ಕಸ ವಿಲೇವಾರಿ ಗುತ್ತಿಗೆ ವ್ಯವಸ್ಥೆಯೇ ರದ್ದು!

Team Udayavani, Sep 28, 2017, 12:25 PM IST

kj-george.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲಕ್ರಮೇಣ ಕಸ ವಿಲೇವಾರಿ ಗುತ್ತಿಗೆ ವ್ಯವಸ್ಥೆಯನ್ನೇ ರದ್ದುಗೊಳಿಸಿ ಪಾಲಿಕೆ ಹಾಗೂ ಸರ್ಕಾರದಿಂದಲೇ ನಿರ್ವಹಿಸುವ ಚಿಂತನೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ಪರಿಣಾಮಕಾರಿ ತ್ಯಾಜ್ಯ ವಿಲೇವಾರಿ ನಿರ್ವಹಣೆಯಲ್ಲಿ ತೊಡಗಿಸಿಕೊಂಡ ಸಂಘ-ಸಂಸ್ಥೆಗಳ ಮುಖ್ಯಸ್ಥರ ಜತೆ ವಿಧಾನಸೌಧದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಆವರು, “ಪ್ರಸ್ತುತ ಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರು ಸೇರಿದಂತೆ ಇನ್ಮುಂದೆ ಭರ್ತಿ ನೇಮಿಸುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿಗೊಳಿಸಿ, ಎಲ್ಲ ಕಸ ಸಾಗಣೆ ವಾಹನಗಳಿಗೆ ಜಿಪಿಎಸ್‌ ಅಳವಡಿಕೆ ಕಡ್ಡಾಯಗೊಳಿಸಲಾಗುವುದು,’ ಎಂದರು.

“ಹಾಲಿ ಗುತ್ತಿಗೆದಾರರ ಬಳಿ ಇರುವ ಕಾಂಪ್ಯಾಕ್ಟರ್‌ ಹಾಗೂ ಆಟೋಗಳನ್ನು ಚಾಲಕನ ಸಹಿತ ಬಾಡಿಗೆ ಆಧಾರದಲ್ಲಿ ಪಾಲಿಕೆಯೇ ಪಡೆಯಲಿದ್ದು, ಹೆಚ್ಚುವರಿಯಾಗಿ ಬೇಕಿರುವ ಕಾಂಪ್ಯಾಕ್ಟರ್‌ ಮತ್ತು ಆಟೋ ಖರೀದಿಸಿ ಚಾಲಕರ ನೇಮಿಸಲಾಗುವುದು. ಹೀಗಾಗಿ, ಕಸ ವಿಲೇವಾರಿಗಾಗಿ ಗುತ್ತಿಗೆ ನೀಡುವ ಪ್ರಮೇಯವೇ ಬರುವುದಿಲ್ಲ. ಆದರೆ, ಇದು ತತಕ್ಷಣಕ್ಕೆ ಆಗುವುದಿಲ್ಲ,’ ಎಂದು ಹೇಳಿದರು.

ಕಾರ್ಮಿಕರೇ ರಾಯಭಾರಿಗಳು: ಪೌರ ಕಾರ್ಮಿಕರು ಬೆಂಗಳೂರಿನ ರಾಯಭಾರಿಗಳು. ಅವರ ಜೀವನ ವ್ಯವಸ್ಥೆ ಸುಧಾರಿಸಬೇಕು. ಆವರಿಗೆ ಉತ್ತಮ ವೇತನ, ಜೀವನ ಭದ್ರತೆ, ಆರೋಗ್ಯ, ಕುಟುಂಬದವರಿಗೆ ಶಿಕ್ಷಣ ವ್ಯವಸ್ಥೆಯಾಗಬೇಕು. ಮುಖ್ಯಮಂತ್ರಿಯವರು ನಗರದಲ್ಲಿ ವ್ಯವಸ್ಥಿತ ಕಸ ವಿಲೇವಾರಿ ಹಾಗೂ ಪೌರ ಕಾರ್ಮಿಕರಿಗೆ ಸವಲತ್ತು ಒದಗಿಸುವ ಬಗ್ಗೆ ಮುಕ್ತವಾಗಿದ್ದಾರೆ. ಹಣಕಾಸಿನ ನೆರವು ಎಷ್ಟು ಬೇಕಾದರೂ ಕೊಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು.

ನಗರದಲ್ಲಿ ಪ್ರತಿ ನಿತ್ಯ ನಾಲ್ಕು ಸಾವಿರ ಟನ್‌ ಕಸ ಉತ್ಪತ್ತಿಯಾಗುತ್ತಿದ್ದು ಯಾವುದೇ ರೀತಿಯಲ್ಲೂ ವಿಲೇವಾರಿಯಾಗಲೇಬೇಕಿದೆ. ಹೊರ ವಲಯದಲ್ಲಿ ನಾವು ಕಸ ಸಂಸ್ಕರಣೆಗೆ ಜಾಗ ಹುಡುಕಿದಾಗ ಯಾರೂ ಇರುವುದಿಲ್ಲ. ಕೆಲವೇ ದಿನಗಳಲ್ಲಿ ಕಂದಾಯ ನಿವೇಶಗಳಲ್ಲಿ ಮನೆ ನಿರ್ಮಿಸಿ ಕಸ ವಿಲೇವಾರಿ ಘಟಕ ಬೇಡ ಎಂದು ಪ್ರತಿಭಟನೆ ಮಾಡುತ್ತಾರೆ.

100 ಕಿ.ಮೀ. ದೂರ ಹೋದರೂ ಇದೇ ಸಮಸ್ಯೆ. ಹೀಗಾದರೆ ನಾವಾದರೂ ಎಲ್ಲಿಗೆ ಕಸ ಸಾಗಿಸಬೇಕು. ಜನರು ಜಾಗೃತರಾಗಿ ಹಸಿ ಮತ್ತು ಒಣ ಕಸ ವಿಂಗಡಿಸಿದರೆ ಅರ್ಧದಷ್ಟು ಸಮಸ್ಯೆ ನಿವಾರಣೆಯಾಗುತ್ತದೆ. ಇದಕ್ಕೆ ಪಾಲಿಕೆ, ಸರ್ಕಾರದ ಜತೆ ಸೇವಾ ಸಂಸ್ಥೆಗಳು ,ನಾಗರಿಕ ಕ್ಷೇಮಾಭಿವೃದ್ಧಿ ಸಂಘಟನೆಗಳು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮೇಯರ್‌ ಪದ್ಮಾವತಿ, ಪಾಲಿಕೆ ಆಯುಕ್ತ ಮಂಜುನಾಥಪ್ರಸಾದ್‌,  ಜಂಟಿ ಆಯುಕ್ತ ಸಫ್ರಾಜ್‌ಖಾನ್‌ (ಘನತ್ಯಾಜ್ಯ ವಿಲೇವಾರಿ)  ಉಪಸ್ಥಿತರಿದ್ದರು. ಪ್ರತಿನಿಧಿಗಳ ಪರವಾಗಿ ರಮಾಕಾಂತ್‌, ಸಂದ್ಯಾ ನಾರಾಯಣನ್‌, ಕಾತ್ಯಾಯಿನಿ ಚಾಮರಾಜ್‌, ಡಾ.ಶಾಂತಿ, ಅಲೆನ್‌ ಜೋಸೆಫ್, ನಳಿನಿ ಶೇಖರ್‌, ಲಕ್ಷ್ಮಿಕಾಂತ್‌,  ಮೀರಾ ಅರುಣ್‌ ಮತ್ತಿರರು ಮಾತನಾಡಿದರು.

ಯಾರ ಮುಲಾಜೂ ಇಲ್ಲ: “ನಾನು ಯಾವುದೇ ಗುತ್ತಿಗೆದಾರ ಅಥವಾ ಅಧಿಕಾರಿಯಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ಹಣ ಪಡೆಯುವುದು ಅಥವಾ ಬೇರೆ ರೀತಿಯ ಕೆಲಸ ಮಾಡುವಂತೆ ಒತ್ತಡ ಹಾಕುವುದ ಮಾಡಿಲ್ಲ. ಮಾಡುವುದೂ ಇಲ್ಲ. ಹೀಗಾಗಿ ಧೈರ್ಯದಿಂದ ಜನರ ಕೆಲಸ ಮಾಡಲು ತಾಕೀತು ಮಾಡುತ್ತೇನೆ. ನನಗೆ ಯಾರ ಮುಲಾಜೂ ಇಲ್ಲ.

ಸೇವಾ ಸಂಸ್ಥೆಗಳು ಆರೋಪ ಅಥವಾ ಸಲಹೆಗೆ ಸೀಮಿತವಾಗದೆ ಸಮಸ್ಯೆ ನಿವಾರಣೆ ಮಾರ್ಗೋಪಾಯಗಳ ಬಗ್ಗೆ ಉಪಯುಕ್ತ ಸಲಹೆ ನೀಡಬೇಕು. ನಾನಂತೂ ಮುಕ್ತವಾಗಿದ್ದೇನೆ. ಯಾವುದೇ ಸಮಯದಲ್ಲೂ ನೀವು ನನ್ನನ್ನು ನೇರವಾಗಿ ಭೇಟಿಯಾಗಬಹುದು ಎಂದು ಸಂವಾದದಲ್ಲಿ ಪಾಲ್ಗೊಂಡ ನಾಗರಿಕ ಕ್ಷೇಮಾಭಿವೃದ್ಧಿ ಸಂಘಟನೆಗಳ ಪ್ರತಿನಿಧಿಗಳಿಗೆ ಜಾರ್ಜ್‌ ಭರವಸೆ ನೀಡಿದರು.

ಪಾಲಿಕೆಯಿಂದಲೇ ಕವರ್‌ ಖರೀದಿ: ಹಾಲಿನ ಕವರ್‌ ಸೇರಿದಂತೆ ಪುನರ್‌ಬಳಕೆಯಾಗುವ ಪ್ಲಾಸ್ಟಿಕ್‌ ಸಂಗ್ರಹಿಸಿಟ್ಟು ಮಾರಾಟ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ, ಬಿಬಿಎಂಪಿ ವತಿಯಿಂದಲೇ ಪ್ಲಾಸ್ಟಿಕ್‌ ಖರೀದಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವುದನ್ನು ತಡೆಯಲು ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಕಸ ಸುರಿದವರಿಗೆ ಭಾರಿ ದಂಡ ವಿಧಿಸಲಾಗುವುದು. ಮನೆ ಮನೆಯಿಂದ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಸಂಗ್ರಹ ಕಡ್ಡಾಯಗೊಳಿಸಿದ್ದರೂ ಜಾರಿಯಾಗುತ್ತಿಲ್ಲ. ಇದರ ಬಗ್ಗೆಯೂ ಹೆಚ್ಚು ಗಮನಹರಿಸಲಾಗುವುದು ಎಂದು ಸಚಿವ ಜಾರ್ಜ್‌ ತಿಳಿಸಿದರು.

ಹಸಿ ಹಾಗೂ ಒಣ ಕಸ ಬೇರ್ಪಡಿಸಿ ನೀಡದ ಹಾಗೂ ರಸ್ತೆ ಬದಿ ಕಸ ಸುರಿಯುವವರಿಗೆ ಸಂಚಾರ ಪೊಲೀಸರ ಮಾದರಿಯಲ್ಲಿ ದಂಡ ವಿಧಿಸಲಾಗುವುದು. ಪ್ಲಾಸ್ಟಿಕ್‌ ನಿಷೇಧ ಹಾಗೂ ಕಟ್ಟಡದ ಅವಶೇಷ ಸೇರಿ ಅನುಪಯುಕ್ತ ವಸ್ತುಗಳನ್ನು ರಾಜಕಾಲುವೆ ಹಾಗೂ ರಸ್ತೆ ಬದಿ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಶೇಷ ಪ್ರಹರಿ ಮತ್ತು ಗಸ್ತು ಪಡೆ ರಚಿಸಲಾಗುವುದು.
-ಕೆ.ಜೆ.ಜಾರ್ಜ್‌, ನಗರ ಅಭಿವೃದ್ಧಿ ಸಚಿವ 

ಟಾಪ್ ನ್ಯೂಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.