ಕೋಟಿ ಜನರಿಗೆ ಕ್ಯಾಂಟೀನ್ ಸವಿ
Team Udayavani, Nov 7, 2017, 1:27 PM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ಗಳು ಆರಂಭವಾಗಿ ಎರಡೂವರೆ ತಿಂಗಳು ಕಳೆದಿದ್ದು, ಒಂದು ಕೋಟಿ ಜನರಿಗೆ ಆಹಾರ ಪೂರೈಕೆ ಮಾಡಿದ ಹೆಗ್ಗಳಿಕೆಗೆ ಇಂದಿರಾ ಕ್ಯಾಂಟೀನ್ ಪಾತ್ರವಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 150 ವಾರ್ಡ್‌ಗಳಲ್ಲಿನ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದ್ದು, ನಗರದ ಎಲ್ಲ ಭಾಗಗಳಲ್ಲಿ ಕ್ಯಾಂಟೀನ್‌ಗಳಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕೇವಲ 83 ದಿನಗಳಲ್ಲಿ ಒಂದು ಕೋಟಿ ಜನರು ಕ್ಯಾಂಟೀನ್‌ಗಳಲ್ಲಿ ತಿಂಡಿ-ಊಟ ಸವಿದಿದ್ದಾರೆ.
ನಗರದಲ್ಲಿನ ಬಡವರಿಗೆ ರಿಯಾಯಿತಿ ದರದಲ್ಲಿ ತಿಂಡಿ-ಊಟ ನೀಡುವ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿತ್ತು. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 16ರಂದು ಜಯನಗರದ ಕನಕನಪಾಳ್ಯದ ಕ್ಯಾಂಟೀನ್ ಉದ್ಘಾಟಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದರು. ಅದರಂತೆ ನವೆಂಬರ್ 6ರ ವೇಳೆಗೆ ಸುಮಾರು 150 ಕ್ಯಾಂಟೀನ್‌ಗಳು ಕಾರ್ಯಾರಂಭ ಮಾಡಿದ್ದು, ಕೋಟಿ ಜನರಿಗೆ ಆಹಾರ ಪೂರೈಕೆ ಮಾಡಿವೆ.
ಮುಖ್ಯಮಂತ್ರಿಗಳು ಎರಡು ಬಾರಿ ಗಡುವು ನೀಡಿದರೂ 198 ವಾರ್ಡ್‌ಗಳಲ್ಲಿ ಕ್ಯಾಂಟೀನ್ ನಿರ್ಮಿಸುವಲ್ಲಿ ಪಾಲಿಕೆಯ ಅಧಿಕಾರಿಗಳು ವಿಫಲವಾಗಿದ್ದು, ಇನ್ನೂ 18 ವಾರ್ಡ್‌ಗಳಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಸ್ಥಳ ನಿಗದಿಗೊಳಿಸಿಲ್ಲ. ಇನ್ನು ಕೆಲವು ಕಡೆಗಳಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡರೂ ಸ್ಥಳೀಯ ಸಚಿವರು ಹಾಗೂ ಶಾಸಕರ ದಿನಾಂಕ ಲಭ್ಯವಾಗದ ಹಿನ್ನೆಲೆಯಲ್ಲಿ ಉದ್ಘಾಟನೆಗೊಂಡಿಲ್ಲ.
ಬಿಬಿಎಂಪಿ ವತಿಯಿಂದ ನಿತ್ಯ ಪ್ರತಿ ಕ್ಯಾಂಟೀನ್‌ನಲ್ಲಿ 1150 ಜನರಿಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ಪೂರೈಕೆ ಮಾಡಲಾಗುತ್ತಿದೆ. ಈ ಮೊದಲು ಪ್ರತಿ ಕ್ಯಾಂಟೀನ್‌ನಲ್ಲಿ 1500 ಜನರಿಗೆ ಆಹಾರ ಪೂರೈಕೆ ಮಾಡುವುದಾಗಿ ತಿಳಿಸಲಾಗಿತ್ತಾದರೂ, ಕೆಲವೊಂದು ಕ್ಯಾಂಟೀನ್‌ಗಳಲ್ಲಿ ಕಡಿಮೆ ಜನರು ತಿಂಡಿ-ಊಟಕ್ಕೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಆಹಾರ ಪೂರೈಕೆ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಈವರೆಗೆ 150 ಕಡೆಗಳಲ್ಲಿನ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಕೆ ಮಾಡಲಾಗುತ್ತಿದ್ದು, 18 ಕಡೆಗಳಲ್ಲಿ ಕ್ಯಾಂಟೀನ್ ನಿರ್ಮಾಕ್ಕಾಗಿ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಬೇಕಾಗಿದೆ. ಉಳಿದಂತೆ 12 ಕಡೆಗಳಲ್ಲಿ ನಿರ್ಮಾಣ ಪೂರ್ಣಗೊಂಡಿರುವ ಕ್ಯಾಂಟೀನ್‌ಗಳು ಉದ್ಘಾಟನೆಗೊಳ್ಳಬೇಕಿದ್ದು, 18 ಕಡೆಗಳಲ್ಲಿ ಈವರೆಗೆ ಜಾಗ ಸಿಕ್ಕಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಗರದ 150 ವಾರ್ಡ್‌ಗಳ ಕ್ಯಾಂಟೀನ್‌ಗಳಲ್ಲಿ ಆಹಾರ ವಿತರಣೆ ಮಾಡುತ್ತಿದ್ದು, ಈವರೆಗೆ ಆಹಾರ ಸೇವಿಸಿದವರ ಸಂಖ್ಯೆ ಒಂದು ಕೋಟಿ ಮೀರಿದೆ. ಇನ್ನು ಹಲವಾರು ವಾರ್ಡ್‌ಗಳಲ್ಲಿ ಕ್ಯಾಂಟೀನ್‌ಗಳು ಉದ್ಘಾಟನೆಗೆ ಸಿದ್ಧಗೊಂಡಿದ್ದು, ಜಾಗ ದೊರೆಯದ 18 ವಾರ್ಡ್‌ಗಳಲ್ಲಿ ಮೊಬೈಲ್ ಕ್ಯಾಂಟೀನ್ ಸೇವೆ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ.
-ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.