ಆಕಾಂಕ್ಷಿಗಳ ಪರ ನಾಯಕರ ಲಾಬಿ
Team Udayavani, Dec 2, 2018, 6:00 AM IST
ಬೆಂಗಳೂರು: ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಗೆ ರಾಜ್ಯ ಕಾಂಗ್ರೆಸ್ ನಾಯಕರು ಕಸರತ್ತು ನಡೆಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರ ಒಪ್ಪಿಗೆಗೆ ಕಾಯಲಾಗುತ್ತಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಡಿಸೆಂಬರ್ 5 ರವರೆಗೂ ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ತೊಡಗಿರುವುದರಿಂದ ಆ ನಂತರ ಭೇಟಿಗೆ ಅವಕಾಶ ನೀಡುವಂತೆ ರಾಜ್ಯ ನಾಯಕರು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ರಾಹುಲ್ ಗಾಂಧಿ ಪ್ರಚಾರ ಮುಕ್ತಾಯವಾದ ನಂತರ ವಿದೇಶ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯ ನಾಯಕರ ಭೇಟಿಗೆ ಅವಕಾಶ ದೊರೆಯುತ್ತಾ ಎಂಬುದು ಕಾದು ನೋಡಬೇಕಾಗಿದೆ. ರಾಹುಲ್ ಒಪ್ಪಿಗೆ ಸಿಕ್ಕರೆ ಮಾತ್ರ ಅಧಿವೇಶನಕ್ಕೂ ಮೊದಲು ವಿಸ್ತರಣೆಯಾಗಲಿದೆ.
ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆಯಾಗಬಹುದು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದರಿಂದ ಸಚಿವಾಕಾಂಕ್ಷಿಗಳು ಲಾಬಿ ಆರಂಭಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಮಾಜಿ ಸಚಿವ ಎಂ.ಬಿ. ಪಾಟೀಲ್, ಬಿ.ಸಿ.ಪಾಟೀಲ್ ಹಾಗೂ ಸಿ.ಎಸ್.ಶಿವಳ್ಳಿ ಪರವಾಗಿ ನಿಂತಿದ್ದಾರೆ. ಬಿ.ಕೆ. ಸಂಗಮೇಶ್ ಪರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್, ಎಂಟಿಬಿ ನಾಗರಾಜ್ ಪರವಾಗಿ ಸಂಸದರಾದ ವೀರಪ್ಪ ಮೊಯಿಲಿ ಹಾಗೂ ಕೆ.ಎಚ್. ಮುನಿಯಪ್ಪ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಹೀಂ ಖಾನ್ ಪರವಾಗಿ ಹೈ ಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಎಡಗೈ ಸಮುದಾಯದ ಆರ್.ಬಿ. ತಿಮ್ಮಾಪುರ್, ಧರ್ಮಸೇನಾ ಅಥವಾ ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಅವರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡುವಂತೆ ಎಚ್.ಆಂಜನೇಯ, ಎಲ್. ಹನುಮಂತಯ್ಯ ಶನಿವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಶನಿವಾರ ಸ್ವತಃ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಿಎಂ ಭೇಟಿ ಮಾಡಿದ ಬಿ.ಸಿ.ಪಾಟೀಲ್
ಈಮಧ್ಯೆ, ಸಚಿವಾಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 10 ರೊಳಗೆ ಸಂಪುಟ ವಿಸ್ತರಣೆ ಆಗಬೇಕು ಎನ್ನುವುದು ನಮ್ಮೆಲ್ಲ ಶಾಸಕರ ಒತ್ತಾಯ. ಪಕ್ಷದ ನಾಯಕರು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ನನಗೂ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.