ಗಾಂಜಾ ಮಾರುತ್ತಿದ್ದ ವಿದ್ಯಾರ್ಥಿಗಳ ಸೆರೆ
Team Udayavani, Jan 23, 2019, 6:27 AM IST
ಬೆಂಗಳೂರು: ನಗರದ ನಂದಿನಿ ಲೇಔಟ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಪದವಿ ವಿದ್ಯಾರ್ಥಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡಿನ ಥೇನಿ ಜಿಲ್ಲೆಯ ದಿವಾಕರ್ (21), ಶ್ರೀರಾಮ್ (19)ಬಂಧಿತ ಆರೋಪಿಗಳು. ಇವರಿಬ್ಬರ ಜತೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಅಜಿತ್ ಎಂಬಾತ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ.
ಆರೋಪಿಗಳು ತಮಿಳುನಾಡಿನ ಥೇಣಿ ಜಿಲ್ಲೆಯ ಕಂಬಮ್ ಪಟ್ಟಣದಿಂದ ಗಾಂಜಾ ಖರೀದಿಸಿ ನಂದಿನಿ ಲೇಔಟ್‌ನ ಎಫ್ಟಿಐ ವೃತ್ತದ ಬಳಿ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತೆ ಮೇರೆಗೆ ಕಾರ್ಯಾಚರಣೆ ನಡೆಸಿದ ಇನ್ಸ್‌ಪೆಕ್ಟರ್ ಲೋಹಿತ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸವಲ್ಲಿ ಯಶಸ್ವಿಯಾಗಿದೆ.
ಆರೋಪಿ ದಿವಾಕರ್ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆ, ಶ್ರೀರಾಮ್ ಡಿಪ್ಲೊಮಾ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಹಣದಾಸೆಗಾಗಿ ಇವರಿಬ್ಬರು ತಮಿಳುನಾಡಿನ ಅಜಿತ್ ಎಂಬಾತನ ಜತೆ ಕಂಬಮ್ ನಿಂದ ಗಾಂಜಾವನ್ನು ತರಿಸಿ, ನಗರದಲ್ಲಿ ಮಾರಾಟ ಮಾಡುತ್ತಿರುವುದನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.