ಹೋಟೆಲ್ ಗ್ರಾಹಕರಿಗೆ ಸಿಗುತ್ತಾ ಕರ ಲಾಭ?
Team Udayavani, Nov 15, 2017, 11:33 AM IST
ಬೆಂಗಳೂರು: ವಾರ್ಷಿಕ 20 ಲಕ್ಷ ರೂ.ಗಿಂತ ಕಡಿಮೆ ವಹಿವಾಟು ನಡೆಸುವ ಹೋಟೆಲ್ ಹೊರತುಪಡಿಸಿ ಉಳಿದ ಎಲ್ಲ ಹೋಟೆಲ್, ರೆಸ್ಟೋರೆಂಟ್ಗಳಿಗೆ ಜಿಎಸ್ಟಿಯಡಿ ಶೇ.5ರಷ್ಟಕ್ಕೆ ತೆರಿಗೆ ಇಳಿಕೆ ಮಾಡಿ ಅಧಿಸೂಚನೆ ಪ್ರಕಟವಾಗಿದ್ದು, ತೆರಿಗೆ ಇಳಿಕೆಯ ಲಾಭ ಎಷ್ಟರ ಮಟ್ಟಿಗೆ ಗ್ರಾಹಕರಿಗೆ ತಲುಪಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕೇಂದ್ರ ಸರ್ಕಾರವು ಜಿಎಸ್ಟಿ ಜಾರಿಯಾದ ಜು.1ರಿಂದ ಹವಾನಿಯಂತ್ರಿತ ಹೋಟೆಲ್ಗಳಿಗೆ ಶೇ.18, ಹವಾನಿಯಂತ್ರಣ ವ್ಯವಸ್ಥೆ ರಹಿತ ಹೋಟೆಲ್ಗಳಿಗೆ ಶೇ.12ರಷ್ಟು ತೆರಿಗೆ ವಿಧಿಸಿತ್ತು. ಹೋಟೆಲ್ ಮಾಲೀಕರು ದರ ಹೆಚ್ಚಳ ಮಾಡಿದ್ದರಿಂದ ಗ್ರಾಹಕರಿಗೆ ತೀವ್ರ ಹೊರೆಯಾಗಿತ್ತು. ಇದು ಹೋಟೆಲ್ಗಳ ವಹಿವಾಟಿನ ಮೇಲೂ ಪರಿಣಾಮ ಬೀರಿತ್ತು. ಆ ಹಿನ್ನೆಲೆ ಹೋಟೆಲ್ ಮಾಲೀಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾರಂಭಿಸಿದ್ದರು.
ಅದರಂತೆ ನ.10ರ ಜಿಎಸ್ಟಿ ಮಂಡಳಿ ಸಭೆಯಲ್ಲಿ ತೆರಿಗೆ ಇಳಿಸಲು ನಿರ್ಧರಿಸಲಾಗಿತ್ತು. ಅದರಂತೆ ಅಧಿಸೂಚನೆ ಪ್ರಕಟವಾಗಿದ್ದು, ಹವಾನಿಯಂತ್ರಿತ ಹಾಗೂ ಹವಾನಿಯಂತ್ರಣ ವ್ಯವಸ್ಥೆಯಿಲ್ಲದ ಹೋಟೆಲ್ಗಳ ತೆರಿಗೆಯನ್ನು ಶೇ.5ಕ್ಕೆ ಇಳಿಕೆ ಮಾಡಲಾಗಿದೆ. ಇಷ್ಟೇ ಪ್ರಮಾಣದಲ್ಲಿ ಹೋಟೆಲ್ಗಳು ತಿಂಡಿ- ತಿನಿಸಿನ ಬೆಲೆ ಇಳಿಕೆ ಮಾಡಬೇಕಿದ್ದು, ಬುಧವಾರದಿಂದಲೇ ಬೆಲೆ ಇಳಿಕೆಯಾಗಲಿದೆಯೇ ಎಂಬ ಕುತೂಹಲ ಮೂಡಿದೆ.
ತೆರಿಗೆ ಪ್ರಮಾಣ ಇಳಿಕೆ ಹಿನ್ನೆಲೆ ತಿಂಡಿ- ತಿನಿಸಿನ ಬೆಲೆ ಇಳಿಕೆ ಮಾಡುವುದಾಗಿ ಹೋಟೆಲ್ ಮಾಲೀಕರ ಸಂಘ ಹೇಳಿದ್ದರೂ ತೆರಿಗೆ ಇಳಿಕೆಯಷ್ಟೇ ಬೆಲೆ ಇಳಿಕೆ ಮಾಡುವ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿವೆ. ತಿಂಡಿ- ತಿನಿಸಿನ ಬೆಲೆ ಇಳಿಕೆ ಮಾಡುವಂತೆ ಹೋಟೆಲ್ ಮಾಲೀಕರಿಗೆ ಸೂಚಿಸಲಾಗಿದೆ ಎಂದು ಸಂಘ ತಿಳಿಸಿದೆ. ಆದರೆ ಹಲವು ದಿನಸಿ ಪದಾರ್ಥಗಳ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲ ತಿಂಡಿ- ತಿನಿಸಿನ ಬೆಲೆ ಇಳಿಕೆಯಾಗದೆ ಆಯ್ದ ಪದಾರ್ಥಗಳ ಬೆಲೆಯಷ್ಟೇ ಇಳಿಕೆಯಾಗಲಿದೆ ಎಂದು ಕೆಲ ಹೋಟೆಲ್ ಮಾಲೀಕರು ತಿಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಹವಾನಿಯಂತ್ರಿತ ಹಾಗೂ ಹವಾನಿಯಂತ್ರಣ ವ್ಯವಸ್ಥೆ ರಹಿತ ಹೋಟೆಲ್ಗಳಿಗೆ ಸಮಾನವಾಗಿ ಶೇ.5ಕ್ಕೆ ತೆರಿಗೆ ಇಳಿಕೆಯಾಗಿದ್ದು, ಅಷ್ಟೂ ಲಾಭ ಗ್ರಾಹಕರಿಗೆ ಸಿಗಬೇಕು. ಅದರಂತೆ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ. ಅಧಿಸೂಚನೆಯಂತೆ ದರ ಪರಿಷ್ಕರಣೆಯಾಗಲಿದೆ ಎಂದು ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ರೆಸ್ಟೋರೆಂಟ್ಸ್ ಸಂಘದ ಅಧ್ಯಕ್ಷ ಎಂ.ರಾಜೇಂದ್ರ ತಿಳಿಸಿದ್ದಾರೆ.
ಆಯ್ದ ಪದಾರ್ಥದ ಬೆಲೆಯಷ್ಟೇ ಇಳಿಕೆ: ಜಿಎಸ್ಟಿಯಡಿ ತೆರಿಗೆ ಇಳಿಕೆಯಾಗಿದ್ದರೂ ಸಾಕಷ್ಟು ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಹಾಗಾಗಿ ಇದನ್ನು ಗಮನದಲ್ಲಿಟ್ಟುಕೊಂಡು ಆಯ್ದ ತಿಂಡಿ ತಿನಿಸಿನ ಬೆಲೆ ಇಳಿಕೆ ಮಾಡಲಾಗುವುದು. ಎಲ್ಲ ಪದಾರ್ಥಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಕಡಿಮೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹೋಟೆಲ್ ಮಾಲೀಕರೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.