ಹಲ್ಲೆ ನಡೆಸಿ ಪರಾರಿಯಾಗಿದ್ದ ದರೋಡೆಕೋರರ ಸೆರೆ
Team Udayavani, Dec 3, 2017, 1:01 PM IST
ಬೆಂಗಳೂರು: ಭಾರತಿನಗರ ಬಸ್ ನಿಲ್ದಾಣದ ಬಳಿ ಟೆಕ್ಕಿಯೊಬ್ಬರಿಗೆ ಥಳಿಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಐದಾರು ಮಂದಿ ಆರೋಪಿಗಳ ಪೈಕಿ ಮೂವರನ್ನು ಘಟನೆ ನಡೆದ 12 ತಾಸಿನಲ್ಲೇ ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಯಲಹಂಕದ ಪಾಲನಹಳ್ಳಿಯ ಚಂದ್ರಶೇಖರ್ (26), ಶ್ರೀನಿವಾಸಲು (26) ಹಾಗೂ ಹುಣಸಮಾರನಹಳ್ಳಿ ನಿವಾಸಿ ಏಡುಕೊಂಡಲು (21) ಬಂಧಿತರು. ಇತರೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
ಮಂಗಳೂರು ಮೂಲದ ಟೆಕ್ಕಿ ಅಜಯ್‌ಕುಮಾರ್, ಲಾಲ್‌ಬಾಗ್ ಬಳಿಯ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹುಣಸಮಾರನಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಅಜಿತ್ ಕುಮಾರ್ ನ.30 ರಂದು ರಾತ್ರಿ ಕೆಲಸ ಮುಗಿಸಿ ಕಂಪನಿಯ ಕ್ಯಾಬ್‌ನಲ್ಲಿ ಭಾರತಿನಗರ ಬಳಿ ರಾತ್ರಿ 12 ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರು ಮಂದಿ ದುಷ್ಕರ್ಮಿಗಳು, ಅಜಿತ್ ಕುಮಾರ್‌ನನ್ನು ಹಿಗ್ಗಾಮುಗ್ಗಾ ಥಳಿಸಿ ಎಟಿಎಂ ಕಾರ್ಡ್, ಮೊಬೈಲ್ ಕಸಿದು ಪರಾರಿಯಾಗಿದ್ದರು.
ಈ ಸಂಬಂಧ ಅಜಿತ್ ಚಿಕ್ಕಜಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದಾಗ ಆರೋಪಿಯೊಬ್ಬನ ಮುಖ ಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.