ಕದಿಯುವಾಗ ಕೊಲೆ ಮಾಡಿದ್ದವನ ಸೆರೆ
Team Udayavani, Jun 25, 2017, 11:14 AM IST
ಬೆಂಗಳೂರು: ಇತ್ತೀಚೆಗೆ ಯಲಹಂಕದ ಉಪನಗರದಲ್ಲಿ ಸರಣಿ ಕಳವು ಮಾಡಲು ಯತ್ನಿಸಿ ಮನೆ ಮಾಲೀಕರೊಬ್ಬರನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಹಾಸನದಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಹಾಸನದ ದೊಡ್ಡಗೇಣಿಗೆರೆ ತಾಲೂಕಿನ ನವೀನ್ ಕುಮಾರ್ (29) ಬಂಧಿತ. ಐಷಾರಾಮಿ ಜೀವನ, ಕುಟುಂಬ ನಿರ್ವಹಣೆಗಾಗಿ ಆರೋಪಿ ಆಗಾಗ್ಗ ನಗರಕ್ಕೆ ಬಂದು ದರೋಡೆ ಮಾಡುತ್ತಿದ್ದ. ಆರೋಪಿ ವಿವಾಹವಾಗಿದ್ದು, ಐದು ಮತ್ತು 6ನೇ ತರಗತಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಮಕ್ಕಳಿದ್ದಾರೆ.
ಯಾವುದೇ ಕೆಲಸಕ್ಕೆ ಹೋಗದ ಈತ, ಕಳವು ಮಾಡುವುದನ್ನೆ ವೃತ್ತಿಯನ್ನಾಗಿಸಿಕೊಂಡಿದ್ದ. ಪಿಯುಸಿ ವ್ಯಾಸಂಗ ವೇಳೆಯೇ ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ. ಬಸ್ ಮೂಲಕ ನಗರಕ್ಕೆ ಬರುತ್ತಿದ್ದ ಆರೋಪಿ ಸಂಜೆ ವೇಳೆ ಪಾರ್ಕ್‌ನಲ್ಲಿ ಮಲಗುತ್ತಿದ್ದ. ರಾತ್ರಿಯಾಗುತ್ತಿದ್ದಂತೆ ಮನೆಗಳ ಹಿಂಬದಿ ಬಾಗಿಲು ಮೂಲಕ ಪ್ರವೇಶಿಸಿ, ಕೈಗೆ ಸಿಕ್ಕ ವಸ್ತುಗಳನ್ನು ದೋಚಿ ಪುನಃ ಬಸ್‌ನಲ್ಲೇ ಹಾಸನಕ್ಕೆ ಹೋಗುತ್ತಿದ್ದ.
ಹಣ ಖಾಲಿಯಾಗುತ್ತಿದ್ದಂತೆ ಬಳಿಕ ನಗರಕ್ಕೆ ಬಂದು ದರೋಡೆ ಮಾಡುತ್ತಿದ್ದ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇಷ್ಟೇ ಅಲ್ಲದೇ, ಈ ಹಿಂದೆ 20ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಪ್ರಕರಣವೊಂದರಲ್ಲಿ ಮೈಸೂರಿನ ಜೈಲು ಸೇರಿದ್ದ. ಕಳೆದ ನವೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಆರೋಪಿ, ಮತ್ತೆ ದರೋಡೆ ಕೃತ್ಯಗಳಲ್ಲಿ ತೊಡಗುತ್ತಿದ್ದ.
ಸಿಕ್ಕಿದ್ದು ಹೀಗೆ?
ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಆರೋಪಿಗಳ ಬೆರಳಚ್ಚು ಹಾಗೂ ಕೃತ್ಯ ನಡೆದ ಸ್ಥಳದಲ್ಲಿನ ಆರೋಪಿಯ ಬೆರಳಚ್ಚನ್ನು ಪರಿಶೀಲನೆ ನಡೆಸಲಾಯಿತು. ಈ ವೇಳೆ ಕೃತ್ಯ ಎಸಗಿದ ಸ್ಥಳದಲ್ಲಿನ ಬೆರಳಚ್ಚು, ಈ ಹಿಂದೆ ದರೋಡೆಗೆ ಯತ್ನಿಸಿದ ಬೆರಳಚ್ಚು ಹೊಂದಾಣಿಕೆಯಾಗುತ್ತಿತ್ತು. ಅಲ್ಲದೆ, 2008 ಮತ್ತು 2011ರಲ್ಲಿ ಯಲಹಂಕ ಉಪನಗರ ಪೊಲೀಸರಿಗೆ ಕಳವು ಪ್ರಕರಣವೊಂದರಲ್ಲಿ ಸಿಕ್ಕಿ ಬಿದಿದ್ದ. ಈ ಆಧಾರದ ಮೇಲೆ ಆರೋಪಿಯನ್ನು ಹಾಸನದಲ್ಲಿ ಬಂಧಿಸಿ ನಗರಕ್ಕೆ ಕರೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.