ಆತಂಕ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ


Team Udayavani, May 5, 2017, 11:36 AM IST

siddu-sadananda-param.jpg

ಮಹದೇವಪುರ: ಅಪರಾಧಗಳು ನಡೆದ ಮೇಲೆ ನ್ಯಾಯ ಒದಗಿಸುವ ಬದಲು ಅಪರಾಧಗಳು ನಡೆಯದಂತೆ ಕಡಿಧಿವಾಣ ಹಾಕುವಲ್ಲಿ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕ್ಷೇತ್ರದ ವೈಟ್‌ಫೀಲ್ಡ್‌ನಲ್ಲಿ ಪ್ರಸ್ಟೀಜ್‌ ಸಂಸ್ಥೆ ವತಿಯಿಂದ 2.75 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ನೂತನ ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆ ಹಾಗೂ ಉಪ ಪೊಲೀಸ್‌ ಆಯುಕ್ತರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳೆಯುತ್ತಿರುವ ನಗರಗಳಲ್ಲಿ ಅಪರಾಧಗಳು ನಡೆಯುವುದು ಸಹಜ. ಸಮಾಜದಲ್ಲಿರುವ ಕೆಡುಕರು ಮತ್ತು ಸಜ್ಜನರ ಅರಿವನ್ನಿಟ್ಟುಕೊಂಡು ಅಪರಾಧ ನಡೆಯುವ ಮುನ್ನವೇ ಅದನ್ನು ನಿಯಂತ್ರಿಸಿ ಆತಂಕ ಮುಕ್ತ ಸಮಾಜವನ್ನಾಗಿಸಬೇಕೆಂದು ಕರೆ ನೀಡಿದರು.

ನಾಲ್ಕು ವರ್ಷಗಳಲ್ಲಿ ಪೊಲೀಸ್‌ ಇಲಾಖೆಗೆ ಬಹಳಷ್ಟು ನೆರವನ್ನು ನೀಡಿದ್ದೇವೆ. ಪೊಲೀಸ್‌ ಠಾಣೆಗಳಲ್ಲಿ ಗುಣಾತ್ಮಕ ಬದಲಾವಣೆಯಾಗಬೇಕು. ಪೊಲೀಸರು ಪ್ರಾಮಾಣಿಕವಾಗಿ ತಮ್ಮ ಪಾಲಿನ ಕರ್ತವ್ಯ ನಿರ್ವಹಿಸಿದರೆ ಹೆಚ್ಚು ಅಪರಾಧ ಕೃತ್ಯಗಳು ನಿಯಂತ್ರಣಗೊಳ್ಳಲಿವೆ ಎಂದರು.

ಸುಮಾರು 1 ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರಿನಲ್ಲಿ 65ಲಕ್ಷಕ್ಕೂ ಹೆಚ್ಚು ವಾಹನಗಳಿವೆ. ಇಷ್ಟು ದೊಡ್ಡಪ್ರಮಾಣದ ನಗರವು ಸ್ವಾಭಾವಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತವೆ. ಜನಸಂಖ್ಯೆ ಅನುಗುಣವಾಗಿ ಅಪರಾಧಗಳು ಹೆಚ್ಚುತ್ತಿವೆ. ಪೊಲೀಸ್‌ ಠಾಣೆಗಳು ತಂತ್ರಜಾnನ ಆಧಾರಿತವಾಗಿರಧಿಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ಹೊರವಲಯದಲ್ಲಿ ಭೂ ವ್ಯವಹಾರಗಳು ಹೆಚ್ಚುತ್ತಿವೆ. ಪೊಲೀಸರ ಸಹಕಾರವಿಲ್ಲದೆ ಇವೆಲ್ಲ ಸಾಧ್ಯವಿಲ್ಲ. ಪೊಲೀಸರು ಪ್ರಾಮಾಣಿಕವಾಗಿ ಕಾನೂನು ಪ್ರಕಾರ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ರಾಜ್ಯದಲ್ಲಿ 1,500 ಪೊಲೀಸ್‌ ಠಾಣೆಗಳಿವೆ. ತಂತ್ರಧಿಜಾnನವನ್ನು ಜನರ ಉಪಯೋಗಕ್ಕೆ ಬಳಸಿಕೊಳ್ಳಬೇಕು. ಆಧುನಿಕತೆಯನ್ನು ಪೊಲೀಸ್‌ ವ್ಯವಸ್ಥೆಯಲ್ಲಿ ಜಾರಿಗೆ ತರಬೇಕು. ಕ್ರೆ„ಮ್‌  ಕ್ರಿಮಿನಲ್‌ ಟ್ರಾಕಿಂಗ್‌ ಸಿಸ್ಟಮ್‌ (ಸಿಸಿಟಿಎಸ್‌)ಅನ್ನು ಎಲ್ಲ ಠಾಣೆಗಳಲ್ಲಿ ಅವಳಡಿಸಲಾಧಿಗುವುದು ಎಂದರು.

ಬೆಂಗಳೂರಿಗೆ ವಿಶ್ವದ ಅತ್ಯಂತ ಕ್ರಿಯಾಶೀಲ ನಗರ ಎಂಬ ಹೆಗ್ಗಳಿಕೆ ಸಿಕ್ಕಿದೆ. ಅದೇ ರೀತಿ ಜನಸಾಮಾನ್ಯರ ಪಾಲಿಗೆ ಇದು ಅತ್ಯಂತ ಸುರಕ್ಷಿತ ನಗರವಾಗಬೇಕು. ಸಂಚಾರದಟ್ಟಣೆ ಹೆಚ್ಚಿದೆ. ದಿಲ್ಲಿ ಹೊರತುಪಡಿಸಿದರೆ ಅತೀ ಹೆಚ್ಚು ವಾಹನಗಳನ್ನು ಹೊಂದಿರುವ ನಗರ ಬೆಂಗಳೂರು. ರಾಜ್ಯ ಸರ್ಕಾರವು ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ 7 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಿದೆ ಎಂದರು.

ಕಳೆದ ಮೂರು ವರ್ಷಗಳಲ್ಲಿ ಪೊಲೀಸರಿಗೆ 11 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಪೊಲೀಸ್‌ ಸಹಾಯವಾಣಿ 100 ಅನ್ನು ಅಭಿವೃದ್ಧಿಪಡಿಸಲಾಧಿಗುತ್ತಿದ್ದು, 15 ಸೆಕೆಂಡುಗಳಲ್ಲಿ ಕರೆ ಮಾಡುವವರಿಗೆ ಸ್ಪಂದನೆ ಸಿಗಲಿದೆ. ಇನ್ನು 15 ದಿನಗಳಲ್ಲಿ ಸುಧಾರಿತ ವ್ಯವಸ್ಥೆಯನ್ನು ಲೋರ್ಕಾಪಣೆಗೊಳಿಸಲಾಗುವುದು ಎಂದರು.

ನಮ್ಮ ಸಮಿಪದ ಪೊಲೀಸ್‌ಠಾಣೆಗಳನ್ನು ಪತ್ತೆ ಹಚ್ಚಲು ನೆರವಾಗುವಂತೆ ನೋ ಮೈ ಪೊಲೀಸ್‌ ಸ್ಟೇಷನ್‌ ಮೊಬೈಲ್‌ ಅಪ್ಲಿಕೇಷನ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋರ್ಕಾಪಣೆಗೊಳಿಸಿದರು. ಈ ಆ್ಯಪ್‌ನಿಂದ ಪೊಲೀಸ್‌ ಠಾಣೆಯ ಸರಹದ್ದು ತಿಳಿಯಬಹುದು, ಅಲ್ಲದೆ ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಹುಡುಕಬಹುದೆಂದು ನಗರ ಪೊಲೀಸ್‌ ಆಯುಕ್ತ ಪ್ರವೀಣ್‌ಸೂದ್‌ ಹೇಳಿದರು.

ಪ್ರಸ್ಟೀಜ್‌ ಸಂಸ್ಥೆಯ ಮುಖ್ಯಸ್ಥ ಇರ್ಪಾನ್‌ ರಝಾಕ್‌, ಸಿಐಡಿ ಡಿವೈಎಸ್ಪಿಎಂ.ಡಿ.ಸಕ್ರಿ, ಚೇತನ್ಯ ಫೌಂಡೇಷನ್‌ನ ಗುರುಪ್ರಸಾದ್‌, ನೆಟ್‌ ಆಪ್‌ನ ಮುರುಳಿನಾಯ್ಡು, ವೈದೇಹಿ ವೈದ್ಯಕೀಯ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲ್ಪಜಾರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ನಗರಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ಶಾಸಕರಾದ ಅರವಿಂದ ಲಿಂಬಾವಳಿ, ಬೈರತಿ ಬಸವರಾಜ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ರೂಪಕ್‌ಕುಮಾರ್‌ ದತ್ತಾ, ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌, ವಿಧಾನಪರಿಷತ್‌ ಸದಸ್ಯರಾದ ಬಿ.ಎಸ್‌.ಸುರೇಶ್‌, ರಿಝಾನ್‌ಅರ್ಶದ್‌, ಎಂ.ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌,  ಪಾಲಿಕೆ ಸದಸ್ಯರಾದ ಉದಯ್‌ಕುಮಾರ್‌, ಹರಿಪ್ರಸಾದ್‌, ಮುನಿಸ್ವಾಮಿ ಇನ್ನಿತರರು ಉಪಸ್ಥಿತರಿದ್ದರು.

ನಿರುದ್ಯೋಗ ಸಮಸ್ಯೆ ಹೆಚ್ಚಳ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಮಹದೇವಪುರ ಕ್ಷೇತ್ರದಿಂದ 1381ಕೋಟಿ ರೂ. ತೆರಿಗೆ ಪಾಲಿಕೆಗೆ ಸಂದಾಯವಾಗಿದೆ. ಆದರೆ ರಾಜಕೀಯ ದುರುದ್ದೇಶದಿಂದ ಅನುದಾನ ಕಡಿಮೆ ಪ್ರಮಾಣದಲ್ಲಿ ನೀಡಲಾಗುತ್ತಿದೆ. 

ಕ್ಷೇತ್ರದ ಮೂಲ ಸೌಲಭ್ಯಗಳ ಕೊರತೆ ತಲೆದೋರುತ್ತಿದ್ದು, ಈ ಭಾಗದಲ್ಲಿನ ಸಂಸ್ಥೆಗಳು ಸ್ಥಳಾಂತರಗೊಳ್ಳುತ್ತಿವೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ತೆರಿಗೆ ಹಣದಲ್ಲಿ ಕನಿಷ್ಠ ಶೇ. 20ರಷ್ಟಾದರೂ ಅನುದಾನ ನೀಡಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.