ಮೆಟ್ರೋ ಮಾರ್ಗಕ್ಕೆ 690 ಮರಗಳು ಬಲಿ?


Team Udayavani, Jun 12, 2017, 12:51 PM IST

metro-tree.jpg

ಮೊದಲ ಹಂತದ ಮೆಟ್ರೋ ಕಾಮಗಾರಿ ಪೂರ್ಣಗೊಂಡಿದ್ದು, ಪೂರ್ಣ ಮಟ್ಟದ ಸಂಚಾರ ಆರಂಭಕ್ಕೆ ಇನ್ನು ಐದು ದಿನಗಳು ಮಾತ್ರ ಬಾಕಿ ಇವೆ. ಈ ನಡುವೆ ನಗರದಲ್ಲಿ “ನಮ್ಮ ಮೆಟ್ರೋ’ ಕಾಮಗಾರಿಗಳ ಪ್ರಗತಿ ಯಾವ ಹಂತದಲ್ಲಿದೆ, ಎರಡನೇ ಹಂತದ ಕಾಮಗಾರಿ ಎಲ್ಲಿ, ಹೇಗೆ ನಡೆಯಲಿದೆ ಎಂಬ ಕುರಿತು ಮಾಹಿತಿ ಒದಗಿಸುವ ವರದಿಗಳ ಸರಣಿ ಇಂದಿನಿಂದ…

ಬೆಂಗಳೂರು: “ನಮ್ಮ ಮೆಟ್ರೋ’ ಮೊದಲ ಹಂತ ಸಂಪೂರ್ಣವಾಗಿ ವಾಣಿಜ್ಯ ಸೇವೆಗೆ ಮುಕ್ತಗೊಳ್ಳುತ್ತಿರುವ ಬೆನ್ನಲ್ಲೇ ಎರಡನೇ ಹಂತದ ಯೋಜನೆ ಚುರುಕುಗೊಂಡಿದ್ದು, ಗೊಟ್ಟಿಗೆರೆ-ನಾಗವಾರ ಕಾರಿಡಾರ್‌ ನಿರ್ಮಾಣಕ್ಕೆ ಅಡ್ಡಿಯಾಗಲಿರುವ 690 ಮರಗಳನ್ನು ತೆರವುಗೊಳಿಸಲು ಉದ್ದೇಶಿಸಲಾಗಿದೆ. 

21.25 ಕಿ.ಮೀ. ಉದ್ದದ ಗೊಟ್ಟಿಗೆರೆ-ನಾಗವಾರ ನಡುವಿನ ಎತ್ತರಿಸಿದ ಮಾರ್ಗದ ನಿರ್ಮಾಣಕ್ಕೆ 438 ಹಾಗೂ ಸುರಂಗ ಮಾರ್ಗದ ಕಾಮಗಾರಿಗೆ 252 ಮರಗಳನ್ನು ಗುರುತಿಸಲಾಗಿದ್ದು, ಒಟ್ಟಾರೆ ಈ ಮಾರ್ಗ ನಿರ್ಮಾಣಕ್ಕಾಗಿ 690 ಮರಗಳು ಬಲಿಯಾಗಲಿವೆ.

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಲ್‌) ಸಿದ್ಧಪಡಿಸಿರುವ 426 ಪುಟಗಳ “ಪರಿಸರ ಪರಿಣಾಮ ನಿರ್ಧರಣಾ ಅಧ್ಯಯನ ವರದಿ’ಯಲ್ಲಿ ಇದನ್ನು ಉಲ್ಲೇಖೀಸಲಾಗಿದೆ. ಹಾಗಾಗಿ, ಯೋಜನೆ ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಈ ಮರಗಳ ಮಾರಣಹೋಮ ನಡೆಯಲಿದೆ.

ಡಿಪೋ-ನಿಲ್ದಾಣಕ್ಕೇ ಹೆಚ್ಚು ಬಲಿ: ಬಹುತೇಕ ನಿಲ್ದಾಣ ಮತ್ತು ಡಿಪೋ ನಿರ್ಮಾಣಕ್ಕಾಗಿಯೇ ಮರಗಳನ್ನು ತೆರವುಗೊಳಿಸಬೇಕಾಗುತ್ತದೆ. ಅದರಲ್ಲೂ ಕೊತ್ತನೂರು ಬಳಿ 33 ಎಕರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಿಪೋಗಾಗಿ ಸುಮಾರು 120 ಮರಗಳನ್ನು ಕಡಿಯಬೇಕಾಗುತ್ತದೆ. ಉಳಿದಂತೆ ಮಾರ್ಗದುದ್ದಕ್ಕೂ ಬರುವ ಮರಗಳನ್ನು ತೆರವುಗೊಳಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಉದ್ದೇಶಿತ ಕಾರಿಡಾರ್‌ನಲ್ಲಿ 7 ಕಿ.ಮೀ. ಎತ್ತರಿಸಿದ ಮತ್ತು 13.8 ಕಿ.ಮೀ. ಸುರಂಗ ಮಾರ್ಗ ಬರುತ್ತದೆ. ಈ ಪೈಕಿ ಎತ್ತರಿಸಿದ ಮಾರ್ಗದ ಮಧ್ಯದಿಂದ ಎರಡೂ ಕಡೆ 19 ಮೀ. ಅಗಲ ಮತ್ತು 140 ಮೀ. ಎತ್ತರದಲ್ಲಿ ಹಾಗೂ ಸುರಂಗ ಮಾರ್ಗದ ಮಧ್ಯದಿಂದ 20 ಮೀ. ಅಗಲ ಮತ್ತು 200 ಮೀ. ಎತ್ತರದಲ್ಲಿ ಬರುವ ಮರಗಳನ್ನು ಗುರುತಿಸಿ, ತೆರವುಗೊಳಿಸಲಾಗುತ್ತಿದೆ ಎಂದೂ ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. 

92 ಸಾವಿರ ಚ.ಮೀ. ಭೂಸ್ವಾಧೀನ: ಗೊಟ್ಟಿಗೆರೆ-ನಾಗವಾರ ನಡುವೆ ಒಟ್ಟಾರೆ 96.02 ಸಾವಿರ ಚದರ ಮೀಟರ್‌ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ. ಇದರಲ್ಲಿ ಪ್ರಸ್ತುತ ಶೇ.34.45ರಷ್ಟು ಜಾಗದಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ, ಶೇ.9.05 ವಸತಿ, ಶೇ.1.14ರಷ್ಟು ಕೈಗಾರಿಕೆಗೆ ಸಂಬಂಧಿಸಿದ ಜಾಗ ಇದೆ. ಉದ್ದೇಶಿತ ಮಾರ್ಗದಲ್ಲಿ ಬರುವ 13 ಬಸ್‌ ನಿಲ್ದಾಣಗಳು, ಎರಡು ಮ್ಯಾನ್‌ಹೋಲ್‌ಗ‌ಳು, ನಾಲ್ಕು ವಿದ್ಯುತ್‌ ಮಾರ್ಗಗಳು, 87 ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸಬೇಕಾಗುತ್ತದೆ. ಎಷ್ಟು ಸ್ಥಿರಾಸ್ತಿಗಳು ಬರುತ್ತವೆ ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.

ಶೇ. 59 ದ್ವಿಚಕ್ರ ವಾಹನಗಳೇ!: ಈ ಮಾರ್ಗದಲ್ಲಿ ಬರುವ ಬನ್ನೇರುಘಟ್ಟ ರಸ್ತೆ, ಹೊಸೂರು ರಸ್ತೆಯ ಬಾಲ್ಡ್‌ವಿನ್‌ ಬಾಯ್ಸ ಸ್ಕೂಲ್‌, ಟ್ಯಾನರಿ ರಸ್ತೆಯ ಡಿ.ಜೆ.ಹಳ್ಳಿ ಬಸ್‌ ನಿಲ್ದಾಣದಲ್ಲಿ “ಪೀಕ್‌ ಅವರ್‌’ನಲ್ಲಿ ವಾಹನದಟ್ಟಣೆಯನ್ನೂ ಅಧ್ಯಯನ ಮಾಡಲಾಗಿದೆ. ಅದರಂತೆ, ದ್ವಿಚಕ್ರ ವಾಹನಗಳ ಪ್ರಮಾಣ ಶೇ.38ರಿಂದ ಶೇ.59ರಷ್ಟಿದೆ. ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು ಅತಿ ಹೆಚ್ಚು ರಸ್ತೆಗಿಳಿದಿರುತ್ತವೆ ಎಂದೂ ಗುರುತಿಸಲಾಗಿದೆ.

ಇನ್ನು ಬನ್ನೇರುಘಟ್ಟದ ಐಐಎಂಬಿ, ಜಯದೇವ ಆಸ್ಪತ್ರೆ, ರಿಚ್‌ಮಂಡ್‌ ವೃತ್ತ, ನಾಗವಾರ ಜಂಕ್ಷನ್‌ಗಳಲ್ಲಿ ವಾಯು ಮಾಲಿನ್ಯ ಅಧ್ಯಯನ ಮಾಡಲಾಗಿದ್ದು, ಧೂಳಿನ ಕಣಗಳು (ಆರ್‌ಎಸ್‌ಪಿಎಂ) ಕನಿಷ್ಠ 255.23 ಘನ ಮೀಟರ್‌ನಿಂದ ಗರಿಷ್ಠ 305.47 ಘನ ಮೀಟರ್‌ ಇದೆ. ಆದರೆ, ರಾಷ್ಟ್ರೀಯ ಸರಾಸರಿ ಪ್ರಮಾಣ 100 ಘನ ಮೀಟರ್‌ ಇದೆ. ಅದೇ ರೀತಿ, ಈ ಮಾರ್ಗದಲ್ಲಿ ಶಬ್ದ ಮಾಲಿನ್ಯ ಹಗಲು ಕನಿಷ್ಠ 74.5 ಡೆಸಿಬಲ್‌ನಿಂದ 78.1 ಡೆಸಿಬಲ್‌ ಹಾಗೂ ರಾತ್ರಿ ವೇಳೆ ಕನಿಷ್ಠ 68.3ರಿಂದ ಗರಿಷ್ಠ 72.1 ಡೆಸಿಬಲ್‌ ಇದೆ. 

ಮರ ಕಡಿದರೆ ಖುಷಿ ಆಗಲ್ಲ: ಜಾರ್ಜ್‌: “ಮರಗಳನ್ನು ಕಡಿಯುವುದರಿಂದ ನಮಗೇನೂ ಖುಷಿ ಆಗುವುದಿಲ್ಲ. ಆದರೆ, ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಮರಗಳನ್ನು ತೆರವುಗೊಳಿಸುವುದು ಅನಿವಾರ್ಯವಾಗಿದೆ,’ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. “ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಮರಗಳನ್ನು ಕಡಿದ ಸಂದರ್ಭದಲ್ಲಿ ಅದಕ್ಕೆ ಪ್ರತಿಯಾಗಿ ಬೇರೆಡೆ ಸಸಿಗಳನ್ನು ನೆಡಲಾಗುತ್ತದೆ. ಸಾಧ್ಯವಾದಷ್ಟು ಮರಗಳನ್ನು ಕಡಿಯುವುದನ್ನು ತಪ್ಪಿಸಲು ಯತ್ನಿಸಲಾಗುತ್ತದೆ. ಸ್ಥಳಾಂತರಿಸಲಿಕ್ಕೂ ಪ್ರಯತ್ನ ಮಾಡಲಾಗುತ್ತದೆ. ಆದರೆ, ಕೆಲವೆಡೆ ಅನಿವಾರ್ಯವಾದಾಗ ಕಡಿಯಕೇಬೇಕು,’ ಎಂದಿದ್ದಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.