H. D. Kumaraswamy: ಪೆನ್ಡ್ರೈವ್ ತೋರಿಸಿ ಬ್ಲ್ಯಾಕ್ಮೇಲ್ ಎಚ್ಡಿಕೆ ವಿರುದ್ಧ ದೂರು
Team Udayavani, Oct 29, 2023, 12:26 PM IST
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪೆನ್ಡ್ರೈವ್ ತೋರಿಸಿ, ಅದನ್ನು ಬಿಡುಗಡೆ ಮಾಡದೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಕೀಲ ಅಮೃತೇಶ್ ವಿಧಾನಸೌಧ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
ಜು.7 ರಂದು ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ ಹಲವು ಇಲಾಖೆಗಳಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ. ಈ ಮಾಹಿತಿ ಇರುವ ಪೆನ್ಡ್ರೈವ್ ತನ್ನ ಬಳಿಯಿದೆ ಎಂದಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಮಾಹಿತಿಯನ್ನು ನೀಡಿಲ್ಲ. ಅಲ್ಲದೆ, ಪೆನ್ಡ್ರೈವ್ ತೋರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ನೀಡಲಾಗಿತ್ತು. ಆದರೆ, ಇದ್ಯಾವುದಕ್ಕೂ ಇದುವರೆಗೂ ಉತ್ತರ ಬಂದಿಲ್ಲ. ಪೆನ್ಡ್ರೈವ್ ಸ್ಪೀಕರ್ಗೆ ಅಥವಾ ಪೊಲೀಸರಿಗೂ ಇದುವರೆಗೂ ನೀಡಿಲ್ಲ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದವರು. ಈ ರೀತಿ ಮಾಡಿರುವುದು ಸರಿಯಲ್ಲ. ಈ ಹಿನ್ನೆಲೆ ಕುಮಾರಸ್ವಾಮಿ ವಿರುದ್ಧ ಬ್ಲ್ಯಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಹಾಗೂ ಎಕ್ಸಾಸ್ಟ್ರಾಕ್ಷನ್ ಆರೋಪದಡಿ ಕ್ರಮ ತೆಗೆದುಕೊಂಡು, ಜತೆಗೆ ಕುಮಾರಸ್ವಾಮಿಯವರ ಬಳಿ ಇರುವ ಪೆನ್ಡ್ರೈವ್ ಜಪ್ತಿ ಮಾಡಬೇಕು ಎಂದು ವಕೀಲ ಅಮೃತೇಶ್ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.