತೀರ್ಮಾನಿಸಿದೆ.
ಮೈಸೂರಿನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಅ.5 ರ ನಂತರ ಸಂಪುಟ ವಿಸ್ತರಣೆಗೆ ಪ್ರಕ್ರಿಯೆ
ಆರಂಭವಾಗಲಿದೆ ಎಂದು ಹೇಳಿದ್ದ ಬೆನ್ನಲ್ಲೇ ಸೋಮವಾರ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿಯವರು ಸಂಪುಟ ವಿಸ್ತರಣೆಯ ಸುಳಿವು ನೀಡಿದ್ದಾರೆ.
ಅ. 10 ಅಥವಾ 12ರಂದು ಸಂಪುಟ ವಿಸ್ತರಣೆಯಾಗಲಿದೆ. ಸಂಪುಟ ವಿಸ್ತರಣೆಗೆ ಬೇಕಾದ ಸಿದ್ಧತೆ ಮಾಡಿಕೊಂಡಿದ್ದೇವೆ,
ಮಿತ್ರಪಕ್ಷವಾದ ಕಾಂಗ್ರೆಸ್ ನಾಯಕರೊಂದಿಗೂ ಮಾತಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟದಲ್ಲಿ ಕಾಂಗ್ರೆಸ್‌ನ 6 ಹಾಗೂ ಜೆಡಿಎಸ್‌ನ 1 ಸ್ಥಾನ ಸಹಿತ ಏಳು ಸ್ಥಾನಗಳನ್ನು ಭರ್ತಿ ಮಾಡಲಿದ್ದೇವೆ. ಸಮನ್ವಯ ಸಮಿತಿಯ ನಿರ್ಧಾರದಂತೆ ಸೆಪ್ಟೆಂಬರ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸಕ್ಕೆ ತೆರಳಿದ್ದರಿಂದ ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದರು.
ಹೋರಾಟಗಾರರ ಪ್ರಕರಣ ವಾಪಸ್?
ಮಹದಾಯಿ ನದಿ ನೀರಿಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಹೋರಾಟದಲ್ಲಿ ಪಾಲ್ಗೊಂಡ ರೈತರ ವಿರುದ್ಧ ದಾಖಲಾಗಿದ್ದ ಬಾಕಿ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಮಹದಾಯಿ ನದಿ ನೀರಿಗಾಗಿ ಧಾರವಾಡ ಹಾಗೂ ಗದಗ ಜಿಲ್ಲೆಗಳ ರೈತರು ನಡೆಸಿದ ಹೋರಾಟದ ಸಂದಂರ್ಭದಲ್ಲಿ ರೈತರ ವಿರುದ್ಧ 66 ಪ್ರಕರಣಗಳನ್ನು ದಾಖಲಿಸಲಾಗಿತ್ತು ಹಿಂದಿನ ಸಿದ್ದರಾಮಯ್ಯ ಸರ್ಕಾರ 60 ರೈತರ ವಿರುದ್ಧ ಪ್ರಕರಣಗಳನ್ನು ವಾಪಸ್ ತೆಗೆದುಕೊಂಡಿದ್ದು, ಆರು ರೈತರ ವಿರುದ್ಧದ ಪ್ರಕರಣಗಳಲ್ಲಿ ಮೂವರ ವಿರುದಟಛಿ ಕೇಂದ್ರ ಸರ್ಕಾರದ ಕಚೇರಿಗಳ ಹಾನಿ, ಸಂಸದರ ಮನೆ ಮೇಲೆ ದಾಳಿ ಪ್ರಕರಣ ದಾಖಲಾಗಿವೆ. ಹೀಗಾಗಿ ಆರು ಪ್ರಕರಣ ಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಮೂರು ಪ್ರಕರಣಗಳನ್ನು ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ನ. 1ರಂದು ಸರ್ಕಾರ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.