Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Team Udayavani, Nov 25, 2024, 10:21 AM IST
ಬೆಂಗಳೂರು: ಮರಕೆಲಸಕ್ಕೆಂದು ಉಡುಪಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಖಾಸಗಿ ಹೋಟೆಲ್‌ನ ಬಾತ್‌ರೂಮ್‌ನಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉಡುಪಿಯ ಮುಲ್ಕಿಯ ಜಯ ರಾಮ್ (40) ಆತ್ಮಹತ್ಯೆ ಮಾಡಿಕೊಂಡವರು. ಶನಿವಾರ ತಡರಾತ್ರಿ ಕೋರಮಂಗಲದ ಖಾಸಗಿ ಹೋಟೆಲ್ ನಲ್ಲಿ ಘಟನೆ ನಡೆದಿದ್ದು, ಭಾನುವಾರ ಮುಂಜಾನೆ ಸಹೋದರ ವಾಸುದೇವ್ ಎಚ್ಚರಗೊಂಡು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಜಯರಾಮ್ ವಿಪರೀತ ಮದ್ಯ ವ್ಯಸನಿಯಾಗಿದ್ದು, ಇತ್ತೀಚೆಗೆ ಅವರ ಚಿಕ್ಕಮ್ಮ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಅದರಿಂದ ಜಯರಾಮ್ ಬಹಳ ಬೇಸರಗೊಂಡಿದ್ದರು. ಜತೆಗೆ ಕುಟುಂಬ ಸದಸ್ಯರು ಜಯರಾಮ್‌ಗೆ ಮದ್ಯ ಸೇವನೆ ಚಟ ಬಿಡಿಸಿದ್ದರು. ಈ ಮಧ್ಯೆ ಜಯರಾಮ್ ಸಹೋದರ ವಾಸುದೇವ್ ಹಾಗೂ ಇತರೆ ಇಬ್ಬರ ಜತೆ ಕೋರಮಂಗಲದ ಸಮೀಪದ ಹೋಟೆಲ್ ವೊಂದರ ಮರಕೆಲಸ ಮಾಡಲು ಶುಕ್ರವಾರ ಉಡುಪಿಯಿಂದ ಬೆಂಗಳೂರಿಗೆ ಬಂದಿದ್ದರು. ಕೋರಮಂಗಲದ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ಶನಿವಾರ ರಾತ್ರಿ ಎಲ್ಲರೂ ಊಟ ಮಾಡಿ ಮಲಗಿದ್ದಾರೆ. ಈ ವೇಳೆ ಜಯ ರಾಮ್ ಬಾತ್‌ರೂಮ್‌ಗೆ ಹೋಗಿ, ನಲ್ಲಿ ನೀರು ಆನ್ ಮಾಡಿ ಕಿಟಕಿಯ ಗ್ರೀಲ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಜಾನೆ ಸಹೋದರ ವಾಸುದೇವ್, ಬಾತ್‌ರೂಮ್ ಬಾಗಿಲು ಒಡಿದರೂ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಕೋರಮಂಗಲ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.