ಬಂಧಿತ ದರೋಡೆಕೋರನ ಮೂವರು ಸಹಚರರ ಸೆರೆ
Team Udayavani, Dec 4, 2018, 11:58 AM IST
ಬೆಂಗಳೂರು: ಇತ್ತೀಚೆಗಷ್ಟೇ ಪೊಲೀಸರ ಗುಂಡೇಟು ತಿಂದು ಬಂಧನಕ್ಕೊಳಗಾಗಿದ್ದ ದರೋಡೆಕೋರ ಅಶ್ರಫ್ಖಾನ್‌ನ ಮೂವರು ಸಹಚರರನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಇಫ್ತಿಕಾರ್ ಆಲಿ (20), ಸೈಯದ್ ಸುಹೇಲ್ ಅಲಿಯಾಸ್ ಜೊಯಾನ್(19), ಶೇಖ್ ಅಸ್ಗರ್ ಅಲಿಯಾಸ್ ಅಸ್ಗರ್(21) ಬಂಧಿತರು.
ಆರೋಪಿಗಳಿಂದ 2 ದ್ವಿಚಕ್ರ ವಾಹನ, 5 ವಿವಿಧ ಕಂಪನಿಯ ಮೊಬೈಲ್‌ಗಳು, ಒಂದು ಬೆಳ್ಳಿ ಸರ, ಎರಡು ಮಾರಕಾಸ್ತ್ರಗಳು ಹಾಗೂ ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಬಂಧಿತ ಮೂವರು ಆರೋಪಿಗಳು ಅಶ್ರಫ್ ಖಾನ್ ಜತೆ ಸೇರಿಕೊಂಡು ಚಿಕ್ಕಜಾಲ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುವ ಸಾರ್ವಜನಿಕರು
ಮತ್ತು ಕ್ಯಾಬ್ ಚಾಲಕರು, ಹಾಗೂ ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸುತ್ತಿದ್ದರು. ಬಳಿಕ ಅವರ ಬಳಿಯಿದ್ದ ಮೊಬೈಲ್, ನಗದು, ಎಟಿಎಂ ಕಾರ್ಡ್‌ಗಳನ್ನು ದರೋಡೆ ಮಾಡಿ ಪರಾರಿಯಾಗುತ್ತಿದ್ದರು. ಈ ಸಂಬಂಧ ಎರಡು ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಆರು ಪ್ರಕರಣಗಳು ದಾಖಲಾಗಿದ್ದವು.
ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಚಿಕ್ಕಜಾಲ ಪೊಲೀಸರು ನ.29ರಂದು ಭಾರತಿನಗರದ ಬಳಿ ಅಶ್ರಫ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದರು. ಈತನ ಹೇಳಿಕೆಯನ್ನಾಧರಿಸಿ ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು, ವಿಮಾನ ನಿಲ್ದಾಣಕ್ಕೆ ಹೋಗಲು ಹುಣಸೆಮಾರನಹಳ್ಳಿ ಮೇಲು ಸೇತುವೆ ಬಳಿ ಕ್ಯಾಬ್‌ಗಾಗಿ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ 10 ಸಾವಿರ ನಗದು, 1 ಮೊಬೈಲ್ ದರೋಡೆ ಮಾಡಿದ್ದರು.
ಮತ್ತೂಂದು ಪ್ರಕರಣದಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿ 10 ಸಾವಿರ ರೂ. ನಗದು, ಒಂದು ಮೊಬೈಲ್ ಕಸಿದುಕೊಂಡಿದ್ದು, ಕ್ಯಾಬ್ ಚಾಲಕನ ಸಹಾಯಕ್ಕೆ ಬಂದ ದ್ವಿಚಕ್ರ ವಾಹನ ಸವಾರನ ಮೇಲೂ ಹಲ್ಲೆ ನಡೆಸಿದ್ದರು. ಇನ್ನೊಂದು ಪ್ರಕರಣದಲ್ಲಿ ಕ್ಯಾಬ್ ಚಾಲಕನಿಗೆ ಹಲ್ಲೆ ನಡೆಸಿ ಬೆಳ್ಳಿಯ ಬ್ರಾಸ್‌ಲೈಟ್ ಮತ್ತು 2 ಸಾವಿರ ರೂ. ನಗದು ಕಳವು ಮಾಡಿದ್ದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣಾ ವ್ಯಾಪ್ತಿಯಲ್ಲಿ, ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುವಾಗ ಅಡ್ಡಗಟ್ಟಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದ್ವಿಚಕ್ರ ವಾಹನ ಮತ್ತು ನಗದು ದರೋಡೆ ಮಾಡಿದ್ದರು.
ಮತ್ತೂಂದು ಪ್ರಕರಣದಲ್ಲಿ ಯಲಹಂಕ ರೈತರ ಸಂತೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ ಬಂಧಿತರು 12 ಸಾವಿರ ರೂ.ನಗದು, 3 ಎಟಿಎಂ ಕಾರ್ಡ್‌ಗಳನ್ನು ದರೋಡೆ ಮಾಡಿದ್ದರು. ಇನ್ನೊಂದು ಪ್ರಕರಣದಲ್ಲಿ ಟಾಟಾ ಏಸ್ ಚಾಲಕನ ಮೇಲೆ ಹಲ್ಲೆ ನಡೆಸಿ 13 ಸಾವಿರ ರೂ. ಮೌಲ್ಯದ ಎರಡು ಮೊಬೈಲ್‌ಗಳನ್ನು ಕಳವು ಮಾಡಿ ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Renukaswamy Case: ಶೆಡ್‌ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.